-ಕನಿಷ್ಠ ಹಾಜರಾತಿ ಇಲ್ಲದಿದ್ದರೂ ವಾರ್ಷಿಕ ಪರೀಕ್ಷೆಗೆ ಅವಕಾಶ
-ಶಿಕ್ಷಣ ಇಲಾಖೆಯ ಮಹತ್ವದ ನಿರ್ಧಾರ
ಬೆಂಗಳೂರು : ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದೆ. ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಮತ್ತು ಡಿಪ್ಲೊಮಾ ಕೋರ್ಸ್ ಗಳ ವಾರ್ಷಿಕ ಪರೀಕ್ಷೆಗೆ ಕನಿಷ್ಠ ಹಾಜರಾತಿ ಇಲ್ಲದಿದ್ದರೂ ಅವಕಾಶ ನೀಡವಂತಹ ಮಹತ್ವದ ನಿರ್ಧಾರ ಕೈ ಗೊಂಡಿದೆ.
ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಶೈಕ್ಷಣಿಕ ಸಾಲಿನಲ್ಲಿ ಶಾಲೆ-ಕಾಲೇಜುಗಳು ಬಂದ್ ಆಗಿದ್ದು, ಕೆಲವು ದಿನಗಳಿಂದ ಶಾಲೆ, ಕಾಲೇಜುಗಳು ಆರಂಭವಾಗಿದ್ದು, ವಾರ್ಷಿಕ ಪರೀಕ್ಷೆಗೆ ಕನಿಷ್ಠ ಹಾಜರಾತಿ ಇಲ್ಲದಿದ್ದರೂ ಅವಕಾಶ ನೀಡಲು ಶಿಕ್ಷಣ ಇಲಾಖೆ ಮುಂದಾಗಿದೆ ಎನ್ನಲಾಗಿದೆ.
ಈ ಹಿಂದೆ ವಾರ್ಷಿಕ ಪರೀಕ್ಷೆಗೆ ಹಾಜರಾಗಲು ಶೇ. 70 ರಷ್ಟು ಮತ್ತು ಶೇ. 75 ಕ್ಕಿಂತ ಹೆಚ್ಚಿನ ಹಾಜರಾತಿ ಕಡ್ಡಾಯವಾಗಿ ಇರಬೇಕಿತ್ತು. ಆದರೆ ಕೊರೋನಾ ಕಾರಣ ತರಗತಿಗೆ ಹೋಗಲಾಗದ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದೆ.
ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಶಾಲಾ-ಕಾಲೇಜು ತಡವಾಗಿ ಆರಂಭವಾಗಿರುವ ಹಿನ್ನೆಲೆಯಲ್ಲಿ ಹಾಜರಾತಿ ಇಲ್ಲದಿದ್ದರೂ ವಾರ್ಷಿಕ ಪರೀಕ್ಷೆಗೆ ಅವಕಾಶ ನೀಡಲು ಶಿಕ್ಷಣ ಇಲಾಖೆ ನಿರ್ಧರ ಮಾಡಿದೆ ಎಂದು ಹೇಳಲಾಗುತ್ತಿದೆ.