ಹೊಸದುರ್ಗದಲ್ಲಿ ವಾಲ್ಮೀಕಿ ನಾಯಕ ಸಮುದಾಯದ ಸಂಭ್ರಮ
– ಪ್ರತಿಭಾ ಪುರಸ್ಕಾರ, ಶೈಕ್ಷಣಿಕ ವೃತ್ತಿ ಮಾರ್ಗದರ್ಶನ ಮತ್ತು ನಿವೃತ್ತ ನೌಕರರ ಸನ್ಮಾನ ಕಾರ್ಯಕ್ರಮ
– ಮದಕರಿ ಪ್ರತಿಮೆ ಲೋಕಾರ್ಪಣೆ ಶೀಘ್ರ: ಶಾಸಕ ಬಿ.ಜಿ. ಗೋವಿಂದಪ್ಪ ಮಾಹಿತಿ
NAMMUR EXPRESS NEWS
ಹೊಸದುರ್ಗ ಪಟ್ಟಣದ ಮದಕರಿ ವೃತ್ತದಲ್ಲಿ ರಾಜ ವೀರ ಮದಕರಿ ಮನಾಯಕರ ಪ್ರತಿಮೆ ಅನಾವರಣಕ್ಕೆ ಸಿದ್ಧತೆ ನಡೆಯುತ್ತಿದೆ ಎಂದು ಶಾಸಕ ಬಿ.ಜಿ. ಗೋವಿಂದಪ್ಪ ತಿಳಿಸಿದ್ದಾರೆ.
ವಾಲ್ಮೀಕಿ ನಾಯಕ ಸಮುದಾಯದ ವತಿಯಿಂದ ಪಟ್ಟಣದ ಬನಶಂಕರಿ ಬಡಾವಣೆಯಲ್ಲಿರುವ ವಾಲ್ಮೀಕಿ ಸಮುದಾಯ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ, ಶೈಕ್ಷಣಿಕ ವೃತ್ತಿ ಮಾರ್ಗದರ್ಶನ ಮತ್ತು ನಿವೃತ್ತ ನೌಕರರ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
‘ವಿದ್ಯಾರ್ಥಿ ಜೀವನ ಬಹಳ ಮಹತ್ತರವಾದುದು. ಈ ಸಮಯದಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ನಿಮ್ಮ ಮುಂದಿನ ಭವಿಷ್ಯ ನಿರ್ಧರಿಸುತ್ತದೆ. ‘ಯಾವುದೇ ದುಶ್ಚಟಗಳಿಗೆ ಬಲಿಯಾಗದೆ, ಅಧ್ಯಯನದಲ್ಲಿ ಒಡಗಬೇಕು. ಆಗ ಮಾತ್ರ ಜೀವನ ಸರಿಯಾದ ರೀತಿಯಲ್ಲಿ ಸಾಗಲು ಸಾಧ್ಯ’ ಎಂದು ಹೇಳಿದರು.
ಅಂಕಗಳಿಕೆ ಆಧಾರಿತ ಶಿಕ್ಷಣದಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯವಿಲ್ಲ. ಒಳ್ಳೆಯ ಸಂಸ್ಕಾರ, ಮೌಲ್ಯಯುತ ಶಿಕ್ಷಣ ದೊರೆತಾಗ ಸಮಾಜ ಪರಿವರ್ತನೆಯಾಗ- ಕಲು ಸಾಧ್ಯ. ಖಾಸಗಿ ಶಾಲೆಗಳಲ್ಲಿ ಓದಿದರೆ ಮಾತ್ರವೇ ಸರ್ಕಾರಿ ನೌಕರಿ ತೆಗೆದುಕೊ ಳ್ಳಬಹುದು ಎಂಬ ಅಭಿಪ್ರಾಯವನ್ನು ಪಾಲಕರು ಬಿಡಬೇಕು. ಉನ್ನತ ಹುದ್ದೆ- ಯಲ್ಲಿರುವ ಬಹಳಷ್ಟು ಅಧಿಕಾರಿಗಳು ಸರ್ಕಾರಿ ಶಾಲೆಗಳಲ್ಲಿ ಓದಿದವರಾದ್ದಾರೆ. ಕಷ್ಟ ಅಂತ ಕೈಕಟ್ಟಿ ಕುಳಿತರೆ ಸಮಸ್ಯೆ ಪರಿ- ಹಾರವಾಗುವುದಿಲ್ಲ. ಪರಿವರ್ತನೆಯ ಹಾದಿಯಲ್ಲಿ ಸಾಗಬೇಕು. ಸಾಧಕರಿಗೆ ಕಷ್ಟಕಾರ್ಪಣ್ಯಗಳು ಅಡ್ಡಿಯಾಗಲಾ- ರವು ಎಂದು ತಹಶೀಲ್ದಾರ್ ತಿರುಪತಿ ಪಾಟೀಲ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕೋಡಿಹಳ್ಳಿ ನಾಗೇಂದ್ರಪ್ಪ ಅವರಿಗೆ ಮರಣೋತ್ತರವಾಗಿ ವಾಲ್ಮೀಕಿ ಪ್ರಶಸ್ತಿ ನೀಡಲಾಯಿತು. ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಜಯಪ್ರಕಾಶ್, ಪ್ರಧಾನ ಕಾರ್ಯದರ್ಶಿ ಮೈಲಾರಪ್ಪ, ಕ್ಷೇತ್ರ ಸಮನ್ವಯಾಧಿಕಾರಿ ಶ್ರೀನಿವಾಸ್, ನಾಯಕ ಸಮುದಾಯದ ತಾಲ್ಲೂಕು ಘಟಕದ ಅಧ್ಯಕ್ಷ ರಂಗನಾಥ್, ಖಜಾಂಚಿ ಜಯಣ್ಣ, ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಯುವ ಘಟಕದ ಉಪಾಧ್ಯಕ್ಷ ತುಂಬಿನಕೆರೆ ಬಸವರಾಜ್, ತಾಲ್ಲೂಕು ಯುವಘಟಕದ
ಅಧ್ಯಕ್ಷ ಅರುಣ್ ಗಂಗಾಧರಪ್ಪ, ಸಹಾಯಕ ಸರ್ಕಾರಿ ಎಂಜಿನಿಯರ್ ರುದ್ರಮುನಿ, ಗ್ರೇಡ್-ಬಿ ತಹಶೀಲ್ದಾರ್ ಪಾಲಯ್ಯ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಶಾಂತಪ್ಪ, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಶಿವಮೂರ್ತಿ, ವಕೀಲರಾದ ನರೇಂದ್ರ ಬಾಬು ಮತ್ತು ಬೆಸ್ಕಾಂ ಜೂನಿಯರ್ ಎಂಜಿನಿಯರ್ ಮಧು ಸೇರಿ ನೌಕರರ ಸಂಘದ ಪದಾಧಿಕಾರಿಗಳು, ನಾಯಕ ಸಮುದಾಯದ ಮುಖಂಡರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.