ಮಂಡ್ಯದಲ್ಲಿ ಬಿಜೆಪಿ ಹೋರಾಟ!
– ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿರುದ್ದ ಆಕ್ರೋಶ
– ಮಂಡ್ಯ ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ಎನ್ ಎಸ್ ಇಂದ್ರೇಶ್ ನೇತೃತ್ವದಲ್ಲಿ ಪ್ರತಿಭಟನೆ
NAMMUR EXPRESS NEWS
ಮಂಡ್ಯ: ವಾಲ್ಮೀಕಿ ಅಭಿವೃದ್ಧಿ (ಎಸ್ ಟಿ) ನಿಗಮದ 187 ಕೋಟಿ ರೂ ಗಳನ್ನು ದುರ್ಬಳಕೆ ಮಾಡಿದ ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ಭ್ರಷ್ಟಾಚಾರದ ವಿರುದ್ಧ ಭಾರತೀಯ ಜನತಾ ಪಾರ್ಟಿ ಮಂಡ್ಯ ಜಿಲ್ಲೆಯ ವತಿಯಿಂದ ಸಂಜಯ್ ಸರ್ಕಲ್ ನಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೃಹತ್ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲಾಯಿತು.
ಮಂಡ್ಯ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಡಾ.ಎನ್ ಎಸ್ ಇಂದ್ರೇಶ್ ರವರ ನೇತೃತ್ವದಲ್ಲಿ ಹಾಗೂ ನಿಕಟಪೂರ್ವ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷರಾದ ನಂಜುಂಡೇಗೌಡ ಹಾಗೂ ರಾಜ್ಯ ವಿಶೇಷ ಆಹ್ವಾನಿತ ಪ್ರತಿನಿಧಿ ಡಾ. ಸಿದ್ದರಾಮಯ್ಯ ಜಿ ಹಾಗೂ ಜಿಲ್ಲೆ ರೈತ ಮೋರ್ಚಾ ಅಧ್ಯಕ್ಷರಾದ ಅಶೋಕ್ ಜಯರಾಮ್, ಜಿಲ್ಲೆಯ ಪ್ರಧಾನ ಕಾರ್ಯದರ್ಶಿಗಳಾದ ಆನಂದ್ ಹಾಗೂ ವಿವೇಕ್ ಜಿಲ್ಲಾ ಕಾರ್ಯದರ್ಶಿಯಾದ ರಾಶಿ ಸಿದ್ದರಾಜುಗೌಡ ಸೇರಿ ಎಲ್ಲಾ ಮಂಡಲಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಜಿಲ್ಲೆಯ ಎಲ್ಲಾ ಪದಾಧಿಕಾರಿಗಳು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು