ಟಾಪ್ 3 ನ್ಯೂಸ್
ಮೈಸೂರು: ನಿರಂತರ ಮಳೆಗೆ ಮೈಸೂರಿನ ಒಲಂಪಿಯಾ ಚಿತ್ರಮಂದಿರದ ಗೋಡೆ ಕುಸಿತ ನಾಲ್ಕು ಜನರು ಗಂಭೀರ.
– ಮೈಸೂರು: ಏಳಿಗೆ ಸಹಿಸದ ಸಂಬಂಧಿಕರು, ಮನೆಗೆ ನುಗ್ಗಿ ಮಹಿಳೆಯನ್ನ ಕೊಂದರು
– ಹಾಸನ : ಭಾರಿ ಮಳೆಗೆ ಸೋರುತ್ತಿರುವ ಗ್ರಂಥಾಲಯ
NAMMUR EXPRESS NEWS
ಮೈಸೂರು: ನಿರಂತರ ಮಳೆಗೆ ಮೈಸೂರಿನ ಒಲಂಪಿಯಾ ಚಿತ್ರಮಂದಿರದ ಹಿಂಬದಿ ಗೋಡೆ ಕುಸಿದು ಬಿದ್ದಿದೆ. ಚಿತ್ರಮಂದಿರ ಪಕ್ಕದಲ್ಲೇ ಬೀದಿ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದ ನಾಲ್ವರು ಗಾಯಗೊಂಡಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಕೆಆರ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸೋಮವಾರ ಮಧ್ಯಾಹ್ನ ಈ ದುರ್ಘಟನೆ ನಡೆದಿದ್ದು, ತಬರೀಸ್ ಮತ್ತು ಅರ್ಮಾನ್ ಎಂಬುವವರು ಗಂಭೀರವಾಗಿ ಗಾಯಗೊಂಡವರು. ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳ ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಗೋಡೆ ಕೆಳಗೆ ಬಿದ್ದ ಪರಿಣಾಮ ಬಟ್ಟೆ ಅಂಗಡಿಯ ಸ್ಟಾಲ್ಗಳು ನೆಲಕಚ್ಚಿವೆ. ಜೆಸಿಬಿ ಯಂತ್ರದ ಮೂಲಕ ತೆರವು ಕಾರ್ಯಾಚರಣೆ ನಡೆಯುತ್ತಿದೆ.
– ಮೈಸೂರು: ಏಳಿಗೆ ಸಹಿಸದ ಸಂಬಂಧಿಕರು, ಮನೆಗೆ ನುಗ್ಗಿ ಮಹಿಳೆಯನ್ನ ಕೊಂದರು
ಮೈಸೂರು : ದಿಟ್ಟತನದಿಂದ ಪ್ರಾಮಾಣಿಕವಾಗಿ ಬದುಕಿದ್ದೇ ಮುಳುವಾಗಿದ್ದು, ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಚೌಥಿ ಗ್ರಾಮದಲ್ಲಿ ಸಂಬಂಧಿಕರೇ ಸೇರಿಕೊಂಡು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ. ಭಾಗ್ಯವತಿ(32) ಮೃತ ಮಹಿಳೆ. ಚೌಥಿ ಗ್ರಾಮದ ಬಸವರಾಜು ಹಾಗೂ ಯಶೋಧಮ್ಮ ದಂಪತಿ ಪುತ್ರಿಯಾದ ಇವರಿಗೆ ಸಂಪತ್ ಕುಮಾರ್ ಎಂಬುವವರ ಜೊತೆ ಮದುವೆ ಮಾಡಲಾಗಿತ್ತು. ಇಬ್ಬರು ಗಂಡು ಮಕ್ಕಳು ಕೂಡ ಇದ್ದರು. ಎಲ್ಲವೂ ಚೆನ್ನಾಗಿತ್ತು. ಆದ್ರೆ, 5 ವರ್ಷದ ಹಿಂದೆ ಪತಿ ಸಂಪತ್ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಪತಿ ಕಳೆದುಕೊಂಡ ಭಾಗ್ಯವತಿ ಧೃತಿಗೆಡದೆ ಜೀವನ ಕಟ್ಟಿಕೊಂಡಿದ್ದರು.ಇನ್ನು ಮೃತ ಮಹಿಳೆ, ಪತಿ ಇಲ್ಲ ಎಂದು ಯೋಚಿಸುತ್ತಾ ಕುಳಿತುಕೊಳ್ಳದೆ, ದಿಟ್ಡತನದಿಂದ ತನ್ನ ಕಾಲ ಮೇಲೆ ತಾನು ನಿಂತು ಎಲ್ಲರೂ ಹುಬ್ಬೇರಿಸುವಂತೆ ಬದುಕು ಕಟ್ಟಿಕೊಂಡಿದ್ದರು. ಇದ್ದ ಎರಡುವರೆ ಎಕರೆ ಜಮೀನಿನಲ್ಲಿ ಕೃಷಿ ಮಾಡಿ ಯಶಸ್ವಿಯಾಗಿದ್ದರು. ಜೊತೆಗೆ ಲಕ್ಷಾಂತರ ರೂ. ಹಣ ಸಂಪಾದಿಸಿದ್ದರು. ಇದರ ಜೊತೆಗೆ ಇತ್ತೀಚೆಗೆ ಪತಿಯ ವಿಮೆ ಹಣ ಸುಮಾರು 12 ಲಕ್ಷ ರೂಪಾಯಿ ಬರುವುದಿತ್ತು. ಇದು ಸಹಜವಾಗಿ ಆಕೆಯ ಸಂಬಂಧಿಕರ ಕಣ್ಣು ಕುಕ್ಕಿದೆ.
– ಹಾಸನ : ಭಾರಿ ಮಳೆಗೆ ಸೋರುತ್ತಿರುವ ಗ್ರಂಥಾಲಯ
ಹಾಸನ : ಭಾರಿ ಮಳೆಗೆ ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದ ಸಕಲೇಶಪುರ ಪಟ್ಟಣದ ಐಬಿ ರಸ್ತೆಯಲ್ಲಿರುವ ಸ್ಕೌಟ್ ಅಂಡ್ ಗೈಡ್ ಕಟ್ಟಡದಲ್ಲಿರುವ ಗ್ರಂಥಾಲಯ ಸೋರುತಿದ್ದು, ಪುಸ್ತಕಗಳು ನೀರುಪಾಲಾಗಿವೆ. ಗ್ರಂಥಾಲಯದ ಹೆಂಚುಗಳು ಹೊಡೆದು ಹೋಗಿದ್ದು, ಯಾವ ಕ್ಷಣದಲ್ಲಾದರೂ ಲೈಬ್ರರಿ ಬೀಳುವ ಸಾಧ್ಯತೆ ಇದೆ. ಸೋರುತ್ತಿರುವ ಮಳೆ ನೀರಿನಿಂದ ಲಕ್ಷಾಂತರ ರೂ ಮೌಲ್ಯದ ಅಮೂಲ್ಯ ಪುಸ್ತಕಗಳಿಗೆ ಹಾನಿಯಾಗಿದೆ.