ಇನ್ನು ಮಳೆ ಕಡಿಮೆ ಆಗಲ್ಲ!.. ಹುಷಾರು!
– ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರಿ ಮಳೆ
– ಗಾಳಿ ಸಹಿತ ಬಾರಿ ಮಳೆ: 11 ಜಿಲ್ಲೆಗಳಿಗೆ ರೆಡ್ ಅಲರ್ಟ್
– 15 ದಿನದಿಂದ ಬಿಡದ ಮಳೆ: ಜನಜೀವನ ಸಂಪೂರ್ಣ ಅಸ್ತವ್ಯಸ್ತ
NAMMUR EXPRESS NEWS
ಬೆಂಗಳೂರು: ಮಳೆಗಾಲ ಈ ಸಲ ಭಾರೀ ಅವಾಂತರ ಸೃಷ್ಟಿ ಮಾಡಿದ್ದು ಸಾವಿರಾರು ಕೋಟಿ ನಷ್ಟ ಮಾಡಿದೆ. ಎಲ್ಲಾ ಕಡೆ ರಸ್ತೆ, ಸೇತುವೆ, ಕಟ್ಟಡ ಕುಸಿಯುತ್ತಿದೆ.
15 ದಿನದಿಂದ ಬಿಡದ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಈ ನಡುವೆ ರಾಜ್ಯಾದ್ಯಂತ ಭಾರಿ ಮಳೆಯಾಗಲಿದ್ದು, ಮುಂಜಾಗ್ರತಾ ದೃಷ್ಟಿಯಿಂದ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಕರ್ನಾಟಕದ ಕರಾವಳಿಯಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದೆಡೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡು ಜಿಲ್ಲೆಯಾದ್ಯಂತ ಭಾರೀ ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ರಾಜಧಾನಿ ಬೆಂಗಳೂರಿನಲ್ಲಿ ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನಗಳು 28 ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
– ಗಾಳಿ ಸಹಿತ ಭಾರಿ ಮಳೆ, ರೆಡ್ ಅಲರ್ಟ್ ಘೋಷಣೆ
ನಿರಂತರ ಗಾಳಿ ಜತೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ ಮತ್ತು ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಶಾಲೆಗಳಿಗೆ ರಜೆ ವಾರದಿಂದ ರಜೆ
ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಕಳೆದೊಂದು ವಾರದಿಂದ ಶಾಲೆಗಳಿಗೆ ರಜೆ ನೀಡಲಾಗಿದೆ. ಮಕ್ಕಳ ಹಿತದೃಷ್ಟಿಯಿಂದ ಶಾಲೆ ಓಪನ್ ಆಗಿಲ್ಲ. ಇನ್ನು ಹೀಗೆ ಆದರೆ ರಜೆ ಮುಂದುವರಿಯಲಿದೆ.