ದರ್ಶನ್, ಕೇಜ್ರಿವಾಲ್ ಜೈಲುವಾಸವೇ ಗತಿ!
– ಸೆ. 5ರವರೆಗೆ ದರ್ಶನ್ ಜೈಲುಪಾಲು!
– ಅರವಿಂದ್ ಕೇಜ್ರವಾಲ್ ನ್ಯಾಯಾಂಗ ಬಂಧನ ವಿಸ್ತರಣೆ
NAMMUR EXPRESS NEWS
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ತೂಗುದೀಪ ತಮಗೆ ಮನೆ ಊಟ ಬೇಕೆಂದು ಹಾಕಿದ್ದ ರಿಟ್ ಅರ್ಜಿಯ ವಿಚಾರಣೆ ಇಂದು ನಡೆದಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 5 ಕ್ಕೆ ಮುಂದೂಡಲಾಗಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್, ಆರೋಗ್ಯ ಸಮಸ್ಯೆಯನ್ನು ಕಾರಣವನ್ನಾಗಿ ನೀಡಿ ಮನೆ ಊಟಕ್ಕೆ ಹಾಗೂ ಇತರೆ ಕೆಲವು ವಸ್ತುಗಳಿಗೆ ಬೇಡಿಕೆ ಇರಿಸಿದ್ದರು. ಮನೆ ಊಟ ಹಾಗೂ ಇತರೆ ವಸ್ತುಗಳನ್ನು ಜೈಲಿಗೆ ತರಿಸಿಕೊಳ್ಳಲು ಅನುಮತಿ ಕೋರಿ ಹೈಕೋರ್ಟ್ಗೆ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಇಂದು (ಆಗಸ್ಟ್ 20) ಹೈಕೋರ್ಟ್ನ ಏಕಸದಸ್ಯ ಪೀಠವು ಅರ್ಜಿಯ ವಿಚಾರಣೆ ನಡೆಸಿದ್ದು ಸೆಪ್ಟೆಂಬರ್ 5ಕ್ಕೆ ವಿಚಾರಣೆಯನ್ನು ಮುಂದೂಡಿದೆ.
ಆರೋಗ್ಯ ಸಮಸ್ಯೆ, ನಿದ್ರಾಹೀನತೆ ಕಾಡುತ್ತಿರುವುದಾಗಿ ಕಾರಣ ನೀಡಿ, ಮನೆ ಊಟ, ಹಾಸಿಗೆ, ಚಚ, ಟ್ಟೆಗಳನ್ನು ತರಸಿಕೊಳ್ಳಲು ಅನುಮತಿ ಕೋರಿ ನಟ ದರ್ಶನ್ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಹಿಂದೆ ಅರ್ಜಿಯ ವಿಚಾರಣೆ ನಡೆಸಿದ್ದ ಪೀಠವು, ಜೈಲು ಅಧಿಕಾರಿಗಳು ತಮ್ಮ ನಿರ್ಣಯವನ್ನು ನೀಡುವಂತೆ ಹೇಳಿದ್ದರು. ಅಂತೆಯೇ ನಿರ್ಧಾರವನ್ನು ಹೈಕೋರ್ಟ್ಗೆ ನೀಡಿದ್ದ ಜೈಲು ಅಧಿಕಾರಿಗಳು ದರ್ಶನ್ಗೆ ಜೈಲು ಊಟ ಸಾಕೆಂದಿದ್ದರು. ಜೈಲಿನ ವೈದ್ಯಾಧಿಕಾರಿ ನೀಡಿದ್ದ ವರದಿಯನ್ನು ಸಹ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಇಂದು ಹೈಕೋರ್ಟ್ನ ಏಕಸದಸ್ಯ ಪೀಠದ ಮುಂದೆ ನಡೆದ ವಿಚಾರಣೆ ವೇಳೆ, ವೈದ್ಯಾಧಿಕಾರಿಗಳು ದರ್ಶನ್ಗೆ ಮನೆ ಊಟವನ್ನು ನಿರಾಕರಿಸಿದ್ದಾರೆ ಎಂದು ರಾಜ್ಯ ಅಭಿಯೋಜಕ ಬೆಳ್ಳಿಯಪ್ಪ ಹೇಳಿದರು. ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಿರುವುದಾಗಿ ತಿಳಿಸಿದರು. ಆದರೆ ದರ್ಶನ್ ಪರ ವಕೀಲರು ವೈದ್ಯಾಧಿಕಾರಿಗಳ ವರದಿ ನೋಡಿ ವಾದಮಂಡನೆಗೆ ಸಮಯ ಬೇಕಾಗುತ್ತದೆಯಾದ್ದರಿಂದ ವಾದ ಮಂಡಿಸಲು ಕಾಲಾವಕಾಶ ನೀಡುವಂತೆ ಮನವಿ ಮಾಡಿದರು. ಅಂತೆಯೇ ನ್ಯಾಯಾಧೀಶರು ವಿಚಾರಣೆಯನ್ನು ಸೆಪ್ಟೆಂಬರ್ 5 ಕ್ಕೆ ಮುಂದೂಡಿದರು.
ಆಗಸ್ಟ್ 28 ರವೆರಗೆ ದರ್ಶನ್ರ ನ್ಯಾಯಾಂಗ ಬಂಧನ ವಿಸ್ತರಿಸಿ ಕಳೆದ ವಾರ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಆದೇಶ ನೀಡಿದೆ. ಇದೀಗ ಮನೆ ಊಟದ ಅರ್ಜಿಯ ವಿಚಾರಣೆ ಸೆಪ್ಟೆಂಬರ್ 5ಕ್ಕೆ ಮುಂದೂಡಲಾಗಿದೆ. ಈ ನಡುವೆ ಪ್ರಕರಣದ ನಂಬರ್ 1 ಆರೋಪಿ ಪವಿತ್ರಾ ಗೌಡ ಪರ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆ ಶೀಘ್ರವೇ ನ್ಯಾಯಾಧೀಶರ ಮುಂದೆ ಬರಲಿದೆ.
ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಸಾಕ್ಷ್ಯಗಳನ್ನು ಕಲೆ ಹಾಕಿದ್ದು ಕೆಲವು ಡಿಜಿಟಲ್ ಸಾಕ್ಷ್ಯಗಳ ಎಫ್ಎಸ್ಎಲ್ ವರದಿಯಾಗಿ ಕಾಯುತ್ತಿದ್ದಾರೆ. ಹೈದರಾಬಾದ್ನಿಂದ ಈ ಎಫ್ಎಸ್ಎಲ್ ವರದಿಗಳು ಬರಬೇಕಿದ್ದು ವರದಿಗಳು ಬಂದ ಕೂಡಲೇ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಿದ್ದಾರೆ. ಮುಂದಿನ ತಿಂಗಳ ಮೊದಲ ವಾರದಲ್ಲಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡುವ ಸಾಧ್ಯತೆ ಇದೆ.
ಅರವಿಂದ್ ಕೇಜ್ರವಾಲ್ ನ್ಯಾಯಾಂಗ ಬಂಧನ ವಿಸ್ತರಣೆ
ಮದ್ಯ ನೀತಿ ಸಿಬಿಐ ಪ್ರಕರಣದಲ್ಲಿ ಸಿಎಂ ಅರವಿಂದ್ ಕೇಜ್ರವಾಲ್ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಮಂಗಳವಾರ ವಿಸ್ತರಿಸಿದೆ.
ಕಸ್ಟಿ ಅವಧಿ ುಕ್ತಾಯಗೊಂಡಿದ್ದರಿಂದ ಸಿಬಿಐ ಅವರನ್ನು ವಿಡಿಯೋ ಕಾನ್ಸರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿತು.
ಈ ಸಂದರ್ಭದಲ್ಲಿ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ನ್ಯಾಯಾಲಯದ ಕಸ್ಟಡಿ ಅವಧಿಯನ್ನು ಇದೇ 27ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ. ಕೇಜ್ರವಾಲ್ಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಇದೇ ತಿಂಗಳ 14 ರಂದು ನಿರಾಕರಿಸಿತ್ತು. ಬಂಧನವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗೆ ಸಿಬಿಐ ಪ್ರತಿಕ್ರಿಯೆಯನ್ನು ನ್ಯಾಯಾಲಯ ಕೇಳಿದೆ.
ಕೇಬ್ರಿವಾಲ್ ಪರ ವಕೀಲ ಅಭಿಷೇಕ್ ಸಿಂಘ್ನ ವಾದವನ್ನು ಆಲಿಸಿದರು. ಸಿಬಿಐ ಬಂಧನವನ್ನು ದೆಹಲಿ ಹೈಕೋರ್ಟ್ ಈಗಾಗಲೇ ಎತ್ತಿ ಹಿಡಿದಿದೆ. ಸಿಬಿಐ ಪ್ರಕರಣದಲ್ಲಿ ನಿಯಮಿತ ಜಾಮೀನಿಗಾಗಿ ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸಲು ಸೂಚಿಸಲಾಗಿದೆ.
ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಇಡಿ ಮಾರ್ಚ್ 21ರಂದು ಬಂಧಿಸಿದ್ದು, ಜೂನ್ 20ರಂದು ವಿಚಾರಣಾ ನ್ಯಾಯಾಲಯವು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರವಾಲ್ ಅವರಿಗೆ ಜಾಮೀನು ನೀಡಿತು. ಆದರೆ ಈ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಜುಲೈ 14ರಂದು, ಇಡಿ ಸಲ್ಲಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತು.