ಕರಾವಳಿ ಟಾಪ್ ನ್ಯೂಸ್
ಉಡುಪಿ ವೈದ್ಯರೊಬ್ಬರಿಗೆ 1.33 ಕೋಟಿ ವಂಚನೆ: ದೂರು ದಾಖಲು
– ಕಸ್ಟಮ್ಸ್ ಅಧಿಕಾರಿಗಳ ಹೆಸರಲ್ಲಿ ವಂಚನೆ: ದುಡ್ಡು ಕಳೆದುಕೊಂಡಿದ್ದು ಹೇಗೆ?
– ಮೂಡುಬಿದರೆ: ಕಡಂದಲೆ ಶಾಂಭವಿ ನದಿಯಲ್ಲಿ ದನದ ತಲೆಗಳು ಪತ್ತೆ!
– ಮಂಗಳೂರು: ಅಬುಧಾಬಿಯಲ್ಲಿ ಕಟ್ಟಡದಿಂದ ಬಿದ್ದು ಮೃತ್ಯು
– ಕಡಬ: ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ಸ್ಕೂಟರ್ ಡಿಕ್ಕಿ: ವ್ಯಕ್ತಿ ಸಾವು
NAMMUR EXPRESS NEWS
ಉಡುಪಿ: ಮುಂಬೈಯ ಕಸ್ಟಮ್ ಅಧಿಕಾರಿಗಳ ಹೆಸರಿನಲ್ಲಿ ವೈದ್ಯರೊಬ್ಬರಿಗೆ ಕೋಟ್ಯಂತರ ರೂ. ಪಂಗನಾಮ ಹಾಕಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಉಡುಪಿಯ ವೈದ್ಯರಾಗಿರುವ ಡಾ.ಅರುಣ್ ಕುಮಾರ್ (53) ಹಣ ಕಳೆದುಕೊಂಡ ವ್ಯಕ್ತಿ. ಈ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜು.29ರಂದು ಡಾ. ಅರುಣ್ ಅವರಿಗೆ ಅಪರಿಚಿತರು ಕಸ್ಟಮ್ಸ್ನಿಂದ ಕರೆ ಮಾಡಿ, ನಿಮ್ಮ ಆಧಾರ್ ನಂಬ್ರ ಬಳಸಿ ಬುಕ್ ಆಗಿರುವ ಕೊರಿಯರ್ನಲ್ಲಿ 5 ಪಸ್ಪೋರ್ಟ್, 5 ಎಟಿಎಂ ಕಾರ್ಡ್, 200ಗ್ರಾಂ ಎಂಡಿಎಂಎ ಹಾಗೂ 5000 ಯುಎಸ್ ಡಾಲರ್ ಇದ್ದು, ಕೋರಿಯರ್ ಮುಂಬಯಿ ಕಸ್ಟಮ್ಸ್ರವರ ವಶದಲ್ಲಿ ಇರುವುದಾಗಿ ತಿಳಿಸಿದರು.ಬಳಿಕ ಪೊಲೀಸ್ ಅಧಿಕಾರಿ ಎಂದು ನಂಬಿಸಿ ಅರುಣ್ ಕುಮಾರ್ಗೆ ಕರೆ ಮಾಡಿ, ನಿಮ್ಮ ಆಧಾರ್ ಕಾರ್ಡ್ ದುರ್ಬಳಕೆಯ ಬಗ್ಗೆ ದೂರನ್ನು ಸ್ವೀಕರಿಸಲಾಗಿದೆ ಎಂದು ತಿಳಿಸಿದರು. ನಿಮ್ಮ ಆಧಾರ್ ಕಾರ್ಡ್ನ್ನು ಭಯೋತ್ಪಾದಕರು ಸಿಮ್ ಖರೀದಿಸಲು ಬಳಸಿದ್ದು, ಈ ದೂರಿಗೆ ಸಂಬಂಧಿಸಿ ನಿಮ್ಮನ್ನು ವರ್ಚುವಲ್ ಆರೆಸ್ಟ್ ಮಾಡುವುದಾಗಿ ತಿಳಿಸಿದ್ದರು.
ಜು.29ರಿಂದ ಆ.9ರ ತನಕ ಅವರ ಮನೆಯ ರೂಮ್ ಒಂದರಲ್ಲಿ
ಇರುವಂತೆ ಹಾಗೂ ಬೇರೆಯವರೊಂದಿಗೆ ಸಂಪರ್ಕಿಸದಂತೆ ಸೂಚಿಸಿದ್ದರು. ಈ ಪ್ರಕರಣವನ್ನು ಸರಿಪಡಿಸಲು ಅಪರಿಚಿತರು
ಸೂಚಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ಪಾವತಿಸುವಂತೆ
ತಿಳಿಸಿದ್ದು ಅದರಂತೆ ಅರುಣ್ ಕುಮಾರ್, ಖಾತೆಯಿಂದ 1,33,81,000
ರೂ. ಹಣವನ್ನು ವರ್ಗಾಯಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
ದಕ್ಷಿಣ ಕನ್ನಡದ ಯುವಕ ಅಬುಧಾಬಿಯಲ್ಲಿ ಕಟ್ಟಡದಿಂದ ಬಿದ್ದು ಮೃತ್ಯು
ಮಂಗಳೂರು: ಕೊಣಾಜೆ ಗ್ರಾಮದ ನಡುಪದವಿನ ಯುವಕನೋರ್ವ ಅಬುಧಾಬಿಯಲ್ಲಿ ಕಟ್ಟಡದಿಂದ ಬಿದ್ದು ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ.
ಮೃತಪಟ್ಟ ಯುವಕನನ್ನು ಉಮ್ಮರ್ ಎಂಬವರ ಪುತ್ರ ನೌಫಲ್(25) ಎಂದು ಗುರುತಿಸಲಾಗಿದೆ.ಅಬುಧಾಬಿಯಲ್ಲಿ ಎ.ಸಿ ಮೆಕ್ಯಾನಿಕ್ ಆಗಿ ಕೆಲಸಮಾಡುತ್ತಿದ್ದ ನೌಫಲ್ ಕಟ್ಟಡವೊಂದರಲ್ಲಿ ಕೆಲಸ ಮಾಡುವಾಗ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಕಡಂದಲೆ ಶಾಂಭವಿ ನದಿಯಲ್ಲಿ ದನದ ತಲೆಗಳು ಪತ್ತೆ!
ಮೂಡುಬಿದಿರೆ: ತಾಲೂಕಿನ ಕಡಂದಲೆ ಶಾಂಭವೀ ನದಿಯಲ್ಲಿ ತೇಲುತ್ತಿದ್ದ ದನದ ತಲೆಗಳನ್ನು ಸ್ಥಳೀಯರು ಬುಧವಾರ ಬೆಳಿಗ್ಗೆ ಪತ್ತೆ ಮಾಡಿದ್ದಾರೆ.ದನವನ್ನು ಕೊಂದು ಮಾಸ ಮಾಡಿದ ನಂತರ ಅದರ ತಲೆಗಳನ್ನು ಮತ್ತು ಕರುಳನ್ನು ನದಿಗೆ ತಂದು ಹಾಕಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಈ ಪರಿಸರದಲ್ಲಿ ಅಕ್ರಮ ಕಸಾಯಿ ಖಾನೆ ಇದೆಯೇ ಎಂಬ ಪ್ರಶ್ನೆ ಈಗ ಸ್ಥಳೀಯರಲ್ಲಿ ಆತಂಕಕ್ೆ ಕಾರಣವಾಗಿದೆ
ನಿನ್ನೆ ದನ ಹಾಗೂ ಕರುವನ್ನು ಹತ್ಯೆ ಮಾಡಿ ಬಳಿಕ ಅದರ ತಲೆಗಳನ್ನು ಈ ನದಿಗೆ ಹಾಕಲಾಗಿದೆ. ಈ ಪರಿಸರದಲ್ಲಿ ಅಶಾಂತಿ ಕದಡುವ ನಿಟ್ಟಿನಲ್ಲಿ ಈ ಕೃತ್ಯ ಎಸಗಲಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.
ಕಡಬ: ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ಸ್ಕೂಟರ್ ಡಿಕ್ಕಿ: ವ್ಯಕ್ತಿ ಸಾವು
ಕಡಬ: ಕಡಬ ತಾಲೂಕಿನ ಕೋಡಿಂಬಾಳದಲ್ಲಿ ರಸ್ತೆದಾಟಲು ನಿಂತಿದ್ದ ವೃದ್ಧರೊಬ್ಬರಿಗೆ ಸ್ಕೂಟರ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ.
ಕೋಡಿಂಬಾಳದ ಹುಕ್ರ (75) ಮೃತ ವ್ಯಕ್ತಿ.ಕೋಡಿಂಬಾಳ ಗ್ರಾಮದ ಶಾಮಿಯಾನ ಅಂಗಡಿಯೊಂದರ ಬಳಿ ಮುಹಮ್ಮದ್ ನೌಫಾಲ್ ಎಂಬವರು ಚಲಾಯಿಸುತ್ತಿದ್ದ ಸ್ಕೂಟರ್ ರಸ್ತೆಯ ಬದಿಯಲ್ಲಿ ರಸ್ತೆ ದಾಟಲು ನಿಂತಿದ್ದ ಕೋಡಿಂಬಾಳದ ಹುಕ್ರ ಎಂಬವರಿಗೆ ಡಿಕ್ಕಿ ಹೊಡೆದಿದ್ದು ಈ ವೇಳೆ ಹುಕ್ರ ಅವರು ಗಂಭೀರವಾಗಿ ಗಾಯಗೊಂಡಿದ್ದು ಸ್ಥಳದಲ್ಲಿದ್ದವರು ಕಡಬ ಸರ್ಕಾರಿ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ಕೊಡಿಸಿ. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ಒಳರೋಗಿಯಾಗಿ ದಾಖಲಿಸಿದ್ದರು.ಗಾಯಾಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.