ಶೀಘ್ರ ದಲ್ಲಿ ಜಿಲ್ಲಾ ಮತ್ತು ತಾಪಂ ಚುನಾವಣೆ?!
– ಸರ್ಕಾರದಿಂದ ಸಿದ್ಧತೆ: ಕೋರ್ಟ್ ಕಟಕಟೆಗೆ ಮೀಸಲಾತಿ
– ಜಿಎಸ್ ಟಿ ಹೊಂದಿದವರು, ಇನ್ ಕಮ್ ಟ್ಯಾಕ್ಸ್ ಕಟ್ಟುವವರಿಗೆ ಗ್ಯಾರಂಟಿ
NAMMUR EXPRESS NEWS
ಗದಗ: ರಾಜ್ಯದಲ್ಲಿ ಶೀಘ್ರ ಜಿಲ್ಲಾ ಮತ್ತು ತಾಪಂ ಚುನಾವಣೆ ಸರ್ಕಾರ ನಡೆಸಲಿದೆ ಎಂದು ಕಾನೂನು ಸಂಸದೀಯ, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದ್ದಾರೆ.
ಜಿಪಂ, ತಾಪಂ ಮೀಸಲಾತಿ ಕುರಿತು ಈಗಾಗಲೇ ಸಾಕಷ್ಟು ಚರ್ಚೆಗಳಾಗಿವೆ. ಜಿಪಂ, ತಾಪಂ ಮೀಸಲಾತಿ ಕುರಿತು ಈಗಾಗಲೇ ಸಾಕಷ್ಟು ಚರ್ಚೆಗಳಾಗಿವೆ. ಈಗ ಸಿದ್ಧತೆ ನಡೆಸಿದ್ದೇವೆ ಎಂದರು.
ಜಿಪಂ, ತಾಪಂ ಕ್ಷೇತ್ರ ಪುನರ್ ವಿಂಗಡಣೆ ಹಾಗೂ ಮೀಸಲಾತಿ ಪ್ರಕಟಿಸಲು ಸರ್ಕಾರ ವಿಫಲವಾಗಿದೆ ಎಂದು ಸರ್ಕಾರದ ಕ್ರಮ ಆಕ್ಷೇಪಿಸಿ ರಾಜ್ಯ ಚುನಾವಣಾ ಆಯೋಗ ಹಾಗೂ ಮತ್ತಿತರರು 3 ಪ್ರತ್ಯೇಕ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆಯಾಗಿರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು. ರಾಜ್ಯದ ಎಲ್ಲ 31 ಜಿಪಂ ಹಾಗೂ ತಾಪಂ ಕ್ಷೇತ್ರ ಪುನರ್ ವಿಂಗಡಣೆ ಪೂರ್ಣಗೊಂಡಿದೆ, ಆದರೆ ಮೀಸಲು ನಿಗದಿಗೆ ಅಲ್ಪ ಕಾಲಾವಕಾಶ ಬೇಕಾಗುತ್ತದೆ. ಈ ಬಗ್ಗೆ ನಮ್ಮ ಅಡ್ವಕೇಟ್ ಜನರಲ್ ಈಗಾಗಲೇ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಜಿಲ್ಲಾ ಮತ್ತು ತಾಪಂಗೆ ಕಾನೂನಾತ್ಮಕವಾಗಿ ಚುನಾವಣೆ ನಡೆಸಬೇಕಾಗಿದೆ. ಜಿಪಂ, ತಾಪಂ ಚುನಾವಣೆ ಮಾಡೋದಕ್ಕೆ ಹೆಜ್ಜೆ ಇಡುತ್ತದೆ, ಆದಷ್ಟು ಬೇಗ ಘೋಷಣೆ ಮಾಡುತ್ತೇವೆ. ಜಿಪಂ ತಾಪಂ ಚುನಾವಣೆಯ ವಿಷಯ ನ್ಯಾಯಾಲಯದಲ್ಲಿದೆ ಎಂದರು.
ಜಿಎಸ್ ಟಿ ಹೊಂದಿದವರು, ಇನ್ ಕಮ್ ಟ್ಯಾಕ್ಸ್ ಕಟ್ಟುವವರಿಗೆ ಗ್ಯಾರಂಟಿ
ಗ್ಯಾರಂಟಿ ಸ್ಥಗಿತದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಗ್ಯಾರಂಟಿ ಯೋಜನೆ ಬಂದ್ ಆಗಲ್ಲ, ಬಂದ್ ಮಾಡೋದಕ್ಕೆ ಯಾವುದೇ ಕಾರಣ ಇಲ್ಲ. ಜಿಎಸ್ ಟಿ ಹೊಂದಿದವರು, ಇನ್ ಕಮ್ ಟ್ಯಾಕ್ಸ್ ಕಟ್ಟುವವರಿಗೆ ಗ್ಯಾರಂಟಿ ಕೊಡಬಾರದು ಅಂತಾ ಮಾಡಿದ್ದೇವೆ. ತಪ್ಪಿಸಿ, ನುಸುಳಿ ಬಂದವರನ್ನು ತೆಗೆಯುವ ವ್ಯವಸ್ಥೆ ಸದ್ಯದ ನಿಯಮಗಳಲ್ಲಿ ಇದೆ. ಆದರೆ ಗ್ಯಾರಂಟಿ ಕಡಿಮೆಗೊಳಿಸುವುದು, ಸ್ಥಗಿತಗೊಳಿಸುವ ಯಾವುದೇ ಪ್ರಸ್ತಾಪವಿಲ್ಲ. ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದರು.