-ನೂತನ ಸಚಿವರಿಗೆ ಖಾತೆ ಹಂಚಿಕೆ
-ಇಂದು ಸಿ.ಎಂ ಬಿ.ಎಸ್ ವೈ ಮಹತ್ವದ ಸಭೆ
ಬೆಂಗಳೂರು : ನೂತನ ಸಚಿವರಿಗೆ ಖಾತೆ ಹಂಚಿಕೆ ಸಂಬಂಧ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಿರಿಯ ಸಚಿವರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲು ಸಿಎಂ ಬಿ.ಎಸ್. ಯಡಿಯೂರಪ್ಪ ಈಗಾಗಲೇ ಮುಹೂರ್ತ ಫಿಕ್ಸ್ ಮಾಡಿದ್ದಾರೆ. ಇಂದು ಹಿರಿಯ ಸಚಿವರೊಂದಿಗೆ ಸಭೆ ನಡೆಸಲಿದ್ದು, ಬಳಿಕ ಖಾತೆ ಹಂಚಿಕೆ ಪ್ರಕಟ ಮಾಡುವುದಾಗಿ ತಿಳಿಸಿದ್ದಾರೆ
ಸಿಎಂ ಬಿ.ಎಸ್. ಯಡಿಯೂರಪ್ಪ ಬಳಿಯೇ 13 ಖಾತೆಗಳಿದ್ದು, ಸಭೆ ಬಳಿಕ ಸಿಎಂ ಇಂದು ಸಂಜೆ ಅಥವಾ ನಾಳೆ ಖಾತೆ ಹಂಚಿಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.