-ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.
-ಹೆಚ್ಚಿನ ಸುರಕ್ಷತೆಗಾಗಿ ಹೊಸ ವ್ಯವಸ್ಥೆ ಜಾರಿ.
ಎಸ್ಎಸ್ಎಲ್ಸಿಯಿಂದ ಹಿಡಿದು ಉನ್ನತ ಶಿಕ್ಷಣದ ಕೊನೆಯ ಹಂತದವರೆಗೂ ಎಲ್ಲ ವಿದ್ಯಾರ್ಥಿಗಳ ಶೈಕ್ಷಣಿಕ ದಾಖಲೆಗಳನ್ನು ಇನ್ಮುಂದೆ ಡಿಜಿಟಲ್ ರೂಪದಲ್ಲಿ ಸಂಗ್ರಹಿಸಿ ಇಡುವ ಡಿಜಿ ಲಾಕರ್ ವ್ಯವಸ್ಥೆಯ ಬಗ್ಗೆ ಡಿಸಿಎಂ ಡಾ. ಸಿ. ಎನ್ ಅಶ್ವತ್ಥ ನಾರಾಯಣ ಮಾಹಿತಿ ನೀಡಿದ್ದಾರೆ.
ಡಿಜಿ ಲಾಕರ್ ವ್ಯವಸ್ಥೆಯಿಂದಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ದಾಖಲೆಗಳು ಇನ್ಮುಂದೆ ಹೆಚ್ಚು ಸುರಕ್ಷಿತವಾಗಿ ಇರಲಿದೆ. ಈ ವ್ಯವಸ್ಥೆ ಅನುಷ್ಠಾನದ ಬಳಿಕ ರಾಜ್ಯದಲ್ಲಿ ಯಾವುದೇ ಮಾದರಿಯ ಕಾಗದ ರೂಪದ ಶೈಕ್ಷಣಿಕ ದಾಖಲೆಗೆ ಅವಕಾಶ ಇರೋದಿಲ್ಲ ಎಂದು ಅಶ್ವತ್ಥ ನಾರಾಯಣ ಹೇಳಿದ್ದಾರೆ.
ರಾಷ್ಟ್ರೀಯ ಶೈಕ್ಷಣಿಕ ದಾಖಲೆಗಳ ಸಂಗ್ರಹಗಾರದ ಕೇಂದ್ರ ಮಟ್ಟದ ಅಧಿಕಾರಿಗಳು ಹಾಗೂ ರಾಜ್ಯ ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆಗಿನ ಸಭೆ ಬಳಿಕ ಈ ಮಹತ್ವದ ಮಾಹಿತಿಯನ್ನು ನೀಡಿದ್ದಾರೆ.
ವಿದ್ಯಾರ್ಥಿಗಳ ಶೈಕ್ಷಣಿಕ ದಾಖಲೆಗಳನ್ನು ಭದ್ರವಾಗಿ ಇಡುವ ಸಲುವಾಗಿ ಈ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತಿದೆ. ಇದಕ್ಕೆ ರಾಷ್ಟ್ರೀಯ ಶೈಕ್ಷಣಿಕ ದಾಖಲೆಗಳ ಸಂಗ್ರಹಗಾರ ಎಂದು ಕರೆಯಲಾಗುತ್ತದೆ. ಅಲ್ಲದೇ ಪ್ರತಿ ವಿದ್ಯಾರ್ಥಿಯೂ ತನ್ನ ದಾಖಲೆಗಳನ್ನ ಪರಿಶೀಲನೆ ಮಾಡಬಹುದಾಗಿದೆ.
2003ರಿಂದ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಮಾರ್ಕ್ಸ್ ಕಾರ್ಡ್ ಗಳನ್ನು ಡಿಜಿಲಿಕರಣ ಮಾಡಲಾಗುತ್ತದೆ. ವಿದ್ಯಾರ್ಥಿಗಳ ಆಧಾರ್ ಕಾರ್ಡ್ ಹಾಗೂ ಇ ಕೆವೈಸಿ ಸಹಾಯದಿಂದ ಡಿಜಿ ಲಾಕರ್ ನಲ್ಲಿ ದಾಖಲೆಗಳನ್ನು ಪಡೆಯಬಹುದಾಗಿದೆ.