ರಾಜಧಾನಿಯಲ್ಲಿ ಮಧ್ಯರಾತ್ರಿಯೂ ಬ್ಯುಸಿನೆಸ್!
– ಹೋಟೆಲ್,ರೆಸ್ಟೋರೆಂಟ್, ಬಾರ್ ಮಾಲೀಕರಿಗೆ ಗುಡ್ ನ್ಯೂಸ್
– ಮಧ್ಯರಾತ್ರಿ 1 ಗಂಟೆಯವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ
– ರಾಜ್ಯದ 10 ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಧಿಕೃತ ಆದೇಶ ಜಾರಿ
NAMMUR EXPRESS NEWS
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಇನ್ನು ಮುಂದೆ ಮಧ್ಯರಾತ್ರಿ ಒಂದು ಗಂಟೆಯವರೆಗೆ ಬಾರ್ ಹೋಟೆಲ್ ರೆಸ್ಟೋರೆಂಟ್ ಸೇರಿದಂತೆ ವಾಣಿಜ್ಯ ವಹಿವಾಟಿಗೆ ಅವಕಾಶವನ್ನು ನೀಡಿ ಸರ್ಕಾರ ಅಧಿಕೃತವಾಗಿ ಆದೇಶವನ್ನು ಹೊರಡಿಸಿದೆ.
ರಾಜ್ಯದ 10 ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬಾರ್, ರೆಸ್ಟೋರೆಂಟ್, ಹೋಟೆಲ್ ಸೇರಿದಂತೆ ವಾಣಿಜ್ಯ ವಹಿವಾಟಿಗೆ ಅವಕಾಶ ಕೋರಿ ಈ ಹಿಂದೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.ಆದರೆ ಬೆಂಗಳೂರಿನಲ್ಲಿ ಮಾತ್ರ ಸದ್ಯ ಅವಕಾಶವನ್ನು ನೀಡಲಾಗಿದ್ದು, ಮುಂಜಾನೆ 6 ರಿಂದ ತಡರಾತ್ರಿ 1 ಗಂಟೆಯವರೆಗೆ ತೆರೆಯಲು ನಗರಾಭಿವೃದ್ಧಿ ಇಲಾಖೆಯಿಂದ ಆದೇಶ ಹೊರಬಿದ್ದಿದೆ.
ರಾತ್ರಿ ಒಂದು ಗಂಟೆಯವರೆಗೆ ಹೋಟೆಲ್ ಅವಕಾಶ ನೀಡಿರುವ ಹಿನ್ನೆಲೆ ರಾಜ್ಯ ಸರ್ಕಾರದ ಆದೇಶವನ್ನು ಹೋಟೆಲ್ ಅಸೋಸಿಯೇಷನ್ ಸ್ವಾಗತ ಸರ್ಕಾರದ ಆದೇಶವನ್ನು ನಾವು ಸ್ವಾಗತಿಸಿದ್ದು ಇದರಿಂದ ಜನಸಾಮಾನ್ಯರಿಗೆ ಅನುಕೂಲವಾಗುತ್ತೆ ಎಂದು ರಾಜ್ಯ ಹೋಟೆಲ್ ಅಧ್ಯಕ್ಷರಾದ ಸುಬ್ರಹ್ಮಣ್ಯ ಹೊಳ್ಳ ಹೇಳಿಕೆಯನ್ನು ನೀಡಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕರ ಬಹುದಿನದ ಬೇಡಿಕೆ ಕೊನೆಗೂ ಈಡೇರಿದೆ . ಈ ಹಿಂದೆ ಬೆಳಗ್ಗೆ 9:00 ರಿಂದ ಮಧ್ಯರಾತ್ರಿ ಒಂದು ಗಂಟೆಯವರೆಗೆ ಕಮಿಷನರೇಟ್ (ಸಿಟಿ ಸೆಂಟರ್) ವ್ಯಾಪ್ತಿಯಲ್ಲಿ ಬರುವ ಬಾರ್ ಅಂಡ್ ರೆಸ್ಟೋರೆಂಟ್ ಗೆ ಮಾತ್ರ ಅವಕಾಶವಿತ್ತು. ಆದರೆ ಇದೀಗ ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಬಾರ್ ಅಂಡ್ ರೆಸ್ಟೋರೆಂಟ್ ಗಳಿಗೂ ರಾತ್ರಿ ಒಂದು ಗಂಟೆಯವರೆಗೂ ವ್ಯಾಪಾರ ವ್ಯವಹಾರಕ್ಕೆ ಸಮಯ ವಿಸ್ತರಿಸಿದ್ದರಿಂದ ಬಿಬಿಎಂಪಿ ಲಿಮಿಟ್ಸ್ ನಲ್ಲಿ ಬಾರ್ ಮಾಲೀಕರ ವ್ಯಾಪಾರಕ್ಕೆ ಅನುಕೂಲವಾಗಲಿದೆ.