ಕಾಫಿನಾಡಲ್ಲಿ ಬಿಜೆಪಿ ಕಾರ್ಯಕರ್ತರು ಅರೆಸ್ಟ್!
– ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿ ಪೋಸ್ಟರ್ ಅಂಟಿಸಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರ ಬಂಧನ
– ತುರ್ತು ಪರಿಸ್ಥಿತಿ ಹೇರಿದ ದಿನ ಎಂದು ಬಿಜೆಪಿ ಯುವ ಮೋರ್ಚಾದಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನ
NAMMUR EXPRESS NEWS
ದೇಶಕ್ಕೆ ತುರ್ತು ಪರಿಸ್ಥಿತಿ ಹೇರಿದ ಕರಾಳ ದಿನ ಖಂಡಿಸಿ 50 ವರ್ಷಗಳಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಚೇರಿಗೆ ಪೋಸ್ಟರ್ ಅಂಟಿಸಲು ಮುಂದಾದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಕೈ ಕಚೇರಿಯತ್ತ ತೆರಳಲು ಮುಂದಾದ ವೇಳೆ ಅರೆಸ್ಟ್ ಮಾಡಿದ ಪೊಲೀಸರ ವಿರುದ್ಧವೇ ಕೇಸರಿ ಪಡೆ ಘೋಷಣೆ ಕೂಗಿದೆ. ಇಂದಿರಾಗಾಂಧಿ ತುರ್ತು ಪರಿಸ್ಥಿತಿ ಹೇರಿದ ದಿನ ಹಿನ್ನೆಲೆ ಬಿಜೆಪಿ ಯುವ ಮೋರ್ಚಾದಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಲಾಯಿತು. ಕೈ ಕಚೇರಿಗೆ ಕರಪತ್ರ ಅಂಟಿಸಲು ಬಿಜೆಪಿ ಪಕ್ಷದ 20 ಕ್ಕೂ ಹೆಚ್ಚು ಯುವ ಮೋರ್ಚಾ ಕಾರ್ಯಕರ್ತರು ತೆರಳಿದಾಗ ರಸ್ತೆಯಲ್ಲೇ ಪೊಲೀಸರು ತಡೆದರು ಈ ವೇಳೆ ಪೊಲೀಸರ ವಿರುದ್ಧವೇ ಘೋಷಣೆ ಕೂಗಿದರು.
ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಕಲ್ಮರುಡಪ್ಪ ನೇತೃತ್ವದಲ್ಲಿ ಹೋರಾಟ ಹಮ್ಮಿಕೊಳ್ಳಲಾಗಿತ್ತು ಪೊಲೀಸರ ಸರ್ಪಗಾವಲಿನಲ್ಲೂ ಕರಪತ್ರ ಅಂಟಿಸಲು ಯತ್ನಿಸಲಾಯಿತು. ಬೆಳಗ್ಗೆ ಚಿಕ್ಕಮಗಳೂರು ನಗರದ ಅಲ್ಲಲ್ಲಿ ಕರಪತ್ರ ಅಂಟಿಸಿದ್ದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕ್ಷಮೆ ಕೇಳಬೇಕು ಎಂದು ಕರಪತ್ರ ಅಂಟಿಸಿದ್ದ ಬಿಜೆಪಿ ಯುವಮೋರ್ಚಾ ರನ್ನು ಪೊಲೀಸರು ಹುಡುಕುತ್ತಿದ್ದರು. ಸ್ವಾರ್ಥಕ್ಕಾಗಿ ಕಾಂಗ್ರೆಸ್ ಪಕ್ಷವು ಸಂವಿಧಾನ ದುರ್ಬಳಕೆ ಮಾಡಿಕೊಂಡಿದೆ ಎಂದು ಬಿಜೆಪಿ ಮುಖಂಡರು ಕಿಡಿಕಾರಿದ್ದರು. ತುರ್ತು ಪರಿಸ್ಥಿತಿ ಹೇರಿದ್ದ ಇಂದಿರಾಗಾಂಧಿ ವಿರುದ್ಧವೂ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದರು. ಚಿಕ್ಕಮಗಳೂರು ನಗರದ ಐ.ಜಿ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿ ಸಮೀಪಕ್ಕೆ ಹೋಗುವ ಮುನ್ನವೇ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ.