-ತೋಟಗಾರಿಕೆ ಇಲಾಖೆಯಿಂದ ಮಹತ್ವದ ನಿರ್ಧಾರ
-ಈ ಬಾರಿಯ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ ಬಂದ್
ಬೆಂಗಳೂರು, ಜನವರಿ 18: ತೋಟಗಾರಿಕಾ ಇಲಾಖೆ ಹಾಗೂ ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಈ ವರ್ಷ ಸಣ್ಣ ಪ್ರಮಾಣದಲ್ಲಿ ಫಲಪುಷ್ಪ ಪ್ರದರ್ಶನ ನಡೆಸಬೇಕು ಎಂದು ನಿರ್ಧರಿಸಲಾಗಿತ್ತು. ಆದರೆ, ರೂಪಾಂತರಿ ಕೊರೊನಾ ಭೀತಿಯು ಜನರಲ್ಲಿ ಕಾಡುತ್ತಿದ್ದು, ಫಲಪುಷ್ಪ ಪ್ರದರ್ಶನ ಹಮ್ಮಿಕೊಳ್ಳುವುದು ಬೇಡ ಎಂಬ ನಿರ್ಧಾರಕ್ಕೆ ಬರಲಾಗಿದೆ. ಲಾಲ್ಬಾಗ್ನಲ್ಲಿ ನಡೆಯಬೇಕಿದ್ದ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನವನ್ನು ನಡೆಸದಂತೆ ತೋಟಗಾರಿಕಾ ಇಲಾಖೆ ನಿರ್ಧರಿಸಿದೆ.
ಜೊತೆಗೆ ಮೈಸೂರು ಉದ್ಯಾನ ಕಲಾಸಂಘ ಸಹ ಫಲಪುಷ್ಪ ಪ್ರದರ್ಶನ ಆಯೋಜಿಸುವುದು ಬೇಡ ಎಂದು ಹೇಳಿತ್ತು. ತೋಟಗಾರಿಕೆ ಸಚಿವ ನಾರಾಯಣಗೌಡ ಅವರ ಸಮ್ಮುಖದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಆಗಸ್ಟ್ನಲ್ಲಿಯೂ ಪ್ರದರ್ಶನ ರದ್ದಾಗಿತ್ತು, ಅಲ್ಲದೆ ಎರಡು ಮೂರು ತಿಂಗಳ ಮೊದಲೇ ಪೂರ್ವ ಸಿದ್ಧತೆಗಳು ನಡೆಯಬೇಕಿತ್ತು.
ಈ ಬಾರಿ ಸಿದ್ಧತೆಗಳನ್ನು ನಡೆಸಲಾಗಿಲ್ಲ.ಹಣವೂ ಇಲ್ಲ ಸರಳವಾಗಿ ಮಾಡಿದರೆ ಜನ ಬರುವುದು ಅನುಮಾನ, ಹೀಗಾಗಿ ಪ್ರದರ್ಶನವನ್ನೇ ರದ್ದುಗೊಳಿಸುವಂತೆ ಮನವಿ ಮಾಡಲಾಗಿತ್ತು ಎಂದು ಮೈಸೂರು ಉದ್ಯಾನ ಕಲಾಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.