ಕೊಲ್ಲೂರು ಅಭಿವೃದ್ಧಿಗೆ ಕೇಂದ್ರಕ್ಕೆ ನಿಯೋಗ
– ಸಂಸದ ರಾಘವೇಂದ್ರ, ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ಮನವಿ
– ಮೂಕಾಂಬಿಕಾ ವಿಮಾನ ನಿಲ್ದಾಣ ಮಂಜೂರಾತಿಗೆ ಪತ್ರ
NAMMUR EXPRESS NEWS
ಬೈಂದೂರು: ಶಿವಮೊಗ್ಗ ಲೋಕಸಭಾ ಸದಸ್ಯ ಬಿ. ವೈ.ರಾಘವೇಂದ್ರ ಹಾಗೂ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ನೇತೃತ್ವದ ನಿಯೋಗವು ಕೇಂದ್ರ ವಿಮಾನಯಾನ ಸಚಿವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಬೈಂದೂರಿನಲ್ಲಿ ಮೂಕಾಂಬಿಕಾ ಕಾರಿಡಾರ್ ನಿರ್ಮಿಸಲು ಅನುಮತಿ ನೀಡಬೇಕೆಂದು ಮನವಿ ಮಾಡಿತು. ಜೊತೆಗೆ ಬೈಂದೂರು ರೈಲ್ವೇ ನಿಲ್ದಾಣವನ್ನೂ ಮೇಲ್ದರ್ಜೆಗೆ ಏರಿಸಬೇಕು, ಮೂಕಾಂಬಿಕಾ ಕಾರಿಡಾರ್ ನಿರ್ಮಾಣಕ್ಕೆ ಮುಂದಾಗಬೇಕು, ಕೊಡಚಾದ್ರಿ ಬೆಟ್ಟಕ್ಕೆ ರೋಪ್ ವೇ ನಿರ್ಮಿಸುವ ಮೂಲಕ ಪ್ರವಾಸೋದ್ಯಮಕ್ಕೆ ಆದ್ಯತೆ ಕಲ್ಪಿಸಬೇಕು ಎಂದು ವಿವಿಧ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು. ನಿಯೋಗದಲ್ಲಿ ಕೊಲ್ಲೂರು ದೇವಳದ ಮಾಜೀ ಧರ್ಮದರ್ಶಿಗಳಾದ ಕೃಷ್ಣಪ್ರಸಾದ್ ಅಡ್ಯಂತಾಯ, ವೆಂಕಟೇಶ್ ಕಿಣಿ, ಆದರ್ಶ ಮೊದಲಾದವರು ಇದ್ದರು.