ಶೃಂಗೇರಿ ಪಟ್ಟಣ ಪಂಚಾಯ್ತಿಗೆ ‘ಕಮಲ’ವೇ ಅಧಿಪತಿ!
ಪಟ್ಟಣ ಪಂಚಾಯ್ತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಗೆದ್ದು ಬೀಗಿದ ‘ಬಿಜೆಪಿ’
– ನೂತನ ಅಧ್ಯಕ್ಷರಾಗಿ ವೇಣುಗೋಪಾಲ್, ಉಪಾಧ್ಯಕ್ಷರಾಗಿ ಪ್ರಕಾಶ್ ಆಯ್ಕೆ
NAMMUR EXPRESS NEWS
ಶೃಂಗೇರಿ: ಶೃಂಗೇರಿ ಪಟ್ಟಣ ಪಂಚಾಯ್ತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದ್ದು
ನೂತನ ಅಧ್ಯಕ್ಷರಾಗಿ ವೇಣುಗೋಪಾಲ್ ಹಾಗೂ ನೂತನ ಉಪಾಧ್ಯಕ್ಷರಾಗಿ ಪ್ರಕಾಶ್ ಎಂ.ಎಲ್ ರವರು ಆಯ್ಕೆಯಾಗಿದ್ದಾರೆ.
11 ಸದಸ್ಯಬಲ ಹೊಂದಿದ ಪಟ್ಟಣ ಪಂಚಾಯ್ತಿಯಲ್ಲಿ ಸಂಸದರ ಮತ ಸೇರಿದಂತೆ ಬಿಜೆಪಿ 07+01 ಕಾಂಗ್ರೇಸ್ 04 ಸದಸ್ಯರ ಮತ ಪಡೆಯುವುದರ ಮೂಲಕ ಪಟ್ಟಣ ಪಂಚಾಯ್ತಿಯ ಆಡಳಿತದಲ್ಲಿ ಬಿಜೆಪಿ ತನ್ನದೇ ಅಧಿಪತ್ಯ ಮುಂದುವರೆಸಿದೆ.
ಆಯ್ಕೆಯಾದ ನೂತನ ಅಧ್ಯಕ್ಷರು ಉಪಾಧ್ಯಕ್ಷರಿಗೆ ಸಂಸದರಾದ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಮಾಜಿ ಶಾಸಕರಾದ ಡಿ.ಎನ್ ಜೀವರಾಜ್,ಜೆಡಿಎಸ್ ರಾಜ್ಯ ಉಪಾಧ್ಯಕ್ಷರಾದ ಸುಧಾಕರ ಎಸ್. ಶೆಟ್ಟಿ ಸೇರಿದಂತೆ ಜಿಲ್ಲೆಯ ಬಿಜೆಪಿ ಅಧ್ಯಕ್ಷರಾದ ದೇವರಾಜ ಶೆಟ್ಟಿ, ತಾಲೂಕು ಬಿಜೆಪಿ ಅಧ್ಯಕ್ಷರಾದ ಉಮೇಶ್ ತಲಗಾರ್,ಪಟ್ಟಣ ಪಂಚಾಯ್ತಿ ಮಾಜಿ ಅಧ್ಯಕ್ಷರಾದ ಹರೀಶ್ ವಿ.ಶೆಟ್ಟಿ,ಜೆಡಿಎಸ್ ತಾಲೂಕು ಅಧ್ಯಕ್ಷರು,ಬಿಜೆಪಿ ಜಿಲ್ಲಾ ಪ್ರಧಾನಕಾರ್ಯದರ್ಿಗಳಾದ ಪುಣ್ಯಪಾಲ್,ಎಸ್.ಸಿ ಮೋರ್ಚಾ ರಾಜ್ಯ ವಕ್ತಾರರು ಮಾಜಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರಾದ ಡಾ.ಬಿ ಶಿವಶಂಕರ್ ಮತ್ತು ಎಲ್ಲಾ ಸದಸ್ಯರು ತಾಲೂಕಿನ ನಾಯಕರು,ಪ್ರಮುಖರು, ಕಾರ್ಯಕರ್ತರು ಶುಭಕೋರಿದ್ದಾರೆ. ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡರು.