ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ರೆ ಇನ್ಮುಂದೆ ಜೈಲು!
– ಕಾನೂನು ಜಾರಿ ಮಾಡಿದ ನರೇಂದ್ರ ಮೋದಿ ಸರ್ಕಾರ
– ಕನಿಷ್ಠ 3ರಿಂದ 5 ವರ್ಷ ಜೈಲು ಶಿಕ್ಷೆ, 10 ಲಕ್ಷ ರೂ. ದಂಡ
ನವ ದೆಹಲಿ: ದೇಶದ ವಿವಿಧ ಕಡೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಲಕ್ಷ ಲಕ್ಷ ಯುವ ಜನರ ಬದುಕನ್ನು ಕತ್ತಲೆಯಲ್ಲಿಟ್ಟಿದೆ.
ಇದೀಗ ಕೇಂದ್ರ ಸರ್ಕಾರ ಇಂತಹ ಅಕ್ರಮಗಳಿಗೆ ಕಡಿವಾಣ ಹಾಕಲು ಹೊಸ ಕಾಯ್ದೆ ಜಾರಿಗೆ ಮುಂದಾಗಿದೆ.
ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುವ ತಪ್ಪಿತಸ್ಥರಿಗೆ ಕನಿಷ್ಠ 3ರಿಂದ 5 ವರ್ಷ ಜೈಲು ಶಿಕ್ಷೆ, 10 ಲಕ್ಷ ರೂ. ದಂಡವನ್ನು ಈ ಕಾಯ್ದೆಯು ಹೊಂದಿದೆ. ಯಾವುದೇ ವ್ಯಕ್ತಿ, ಗುಂಪು, ಸಂಸ್ಥೆ, ಪರೀಕ್ಷಾ ಅಧಿಕಾರಿಗಳು ಕೃತ್ಯವೆಸಗಿದಲ್ಲಿ ಕನಿಷ್ಠ 5-10 ವರ್ಷ ಜೈಲು, 1 ಕೋಟಿ ರೂ. ದಂಡ ವಿಧಿಸಲಾಗುತ್ತದೆ. ಕಾಯ್ದೆಯಲ್ಲಿ ಯುಪಿಎಸ್ಸಿ, ಎಸ್ಎಸ್ಸಿ, ರೈಲ್ವೇ, ಬ್ಯಾಂಕಿಂಗ್, ಎನ್ಟಿಎ ನಡೆಸುವ ಕಂಪ್ಯೂಟರ್ ಆಧಾರಿತ ಪರೀಕ್ಷೆಗಳು ಒಳಗೊಂಡಿವೆ.