ರಾಜ್ಯದಲ್ಲಿ ಝಿಕಾ ವೈರಸ್ ಪತ್ತೆ!.. ಎಚ್ಚರ!
– ಡೆಂಘಿ ಆರ್ಭಟದ ನಡುವೆ ಝಿಕಾ ವೈರಸ್ ಅಬ್ಬರ
– ಜನರಿಗೆ ಅರೋಗ್ಯ ಇಲಾಖೆ ಮಾಹಿತಿ
NAMMUR EXPRESS NEWS
ರಾಜ್ಯದಲ್ಲಿ ಝಿಕಾ ವೈರಸ್ ಪತ್ತೆಯಾಗಿದೆ. ಸೊಳ್ಳೆಯಿಂದ ಹರಡುವ ಝಿಕಾ ಪತ್ತೆ ಬೆನ್ನಲ್ಲೆ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಮನೆಯ ಸುತ್ತಮುತ್ತಲಿನ ಮೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಜನರನ್ನು ಪರೀಕ್ಷೆಗೊಳಪಡಿಸುವುದು ಕಡ್ಡಾಯ. ಆ ಪ್ರದೇಶದ ಒಂದು ಕಿಲೋಮೀಟರ್ ವ್ಯಾಪ್ತಿಯನ್ನು ಕಂಟೈನ್ವೆಂಟ್ ಜೋನ್ ಎಂದು ಪರಿಗಣಿಸಲಾಗುವುದು.
ಈಗಾಗಲೆ ರಾಜ್ಯದಲ್ಲಿ 7 ಝಿಕಾ ವೈರಸ್ ಪತ್ತೆಯಾಗಿದೆ. ಸದ್ಯ ಝಿಕಾ ವೈರಸ್ ಭೀತಿ ಬೆನ್ನಲ್ಲೆ ರಾಜ್ಯ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು ವೈರಸ್ ತಗುಲದಂತೆ ಮುನ್ನೆಚ್ಚರಿಕೆ ವಹಿಸುವುದರ ಬಗ್ಗೆ ಅಗತ್ಯ ಕ್ರಮ ವಹಿಸಲು ಮುಂದಾಗಿದೆ.
ಈಡಿಸ್ ಸೊಳ್ಳೆಯಿಂದ ಹರಡುವ ಝಿಕಾ ಪತ್ತೆ ಬೆನ್ನಲ್ಲೆ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಅತಿಯಾದ ತಲೆನೋವು, ಕೆಂಪಾದ ಕಣ್ಣು, ಜ್ವರ, ಮೈಯಲ್ಲಿ ಗುಳ್ಳೆ, ದದ್ದುಗಳು ಕಾಣಿಸಿಕೊಳ್ಳೋದು ಝಿಕಾ ವೈರಸ್ ಗುಣ ಲಕ್ಷಣ. ಇನ್ನು ಬಹುತೇಕ ಝೀಕಾ ಸೋಂಕಿತರಿಗೆ ರೋಗ ಲಕ್ಷಣಗಳು ಕಂಡುಬರುವುದಿಲ್ಲ. ಉಳಿದಂತೆ ರೋಗಕ್ಷಣಗಳ ಸೌಮ್ಯ ಹಾಗೂ ಸಾಧಾರಣ ಸ್ವರೂಪವಾಗಿದ್ದು, 2-7 ದಿನಗಳವರೆಗೆ ಇರುತ್ತದೆ.
ಈಡಿಸ್ ಸೊಳ್ಳೆಯಿಂದ ಹರಡುವ ಝಿಕಾ ಪತ್ತೆ ಬೆನ್ನಲ್ಲೆ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಅತಿಯಾದ ತಲೆನೋವು, ಕೆಂಪಾದ ಕಣ್ಣು, ಜ್ವರ, ಮೈಯಲ್ಲಿ ಗುಳ್ಳೆ, ದದ್ದುಗಳು ಕಾಣಿಸಿಕೊಳ್ಳೋದು ಝಿಕಾ ವೈರಸ್ ಗುಣ ಲಕ್ಷಣ. ಇನ್ನು ಬಹುತೇಕ ಝೀಕಾ ಸೋಂಕಿತರಿಗೆ ರೋಗ ಲಕ್ಷಣಗಳು ಕಂಡುಬರುವುದಿಲ್ಲ. ಉಳಿದಂತೆ ರೋಗಲಕ್ಷಣಗಳ ಸೌಮ್ಯ ಹಾಗೂ ಸಾಧಾರಣ ಸ್ವರೂಪವಾಗಿದ್ದು, 2-7 ದಿನಗಳವರೆಗೆ ಇರುತ್ತದೆ.
ಇಂತಹ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ಸಮೀಪದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡುವಂತೆ, ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಝಿಕಾ ವೈರಸ್ ದೃಢಪಟ್ಟರೆ, ಕುಟುಂಬದ ಸದಸ್ಯರ ರಕ್ತದ ಮಾದರಿ ಲ್ಯಾಬ್ ಟೆಸ್ಟ್ಗೆ ಒಳಪಡಿಸಬೇಕು.
ಮನೆಯ ಸುತ್ತಮುತ್ತಲಿನ ಮೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಜನರನ್ನು ಪರೀಕ್ಷೆಗೊಳಪಡಿಸುವುದು ಕಡ್ಡಾಯ. ಆ ಪ್ರದೇಶದ ಒಂದು ಕಿಲೋಮೀಟರ್ ವ್ಯಾಪ್ತಿಯನ್ನು ಕಂಟೈನ್ವೆಂಟ್ ಜೋನ್ ಎಂದು ಪರಿಗಣಿಸಲಾಗುವುದು.
ಝಿಕಾ ವೈರಸ್ಗೆ ಸಾರ್ವಜನಿಕರು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ವೈರಸ್ ತಗುಲದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರ್ವಜನಿಕರಿಗೆ ಮನವಿ ಮಾಡಿದೆ.
ಗರ್ಭಾವಸ್ಥೆಯಲ್ಲಿ ಝೀಕಾ ಸೋಂಕು ಕಾಣಿಸಿಕೊಂಡಲ್ಲಿ ಜನಿಸಿದ ಶಿಶುವಿನ ತಲೆಯ ಗಾತ್ರದಲ್ಲಿ ಕಡಿಮೆ (ಮೈಕ್ರೋಸೆಫಾಲಿ) ಬೆಳವಣಿಗೆ ದೋಷ ಕಂಡುಬರಬಹುದು. ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಪರೀಕ್ಷೆ ಹಾಗೂ ಚಿಕಿತ್ಸೆ ಸಂಪೂರ್ಣ ಉಚಿತವಾಗಿರಲಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.