ಹೆಚ್ಚಾಗಲಿದೆ ಮುಂಗಾರು ಮಳೆ
– ವಾರದಿಂದ ಹೆಚ್ಚಾಗಲಿದೆ ಮಳೆ ಅಬ್ಬರ: ಹವಾಮಾನ ಇಲಾಖೆ
– ರೈತರ ಮೊಗದಲ್ಲಿ ಖುಷಿ: ಕೃಷಿ ಚಟುವಟಿಕೆ ಶುರು
NAMMUR EXPRESS NEWS
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದ ಹಲವು ಸ್ಥಳಗಳಲ್ಲಿ ಸಾಧಾರಣ ಮಳೆಯೊಂದಿಗೆ ಗುಡುಗು-ಗಾಳಿ ಸಾಥ್ ನೀಡಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು ಹಾಗೂ ಕೊಪ್ಪಳ, ಯಾದಗಿರಿ, ವಿಜಯಪುರ ಪ್ರತ್ಯೇಕ ಸ್ಥಳದಲ್ಲಿ ಹಗುರವಾದ ಮಳೆಯಾಗುವ ನಿರೀಕ್ಷೆ ಇದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಬೆಂ. ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಾಮರಾಜನಗರ, ಮಂಡ್ಯ, ಮೈಸೂರು, ಕೊಡಗು, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ರಾಮನಗರ, ತುಮಕೂರು ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕೃಷಿ ಚುರುಕು: ರೈತರ ಮೊಗದಲ್ಲಿ ಸಂತಸ!
ರಾಜ್ಯದ ಎಲ್ಲೆಡೆ ಮಳೆ ಚುರುಕುಗೊಂಡಿದ್ದು, ಎಲ್ಲೆಡೆ ಕೃಷಿ ಚುರುಕುಗೊಂಡಿದೆ. ಕೃಷಿ ಚಟುವಟಿಕೆ ಗರಿಗೆದರಿದೆ. ಮಳೆ ನಿರೀಕ್ಷೆಯಲ್ಲಿದ್ದ ಕೃಷಿಕರು ಈಗ ಭೂಮಿ ಹದಗೊಳಿಸುವ ಕಾರ್ಯದಲ್ಲಿದ್ದಾರೆ.