-ಶೇ 25 ರಿಂದ 30 ರಷ್ಟು ಕಡಿಮೆ ಮಾಡಲು ಶಿಫಾರಸು
-ಶೀಘ್ರವೇ ಸರ್ಕಾರದಿಂದ ಅಧಿಕೃತ ಆದೇಶ
ಬೆಂಗಳೂರು: ರಾಜ್ಯದ ಖಾಸಗಿ ಶಾಲೆಗಳ ಶುಲ್ಕವನ್ನು ಶೇ.25ರಿಂದ 30 ಕಡಿತ ಮಾಡಲು ಶಿಫಾರಸು ಮಾಡಿ ಶಿಕ್ಷಣ ಇಲಾಖೆ ಸರ್ಕಾರಕ್ಕೆ ವರದಿ ಸಲ್ಲಿಸಿದೆ.
ಇತ್ತೀಚಿಗೆ ಶುಲ್ಕ ವಿಚಾರವಾಗಿ ಪಾಲಕರು ಮತ್ತು ಖಾಸಗಿ ಶಾಲೆಗಳ ಜತೆ ನಡೆದ ಸಭೆಯಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಶಿಕ್ಷಣ ಸಚಿವರಿಗೆ ವರದಿ ಸಲ್ಲಿಸಲಾಗಿದೆ. ವರದಿ ಪರಿಶೀಲಿಸಿ ರಾಜ್ಯ ಸರ್ಕಾರ ಶೀಘ್ರದಲ್ಲೇ ನಿರ್ಧಾರ ಪ್ರಕಟಿಸುವುದಾಗಿ ತಿಳಿದು ಬಂದಿದೆ. ಶುಲ್ಕ ಸಂಬಂದಿಸಿದಂತೆ ಸರ್ಕಾರಕ್ಕೆ ಈಗಾಗಲೇ ವರದಿ ಯನ್ನು ಸಲ್ಲಿಸಿದ್ದೇನೆ. ವರದಿ ನೋಡಿ ಅಧಿಕೃತ ಆದೇಶವನ್ನು ಸರ್ಕಾರ ಶೀಘ್ರವೇ ಹೊರಡಿಸಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ವಿ.ಅನ್ಬು ಕುಮಾರ್ ಅವರು ತಿಳಿಸಿದ್ದಾರೆ.