-ದೀಪೋತ್ಸವದ ದರ್ಶನ, ರಾಮಾಯಣ ಮಹಾಕಾವ್ಯದ ವಿವಿಧ ಕಥೆಗಳ ಪ್ರದರ್ಶನಉತ್ತರಪ್ರದೇಶ ಸರ್ಕಾರ ಸಿದ್ಧತೆ.
ನವದೆಹಲಿ: ಜನವರಿ 26 ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪರೇಡ್ನಲ್ಲಿ ಪ್ರಾಚೀನ ನಗರ ಅಯೋಧ್ಯೆಯ ಪರಂಪರೆ, ರಾಮ ದೇವಾಲಯದ ಪ್ರತಿರೂಪ, ‘ದೀಪೋತ್ಸವ’ದ ದರ್ಶನ ಮತ್ತು ರಾಮಾಯಣ ಮಹಾಕಾವ್ಯದ ವಿವಿಧ ಕಥೆಗಳನ್ನು ಬಿಂಬಿಸುವ ಸ್ತಬ್ಧಚಿತ್ರವನ್ನು ಪ್ರದರ್ಶಿಸಲು ಉತ್ತರ ಪ್ರದೇಶ ಸರ್ಕಾರ ಸಿದ್ಧತೆ ನಡೆಸಿದೆ.
ಸ್ತಬ್ಧಚಿತ್ರದ ಮುಂಭಾಗದಲ್ಲಿ ಮಹರ್ಷಿ ವಾಲ್ಮೀಕಿ ಕುಳಿತಿರುವ ಪ್ರತಿಕೃತಿ ಇರಲಿದ್ದು, ಹಿಂಭಾಗದಲ್ಲಿ ದೇವಾಲಯದ ಪ್ರತಿಕೃತಿ ಇರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನವದೆಹಲಿಯ ರಾಜಪಥದಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ 17 ರಾಜ್ಯಗಳ ಸಂಸ್ಕೃತಿ, ಪರಂಪರೆ ಬಿಂಬಿಸುವ ಸ್ತಬ್ಧಚಿತ್ರಗಳು ಗಮನ ಸೆಳೆಯಲಿವೆ.