ಸಚಿವ ಜಾರ್ಜ್ ಅವರು ಕಾಣೆಯಾಗಿದ್ದಾರೆ!
– ಡೆಂಗ್ಯೂ ಪ್ರಕರಣ ಹೆಚ್ಚಳ: ಸಭೆಯನ್ನೇ ಮಾಡದ ಸಚಿವರು, ಶಾಸಕರು
– ಬಿಜೆಪಿಯಿಂದ ಪೋಸ್ಟರ್ ಅಭಿಯಾನ: ಇನ್ನಾದ್ರೂ ಬರ್ತಾರಾ ಜಾರ್ಜ್?
NAMMUR EXPRESS NEWS
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾದ್ಯಂತ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು. ಇದನ್ನ ನಿಯಂತ್ರಿಸುವಲ್ಲಿ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಚಿಕ್ಕಮಗಳೂರು ಜಿಲ್ಲೆಯ ಶಾಸಕರುಗಳು ಕನಿಷ್ಠ ಆರೋಗ್ಯ ಇಲಾಖೆಯೊಂದಿಗೆ ಈ ಸಂಬಂಧ ಒಂದೊಂದು ಸಭೆಯನ್ನು ಮಾಡದೆ ನಿರ್ಲಕ್ಷ್ಯ ವಹಿಸಿರುವುದು ಮತ್ತು ಜಿಲ್ಲೆಯಲ್ಲಿ ಇಷ್ಟೆಲ್ಲ ಸಮಸ್ಯೆಯಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಜೆ ಜಾರ್ಜ್ರವರರು ಜಿಲ್ಲೆಗೆ ಬಾರದೇ ಇರುವುದನ್ನು ಖಂಡಿಸಿ ರಾಜ್ಯ ಸರ್ಕಾರದ ಗಮನ ಸೆಳೆಯುವ ಸಲುವಾಗಿ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ಅಭಿಯಾನ ಮಾಡುತ್ತಿದೆ.
ಡೆಂಗ್ಯೂ ಜ್ವರಕ್ಕೆ ಕಾಫಿನಾಡು ತತ್ತರ, ಕಾಣೆಯಾಗಿದ್ದಾರೆ ಜಿಲ್ಲಾ ಉಸ್ತುವಾರಿ ಸಚಿವರು ಎಂಬ ವಾಕ್ಯದೊಂದಿಗೆ
#ChikkamagalurumissingKJGeorge ಎಂಬ ಹ್ಯಾಷ್ ಟ್ಯಾಗ್ ಬಳಸಿ ವಾಟ್ಸ್ಆಪ್,ಫೇಸ್ಬುಕ್,ಇನ್ಟಾಗ್ರಾಂ,ಟ್ವೀಟರ್ ಇನ್ನುಳಿದ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ಹಾಕುವುದರ ಮೂಲಕ ಸರ್ಕಾರ ಹಾಗೂ ಜಿಲ್ಲೆಯ ಶಾಸಕರು, ಉಸ್ತುವಾರಿಸಚಿವರ ಗಮನ ಸೆಳೆಯುವ ಪ್ರಯತ್ನವನ್ನು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಮಾಡುತ್ತಿದೆ. ಇದೀಗ ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಹೋರಾಟ ಶುರುವಾಗಿದೆ.