ರಾಜ್ಯದಲ್ಲಿ ಸ್ವಾತಂತ್ರ್ಯ ಸಂಭ್ರಮ!
– ಮಾಣೆಕ್ ಷಾ ಮೈದಾನದಲ್ಲಿ ಸಿಎಂ ಧ್ವಜಾರೋಹಣ
– ದೇಶಕ್ಕಾಗಿ ಜೀವತೆತ್ತ ಮಹನೀಯರ ಸ್ಮರಣೆ
– ರಾಜ್ಯದಲ್ಲಿ ಎಲ್ಲೆಡೆ ಜನರಿಂದ ಸ್ವಾತಂತ್ರ್ಯ ಹಬ್ಬ
– ದೇಶಕ್ಕಾಗಿ ಜೀವ ತೆತ್ತ ಮಹನೀಯರನ್ನು ನೆನೆದ ಸಿಎಂ
NAMMUR EXPRESS NEWS
ಬೆಂಗಳೂರು: ರಾಜ್ಯದಲ್ಲಿ ಸ್ವಾತಂತ್ರ್ಯ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಹಳ್ಳಿ ಹಳ್ಳಿಯಲ್ಲೂ ತಿರಂಗಾ ಹಾರಿಸಲಾಗಿದೆ. ಜನ ದೇಶ ಭಕ್ತಿಯನ್ನು ಮೆರೆದಿದ್ದಾರೆ.
ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜುಗಳು, ಖಾಸಗಿ ಸಂಸ್ಥೆಗಳು ಸೇರಿ ಆಟೋ, ಬಸ್, ಕಾರು ನಿಲ್ದಾಣಗಳಲ್ಲಿ ಸ್ವಾತಂತ್ರ್ಯ ಸಂಭ್ರಮ ಕಂಡು ಬಂತು.
ಸಿಎಂ ಧ್ವಜಾರೋಹಣ: ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿ ಪರೀಡ್ ವೀಕ್ಷಿಸಿದರು.ಬಳಿಕ ಸಿಎಂ ಭಾಷಣ ಮಾಡಿ ಪ್ರಾಣದ ಹಂಗು ತೊರೆದು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನಿಯರನ್ನು ಸ್ಮರಿಸಿದರು. ದೃಷ್ಟರ ಆಟ ಬಹಳ ಕಾಲ ನಡೆಯುದಿಲ್ಲ ಎನ್ನುವುದನ್ನು ಜನರೇ ನಿರ್ಧಾರ ಮಾಡಿದದಾರೆ ಎಂದು ಹೇಳಿದರು.
ಅತಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ ಕರ್ನಾಟಕ 2ನೇ ಸ್ಥಾನ
ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ ಕರ್ನಾಟಕ ಎರಡನೆಯ ಸ್ಥಾನದಲ್ಲಿದೆ. ಸುಮಾರು 4 ಲಕ್ಷ ಕೋಟಿಗೂ ಹೆಚ್ಚಿನ ತೆರಿಗೆ, ಸುಂಕ, ಮೇಲ್ತೆರಿಗೆಗಳನ್ನು ಕೇಂದ್ರಕ್ಕೆ ಪಾವತಿಸುತ್ತಿದೆ. ಅದರೆ ನಮಗೆ ವಾಪಸ್ಸು ಬರುತ್ತಿರುವುದು 50 ಸಾವಿರ ಕೋಟಿ ರೂ. ಮಾತ್ರ. ನಮಗೆ ನ್ಯಾಯಯುತವಾಗಿ ಬರಬೇಕಾದಷ್ಟು ಸಂಪನ್ಮೂಲಗಳು ಕೇಂದ್ರದಿಂದ ಮರಳಿ ಬಂದರೆ ರಾಜ್ಯವು ಅತ್ಯಂತ ಶ್ರೀಮಂತ ರಾಜ್ಯವಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು
ದೇಶಕ್ಕಾಗಿ ಜೀವ ತೆತ್ತ ಮಹನೀಯರನ್ನು ನೆನೆದ ಸಿಎಂ
ಬ್ರಿಟಿಷರು ಭಾರತದ ಸ್ಥಳೀಯ ಉತ್ಪಾದನಾ ವಿಧಾನಗಳ ಕೈ ಬೆರಳುಗಳನ್ನು ಕತ್ತರಿಸಿ ಹಾಕಿ ಮಾರುಕಟ್ಟೆಯ ಮೇಲೆ ಯಜಮಾನಿಕೆಯನ್ನು ಸಾಧಿಸಿದ್ದರು. ಇದರಿಂದಾಗಿ ದೇಶದ ಆರ್ಥಿಕತೆ ಪೂರ್ತಿ ಪಾತಾಳಕ್ಕೆ ಕುಸಿದಿತ್ತು. ಬ್ರಿಟಿಷರು ದೇಶದ ಜನರ ಮೇಲೆ ಸಾಲವನ್ನು, ಕೈಗಳಿಗೆ ನಿರುದ್ಯೋಗವನ್ನು, ಹೊಟ್ಟೆ ತುಂಬ ಹಸಿವನ್ನು ಬಳುವಳಿಯಾಗಿ ಕೊಟ್ಟು ಹೋಗಿದ್ದರು. ಇಂಥ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಚಿಂತನೆಗಳು ಮತ್ತು ಪಂಡಿತ್ ಜವಾಹರಲಾಲ್ ನೆಹರೂ ಅವರ ಕಾರ್ಯಯೋಜನೆಗಳು ದೇಶವನ್ನು ಪಾತಾಳದಿಂದ ಮೇಲೆತ್ತಲು ಸಾಧ್ಯ ಮಾಡಿದವು. ಇವರೆಲ್ಲರ ಕೊಡುಗೆಯಿಂದ ಭಾರತವು ಇಂದು ಜಗತ್ತಿನಲ್ಲಿ ಅತ್ಯಂತ ಪ್ರಬಲ ದೇಶವಾಗಿ ಬೆಳೆದಿದೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಎಲ್ಲ ಮಹನೀಯರು ತಮ್ಮ ಸರ್ವಸ್ವವನ್ನೂ ತ್ಯಾಗ ಮಾಡಿ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿದ್ದರು. ಅವರ ತ್ಯಾಗ ಬಲಿದಾನಗಳನ್ನು ದೇಶವು ಶ್ರದ್ಧಾಪೂರ್ವಕವಾಗಿ ಸ್ಮರಿಸಲೇಬೇಕು ಎಂದರು.
ಸರ್ಕಾರದ ಗ್ಯಾರಂಿ ಯೋಜನೆಗಳ ಪ್ರಸ್ತಾಪ
ʼʼಚುನಾವಣೆಯ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ರಾಜ್ಯದ ಸಮಸ್ತ ಜನರ ಬದುಕಿಗೆ ಒಂದು ಆರ್ಥಿಕ ಭದ್ರತೆ ಯನ್ನು ಒದಗಿಸುವ ಕೆಲಸ ನಮ್ಮ ಸರ್ಕಾರ ಮಾಡಿದೆ. ಈ ಯೋಜನೆ ಮುಂದುವರಿಯಲಿದೆ. ಹೆಚ್ಚುತ್ತಿರುವ ಆರ್ಥಿಕ ಅಸಮಾನತೆಯಿಂದಾಗಿ ಬಸವಳಿದು ಹೋಗಿರುವ ಜನರ ಬದುಕಿಗೆ ಈ ಯೋಜನೆಗಳು ನೆಮ್ಮದಿ ತಂದಿವೆ. ಈ ಯೋಜನೆಗಳ ಮೂಲಕ ಸಂಪತ್ತಿನ ಮರುಹಂಚಿಕೆಗೆ ಒತ್ತು ನೀಡುತ್ತಲೇ ರಾಜ್ಯದ ಆರ್ಥಿಕ ಬೆಳವಣಿಗೆಯನ್ನು ಸುಸ್ಥಿರವಾದ ರೀತಿಯಲ್ಲಿ ಹೆಚ್ಚಿಸಲು ಕೂಡಾ ಅಷ್ಟೇ ಬದ್ಧತೆಯಿಂದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಎಂದರು.
ಪ್ರವಾಹ ಪೀಡಿತರಿಗೆ ಪರಿಹಾರ
ʼಪ್ರವಾಹ ಪೀಡಿತ ಜಿಲ್ಲೆಗಳಿಗೆ ನಾನು ಸ್ವತಃ ಭೇಟಿ ನೀಡಿದ್ದೇನೆ. ನಮ್ಮ ಸಚಿವರೂ ಜಿಲ್ಲೆಗಳಲ್ಲಿದ್ದು ಪರಿಸ್ಥಿತಿಯನ್ನು ನಿಭಾಯಿಸಿದ್ದಾರೆ. ಜೀವಹಾನಿ, ಜಾನುವಾರುಗಳ ಸಾವು ಹಾಗೂ ಮನೆ ಹಾನಿಗಳಿಗೆ ತ್ವರಿತವಾಗಿ ಪರಿಹಾರ ಒದಗಿಸುವಂತೆ ಸೂಚಿಸಲಾಗಿದೆ. ಮನೆ ಕಳೆದುಕೊಂಡವರಿಗೆ 1.2 ಲಕ್ಷ ರೂ. ಪರಿಹಾರದೊಂದಿಗೆ ಮನೆ ಹಂಚಿಕೆ ಮಾಡಲು ಕ್ರಮ ವಹಿಸುತ್ತಿದ್ದೇವೆʼʼ ಎಂದು ಸಿಎಂ ತಿಳಿಸಿದರು.