ಮಲೇಷ್ಯಾದಲ್ಲಿ ಕಿಮ್ಮನೆಗೆ ಪ್ರತಿಷ್ಠಿತ ಅವಾರ್ಡ್!
– ಮಲೇಷ್ಯಾ-ಇಂಡಿಯಾ ಇಂಟರ್ನ್ಯಾಷನಲ್ ಐಕಾನಿಕ್ ಅವಾರ್ಡ್
– ಇನ್ನಷ್ಟು ಜನ ಸೇವೆಗೆ ಪ್ರೇರಣೆ ನೀಡಿದೆ: ಕಿಮ್ಮನೆ ರತ್ನಾಕರ್
NAMMUR EXPRESS NEWS
ಬೆಂಗಳೂರು: ಕರ್ನಾಟಕದ ಪ್ರತಿಷ್ಠಿತ ಸುದ್ದಿ ವಾಹಿನಿ ಏಷ್ಯಾನೆಟ್ ಸುವರ್ಣನ್ಯೂಸ್ ಹಾಗೂ ದಿನಪತ್ರಿಕೆ ಕನ್ನಡಪ್ರಭ ಸಂಸ್ಥೆಯ ಪ್ರಾಯೋಜಕತ್ವದಲ್ಲಿ 2024-25 ಸಾಲಿನ ಕರುನಾಡಿನ ಸಾಧಕರಿಗೆ “ಮಲೇಷ್ಯಾ-ಇಂಡಿಯಾ ಇಂಟರ್ನ್ಯಾಷನಲ್ ಐಕಾನಿಕ್ ಅವಾರ್ಡ್ 2024 ಮಾಜಿ ಸಚಿವ, ಮಾಜಿ ಶಾಸಕರು ಆದ ಕಿಮ್ಮನೆ ರತ್ನಾಕರ್ ಅವರಿಗೆ ಲಭಿಸಿದ್ದು ಮಲೇಷಿಯಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶುಕ್ರವಾರ ಪ್ರದಾನ ಮಾಡಲಾಯಿತು.
ಕಿಮ್ಮನೆ ರತ್ನಾಕರ್ ಅವರು ನಾಡಿನ ರಾಜಕೀಯ ಕ್ಷೇತ್ರದಲ್ಲಿನ ನಿಮ್ಮ ಸಾಧನೆಯನ್ನು ಗುರುತಿಸಿ “ಮಲೇಷ್ಯಾ-ಇಂಡಿಯಾ ಇಂಟರ್ನ್ಯಾಷನಲ್ ಐಕಾನಿಕ್ ಅವಾರ್ಡ್ 2024” ಪುರಸ್ಕಾರ ನೀಡಿ ಗೌರವಿಸಲಾಯಿತು.
ಕಿಮ್ಮನೆ ರತ್ನಾಕರ್ ರಾಜ್ಯ ಕಂಡ ಅಪರೂಪದ ರಾಜಕೀಯ ನಾಯಕರು. ತೀರ್ಥಹಳ್ಳಿ ಕ್ಷೇತ್ರದ ಶಾಸಕರಾಗಿ, ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದವರು. ತಮ್ಮ ಸೇವೆ, ಪ್ರಾಮಾಣಿಕ ವ್ಯಕ್ತಿತ್ವ ಇಂದಿನ ರಾಜಕಾರಣಿಗಳಿಗೆ ಮಾದರಿ. ಈಗ ಈ ಹಿಂದೆ ಅವರಿಗೆ ವಿವಿಧ ಮಾಧ್ಯಮ ಸಂಸ್ಥೆಗಳ ಪ್ರಶಸ್ತಿ ಲಭಿಸಿದ್ದವು. ಇದೀಗ ನಾಡಿನ ಹೆಮ್ಮೆಯ ಮಾಧ್ಯಮ ಸಂಸ್ಥೆ ಏಷ್ಯಾನೆಟ್ ಸುವರ್ಣನ್ಯೂಸ್ ಹಾಗೂ ದಿನಪತ್ರಿಕೆ ಕನ್ನಡಪ್ರಭ ತನ್ನ ಪ್ರಶಸ್ತಿ ನೀಡಿ ಗೌರವಿಸಿದೆ.
ನಮ್ಮೂರ್ ಎಕ್ಸ್ ಪ್ರೆಸ್ ಜತೆ ಮಾತನಾಡಿದ ಕಿಮ್ಮನೆ ರತ್ನಾಕರ್, ಪ್ರಶಸ್ತಿ ನನ್ನ ಜವಾಬ್ದಾರಿ ಹೆಚ್ಚಿಸಿದೆ. ಇನ್ನಷ್ಟು ಜನ ಸೇವೆಗೆ ಪ್ರೇರಣೆ ನೀಡಿದೆ ಎಂದಿದ್ದಾರೆ.