ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ: ಕಾರ್ಮಿಕ ದಿನ ಆಚರಣೆ
– ತೀರ್ಥಹಳ್ಳಿ ಬಂಟರ ಭವನದಲ್ಲಿ ಪ್ರತಿಭಾ ಪುರಸ್ಕಾರ, ಕಾರ್ಮಿಕರ ದಿನಾಚರಣೆ
– ಪೃಥ್ವಿಶ್ರಮ ಕಲ್ಲುಗಣಿ ಮತ್ತು ನಿರ್ಮಾಣ ಶ್ರಮಿಕರ ಸರ್ವೋದಯ ಸಂಘದಿಂದ ಮಾದರಿ ಕಾರ್ಯಕ್ರಮ
NAMMUR EXPRESS NEWS
ತೀರ್ಥಹಳ್ಳಿ: ತೀರ್ಥಹಳ್ಳಿಯ ಪೃಥ್ವಿಶ್ರಮ ಕಲ್ಲುಗಣಿ ಹಾಗೂ ನಿರ್ಮಾಣ ಶ್ರಮಿಕರ ಸರ್ವೋದಯ ಸಂಘದ ವತಿಯಿಂದ ತೀರ್ಥಹಳ್ಳಿಯ ಕೊಪ್ಪ ಸರ್ಕಲ್ ಬಂಟರ ಭವನದಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ನಡೆಯಿತು. ಸಾಧಕ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕರಾದ ಆರಗ ಜ್ಞಾನೇಂದ್ರ ಅವರು ನೆರವೇರಿಸಿದ್ದು ಪೃಥ್ವಿ ಶ್ರಮ ಕಲ್ಲುಗಣಿ ಹಾಗೂ ನಿರ್ಮಾಣ ಶ್ರಮಿಕರ ಸರ್ವೋದಯ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಎಸ್ ಸಭಾಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಗಣೇಶಪ್ಪ ಮಾತನಾಡಿ, ಈ ಸಂಘ ಅಧಿಕಾರಿಗಳು, ಕಾರ್ಮಿಕರ ಸಂಘಟನೆ ಮೂಲಕ ಜನರಿಗೆ ಸೌಲಭ್ಯ ಮಾಡಿಕೊಟ್ಟಿದ್ದಾರೆ. ಸಂಘ ಅತ್ಯುತ್ತಮವಾಗಿ ಸೇವೆ ಸಲ್ಲಿಸುತ್ತಿದೆ. ಎಲ್ಲರೂ ಈ ಸಂಘ ಕೆಲಸಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಡಾ.ಆರ್.ಎಂ.ಮಂಜುನಾಥ ಗೌಡ ಮಾತನಾಡಿ, ಮಕ್ಕಳಿಗೆ ಶಿಕ್ಷಣವೇ ಅಸ್ತಿ. ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ಕೊಡಿಸಬೇಕು. ಕಾರ್ಮಿಕರ ವರ್ಗದ ಶ್ರಮ ಅಪಾರ. ಕಾರ್ಮಿಕರ ಕಲ್ಯಾಣ ಇಲಾಖೆಯ ಸೌಲಭ್ಯವನ್ನು ಅರ್ಹರಿಗೆ ತಲುಪಿಸಬೇಕು ಎಂದರು.
1000 ನೋಂದಾಯಿತ ಕಾರ್ಮಿಕರಿದ್ದಾರೆ. ಕುರುವಳ್ಳಿ ಬಂಡೆ ತೀರ್ಥಹಳ್ಳಿಗೆ ಆದಾಯ ಸಿಗುತ್ತಿದೆ. 14000 ಮಂದಿ ಕಾರ್ಮಿಕರಿದ್ದಾರೆ.
ಸರ್ಕಾರ ಕೂಡ ಕಾರ್ಮಿಕರಿಗೆ ಅನೇಕ ಸೌಲಭ್ಯಗಳನ್ನು ನೀಡಿದೆ. ಮಂಜುನಾಥ್ ಮತ್ತು ತಂಡದ ಶ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಮಿಕ ನಿರೀಕ್ಷಕರಾದ ಸುಖಿತ ಕೆ ಸಿ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬಂಡೆ ವೆಂಕಟೇಶ್, ಪೃಥ್ವಿ ಶ್ರಮ ಕಲ್ಲು ಗಣಿ ಮತ್ತು ನಿರ್ಮಾಣ ಶ್ರಮಿಕರ ಸರ್ವೋದಯ ಸಂಘದ ಅಧ್ಯಕ್ಷರಾದ ಸತ್ಯವೇಲು ಲ್, ಪೃಥ್ವಿ ಶ್ರಮ ಕಲ್ಲುಗಣಿ ಹಾಗೂ ನಿರ್ಮಾಣ ಶ್ರಮಿಕರ ಸರ್ವೋದಯ ಸಂಘದ ಸದಸ್ಯರು, ಗ್ರಾಮಸ್ತರು, ಪೋಷಕರು ಹಾಜರಿದ್ದರು.
ಸರ್ವರ ಸಹಕಾರ ಕೋರಿದ ಮಂಜುನಾಥ್
ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಯನ್ನು ನುಡಿದ ಸಂಘದ ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಈ ಕಾರ್ಯಕ್ರಮ ಆಯೋಜನೆ ಮಾಡಲು ನಮ್ಮ ಸಂಘ ಮತ್ತು ನನ್ನ ಸ್ನೇಹಿತರು, ದಾನಿಗಳು ಸಹಕಾರ ನೀಡಿದ್ದಾರೆ. ಕಾರ್ಮಿಕರ ಮಕ್ಕಳನ್ನು ಪ್ರೋತ್ಸಾಹಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕೆಲವೊಂದು ಕಾರ್ಮಿಕ ಕುಟುಂಬ ವರ್ಗದವರು ತಮ್ಮ ಮಕ್ಕಳನ್ನು ಓದಿಸಲು ತುಂಬಾ ಶ್ರಮಪಡುತ್ತಿರುತ್ತಾರೆ, ಅಂತವರಿಗೆ ಈ ಕಾರ್ಯಕ್ರಮ ಸಹಕಾರವಾಗಲಿದ್ದು ಆದ್ದರಿಂದ ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಕಾರ್ಮಿಕರ ದಿನಾಚರಣೆ ಅಂಗವಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು ಎಂದರು.
ಮೇಲಿನ ಕುರುವಳ್ಳಿಯಲ್ಲಿ ನಾವು ಸಂಘದ ಚಟುವಟಿಕೆ ಹಾಗೂ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ಮೇಲಿನ ಕುರುವಳ್ಳಿಯ ಅಂಬೇಡ್ಕರ್ ಭವನದಲ್ಲಿ ಕಾರ್ಯಕ್ರಮವನ್ನು ಮಾಡಿಕೊಂಡು ಬಂದಿದ್ದೆವು. ಈ ಕಾರ್ಯಕ್ರಮ ಈಗ ದೊಡ್ಡದಾಗಿ ನಡೆಯುತ್ತಿದೆ. ನಿಮ್ಮೆಲ್ಲರ ಸಹಕಾರ, ಮುಂದೆ ಕೂಡ ಹೀಗೆ ಇರಲಿ ಎಂದರು.
ತೀರ್ಥಹಳ್ಳಿ ವಿದ್ಯಾರ್ಥಿಗಳ ಬಗ್ಗೆ ಶಾಸಕರ ಮೆಚ್ಚುಗೆ ಮಾತು
ಉದ್ಘಾಟಕರಾದ ಶಾಸಕ ಆರಗ ಜ್ಞಾನೇಂದ್ರ
ಮಾತನಾಡಿ, ಶಿವಮೊಗ್ಗ ಜಿಲ್ಲೆಯಲ್ಲಿ ತೀರ್ಥಹಳ್ಳಿ ತಾಲೂಕು ಪ್ರಥಮ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಯಲ್ಲಿ ಅತಿ ಹೆಚ್ಚು ಅಂಕಗಳಿಸಿದ್ದು ಸಂತೋಷದ ವಿಷಯ. ಬಡವರ ಮಕ್ಕಳು ಮತ್ತು ಕಾರ್ಮಿಕರ ಮಕ್ಕಳು ಅತ್ಯಂತ ಹೆಚ್ಚು ಅಂಕಗಳನ್ನು ಪಡೆದು ಈ ಸಾಲಿನಲ್ಲಿ ಉತ್ತೀರ್ಣರಾಗಿದ್ದಾರೆ ಎಂದರು.