ಶಿವಮೊಗ್ಗ ಜಿಲ್ಲೆಯಲ್ಲಿ ಪತ್ರಕರ್ತರ ದೂರು!
– ತೀರ್ಥಹಳ್ಳಿ ಪತ್ರಕರ್ತನ ಮೇಲೆ ದರ್ಪಕ್ಕೆ ಖಂಡನೆ
– ಪೊಲೀಸ್ ಅಧಿಕಾರಿ ವಿರುದ್ಧ ಎಸ್ಪಿ, ಡಿಸಿಗೆ ದೂರು
NAMMUR EXPRESS NEWS
ತೀರ್ಥಹಳ್ಳಿ: ತೀರ್ಥಹಳ್ಳಿಯಲ್ಲಿ ಪತ್ರಕರ್ತನಿಗೆ ಬೆದರಿಕೆ ಹಾಕಿ ಹಲ್ಲೆಗೆ ಯತ್ನಿಸಿದ ಪೊಲೀಸ್ ಅಧಿಕಾರಿ ವಿರುದ್ಧ ಶಿವಮೊಗ್ಗದ ಜಿಲ್ಲಾ ಪತ್ರಿಕೋದ್ಯಮ ದೂರು ನೀಡಿದೆ.
ತೀರ್ಥಹಳ್ಳಿ ಪೊಲೀಸ್ ಇನ್ಸ್ಪೆಕ್ಟರ್ ಅಶ್ವಥ್ ಗೌಡ ಅವರ ಉದ್ದಟತನ ಖಂಡಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಶಾಖೆ, ಶಿವಮೊಗ್ಗ ಪ್ರೆಸ್ ಟ್ರಸ್ಟ್ ಎಸ್ಪಿ ಹಾಗೂ ಡಿಸಿಗೆ ದೂರು ನೀಡಿದೆ.
ತೀರ್ಥಹಳ್ಳಿಯಲ್ಲಿ ಪ್ರಜಾವಾಣಿ ವರದಿಗಾರ ನಿರಂಜನ್ ಅವರು ವರದಿಗಾಗಿ ರಥಬೀದಿಯಲ್ಲಿ ಪೋಟೋ, ವಿಡಿಯೋ ತೆಗೆಯುವಾಗ ಇಲ್ಲಿನ ಪೊಲೀಸ್ ಇನ್ಸ್ ಪೆಕ್ಟರ್ ಅಶ್ವಥ್ ಗೌಡ ಬಲವಂತವಾಗಿ ಪತ್ರಕರ್ತ ನಿರಂಜನ್ ಅವರಿಂದ ಮೊಬೈಲ್ ಕಿತ್ತುಕೊಂಡು ಠಾಣೆಗೆ ಹೋಗಿರುತ್ತಾರೆ.
ಮೊಬೈಲ್ ಪಡೆಯಲು ಠಾಣೆಗೆ ಹೋದ ನಿರಂಜನ್ ಅವರನ್ನು ಇನ್ಸ್ಪೆಕ್ಟರ್ ಅಶ್ವಥ್ ಗೌಡ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಸುಳ್ಳು ಕೇಸು ಹಾಕಿ ಜೈಲಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಇದನ್ನು ಪ್ರಶ್ನಿಸಿದ ಇತರೆ ಪತ್ರಕರ್ತರ ಜೊತೆಗೂ ಉದ್ದಟತನದಿಂದ ವರ್ತಿಸಿದ್ದಾರೆ ಎಂದು ಆರೋಪಿಸಿದ್ದು, ಮಾಧ್ಯಮ ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಮಾಡಿದ್ದಾರೆ. ಪೊಲೀಸ್ ಅಧಿಕಾರಿಯ ಈ ವರ್ತನೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಶಿವಮೊಗ್ಗ ಜಿಲ್ಲಾ ಶಾಖೆ, ಶಿವಮೊಗ್ಗ ಪ್ರೆಸ್ ಟ್ರಸ್ಟ್ ತೀವ್ರವಾಗಿ ಖಂಡಿಸಿದೆ.
ಸಂಘದ ಜಿಲ್ಲಾಧ್ಯಕ್ಷರಾದ ಕೆ ವಿ ಶಿವಕುಮಾರ್, ರಾಜ್ಯ ಸಮಿತಿ ನಿರ್ದೇಶಕ ಎನ್. ರವಿಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ. ಟಿ.ಅರುಣ್, ಶಿವಮೊಗ್ಗ ಪ್ರೆಸ್ ಟ್ರಸ್ಟ್ ನ ಅಧ್ಯಕ್ಷರಾದ ಎನ್. ಮಂಜುನಾಥ್, ಕಾರ್ಯದರ್ಶಿ ನಾಗರಾಜ ನೆರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಆಗ್ರಹಿಸಿದ್ದಾರೆ.
ಟ್ರಸ್ಟ್ ಅಧ್ಯಕ್ಷ ಎನ್.ಮಂಜುನಾಥ್, ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ವಿ.ಶಿವಕುಮಾರ್, ಹಿರಿಯ ಪತ್ರಕರ್ತರಾದ ನಾಗರಾಜ್ ನೇರಿಗೆ ,ವೈದ್ಯನಾಥ್, ಎನ್.ರವಿಕುಮಾರ್,ಪಿ. ಜೇಸುದಾಸ್, ಗಿರೀಶ್ ಉಮ್ರಾಯ್, ಹೊನ್ನಾಳಿ ಚಂದ್ರಶೇಖರ್, ಶೃಂಗೇರಿ ಚಂದ್ರಶೇಖರ್, ಆರಗ ರವಿ, ವಿ.ಸಿ.ಪ್ರಸನ್ನ, ವೆಂಕಟೇಶ್ ಜಿ.ಹೆಚ್, ಶಿವಮೊಗ್ಗನಂದನ್, ಶಿವಾನಂದ ಕರ್ಕಿ, ಟಿ.ಕೆ.ರಮೇಶ್ ಶೆಟ್ಟಿ, ಕೆ.ಎಸ್.ಹುಚ್ಚರಾಯಪ್ಪ, ವಿ.ಟಿ.ಅರುಣ್, ಆರ್.ಎಸ್. ಹಾಲಸ್ವಾಮಿ, ಮೋಹನ್ ಶೆಟ್ಟಿ, ಮುರುಗರಾಜ ಕೋಣಂದೂರು, ನವೀನ್ ಪುರದಾಳ್, ವಿನಯ್ ತೇಕಲೆ, ಎಸ್.ಕೆ.ಗಜೇಂದ್ರ ಸ್ವಾಮಿ ಸೇರಿದಂತೆ ಅನೇಕ ಪತ್ರಕರ್ತರು ಭಾಗವಹಿಸಿದ್ದರು.