ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ: ರೆಡ್ ಅಲರ್ಟ್!
– ಎಲ್ಲೆಡೆ ಜಿಲ್ಲಾಡಳಿತ ಸಜ್ಜು: ಜನರಿಗೆ ಎಚ್ಚರಿಕೆ
– ವಿದ್ಯುತ್ ತಂತಿ, ಹಳ್ಳ, ನದಿ ಹತ್ತಿರ ಹೋಗಬೇಡಿ..!
NAMMUR EXPRESS NEWS
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆ ಮುಂದುವರಿದಿದ್ದು, ದಿನಾಂಕ: 28-06-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುತ್ತದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.
1) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ದಿನಾಂಕ: 28-06-2024 ರಂದು ರಜೆಯನ್ನು ಘೋಷಿಸಲಾಗಿದೆ.
2) ಸಂಭಾವ್ಯ ಪ್ರವಾಹ/ಭೂಕುಸಿತ ಪ್ರದೇಶಗಳನ್ನು ಗುರುತಿಸಿ. ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.
3) ನೀರು ಇರುವ ತಗ್ಗು ಪ್ರದೇಶ. ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸುವುದು.
4) ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.
5) ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿಗಳ/ತೋಡುಗಳ ಮತ್ತು ವಿದ್ಯುತ್ ಕಂಬ/ತಂತಿ ಸಮೀಪ ಹೋಗದಂತೆ ಎಚ್ಚರಿಕೆ ವಹಿಸುವುದು.
6) ಸಂಭಾವ್ಯ ಹಾನಿಯನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಸಾರ್ವಜನಿಕರು ಅಪಾಯಕಾರಿ ಸನ್ನಿವೇಶಗಳಿಂದ ದೂರವಿದ್ದು, ಜಿಲ್ಲಾಡಳಿತದ ಸಲಹೆ/ಸೂಚನೆಗಳನ್ನು ಪಾಲಿಸುವುದು.
7) ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯತ್/ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿಯನ್ನು ನೀಡುವುದು.
ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸುವುದು. ಜಿಲ್ಲಾ ತುರ್ತು ಸೇವೆಗೆ ಟೋಲ್ ಫ್ರೀ ಸಂ. 24*7 ಕಂಟ್ರೋಲ್ ರೂಂ – 1077 / 0824-2442590 ಇದಕ್ಕೆ ಸಂಪರ್ಕಿಸಬಹುದೆಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.