ಟಾಪ್ ನ್ಯೂಸ್ ಕರಾವಳಿ
ಉಡುಪಿಯಲ್ಲಿ ಪತ್ನಿ ಕಡಿದು ಕೊಂದು ಹಾಕಿದ ಪತಿ!
– ಆನ್ ಲೈನ್ ಟ್ರೇಡಿಂಗ್ ನಲ್ಲಿ ಮೋಸ; ನಾಲ್ವರು ಆರೋಪಿಗಳ ಬಂಧನ
– ಮೂಡುಬಿದಿರೆ: ತಂದೆಯಿಂದಲೇ ಅತ್ಯಾಚಾರ ಹೈಸ್ಕೂಲ್ ವಿದ್ಯಾರ್ಥಿನಿ ಗರ್ಭಿಣಿ!
– ಮಂಗಳೂರು: ಪರಸ್ಪರ ಹೊಡೆದಾಡಿಕೊಂಡ ಬೀದಿಬದಿ ವ್ಯಾಪಾರಸ್ಥರ ಸಂಘದ ಪದಾಧಿಕಾರಿಗಳು!
NAMMUR EXPRESS NEWS
ಉಡುಪಿ: ಪತಿಯೇ ಪತ್ನಿಯನ್ನು ಬರ್ಬರವಾಗಿ ಕೊಂದಿರುವ ಆರೋಪ ಕೇಳಿ ಬಂದಿದ್ದು, ಆರೋಪಿಯನ್ನು ಕೋಟ ಪೊಲೀಸರು ಬಂಧಿಸಿದ್ದಾರೆ.
ಜಯಶ್ರೀ (28) ಕೊಲೆಯಾದವಳು. ಕಿರಣ್ ಉಪಾಧ್ಯ(30) ಕೊಲೆ ಆರೋಪಿಯಾಗಿದ್ದಾನೆ.ಉಡುಪಿಯಲ್ಲಿ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಕಾರ್ಕಡ ಕಡಿದ ಹೆದ್ದಾರಿ ಬಳಿ ಘಟನೆ ನಡೆದಿದೆ. ಈ ಜೋಡಿ ಕಾರ್ಕಡ ಅಂಗನವಾಡಿ ಕೇಂದ್ರದ ಸಮೀಪ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಶುಕ್ರವಾರ ಮುಂಜಾನೆ ಪತ್ನಿಯನ್ನು ಕಿರಣ್ ಉಪಾಧ್ಯ ಕೊಲೆ ಮಾಡಿದ್ದ ಎನ್ನುವ ಮಾಹಿತಿ ಇೆ.
ಶಂಕ ಮೇರೆಗೆ ಪತಿ ಕಿರಣ್ ಉಪಾಧ್ಯ ಗುಂಡ್ಮಿಯನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ದೂರು ದಾಖಲಾಗಿದ್ದುಈ ಕುರಿತು ಪೊಲೀಸರು ವಿವರ ಸಂಗ್ರಹಿಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಉಡುಪಿ: ಆನ್ ಲೈನ್ ಟ್ರೇಡಿಂಗ್ ಮೋಸ; ಆರೋಪಿಗಳ ಬಂಧನ
ಉಡುಪಿ: ಆನ್ ಲೈನ್ ಟ್ರೇಡಿಂಗ್ ನಲ್ಲಿ ಹೆಚ್ಚಿನ ಲಾಭಾಂಶದ ಆಸೆ ತೋರಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಉಡುಪಿ ಸೆನ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ತಾಲೂಕಿನ ಕುರಿಯ ಗ್ರಾಮದ ನಿವಾಸಿ ಮಹಮ್ಮದ್ ಮುಸ್ತಫಾ ಪಿ (36) ಕಾಸರಗೋಡು ಮಂಜೇಶ್ವರ ತಾಲೂಕಿನ ಕುಂಬ್ಳೆಯ ನಿವಾಸಿ ಖಾಲಿದ್ ಬಿ. (39), ಕಾಸರಗೋಡು ನೀರ್ಚಾಲ್ ಗ್ರಾಮದ ನಿವಾಸಿ ಮೊಹಮ್ಮದ್ ಸಫಾನ್ ಕೆ.ಎ, (22) ಹಾಗೂ ಮಂಗಳೂರು ಪ್ರಗತಿ ಬಿಜೈ ನಿವಾಸಿ ಸತೀಶ್ ಶೇಟ್ (52) ಬಂಧಿತ ಆರೋಪಿಗಳು.ಬಂಧಿತ ಆರೋಪಿಗಳು ಉಪೇಂದ್ರ ಭಟ್ ಎಂಬವರಿಗೆ ಆನ್ ಲೈನ್ ಟ್ರೇಡಿಂಗ್ ನಲ್ಲಿ ಹೆಚ್ಚಿನ ಲಾಭಾಂಶದ ಆಸೆ ತೋರಿಸಿ ಒಟ್ಟು 33,10,000 ರೂ. ಹಣವನ್ನು ತಮ್ಮ ಖಾತೆಗೆ ವರ್ಗಾಯಿಸಿಕೊಂಡು ವಂಚಿಸಿದ್ದರು.ಈ ಬಗ್ಗೆ ಉಪೇಂದ್ರ ಭಟ್ ಅವರು ಉಡುಪಿ ಸೆನ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖೆ ಇಳಿದ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ, 5 ಮೊಬೈಲ್ ಪೋನ್ ಹಾಗೂ 13 ಲಕ್ಷ ರೂ. ನಗದನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ.
ಪ್ರಕರಣದ ಪ್ರಮುಖ ಸೂತ್ರಧಾರಿಗಳು ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ತಂದೆಯಿಂದಲೇ ಅತ್ಯಾಚಾರ ಹೈಸ್ಕೂಲ್ ವಿದ್ಯಾರ್ಥಿನಿ ಗರ್ಭಿಣಿ!
ಮೂಡುಬಿದಿರೆ: ತನ್ನ ಅಪ್ರಾಪ್ತ ಪುತ್ರಿಯ ಮೇಲೆ ಅತ್ಯಾಚಾರ ಎಸಗಿ ಆಕೆ ಗರ್ಭವತಿಯಾದ ಅಮಾನುಷ ಘಟನೆ ಮೂಡುಬಿದಿರೆ ಹೊರವಲಯ ಗ್ರಾಮಾಂತರ ಪ್ರದೇಶದಲ್ಲಿ ನಡೆದಿದೆ. ಬಾಲಕಿಯ ಆರೋಪಿ ತಂದೆಯನ್ನು ಮೂಡುಬಿದಿರೆ ಪೊಲೀಸರು ಫೊಕ್ಸ್ ಪ್ರಕರಣದಲ್ಲಿ ಬಂಧಿಸಿದ್ದಾರೆ.
ಐವತ್ತೈದರ ಹರೆಯದ ಬಂಧಿತ ಆರೋಪಿ ವೃತ್ತಿಯಲ್ಲಿ ಕೂಲಿ ಕಾರ್ಮಿಕ. ಆರು ತಿಂಗಳ ಹಿಂದೆ ಮನೆಯಲ್ಲೆ ತನ್ ಮಳನ್ನು ಲೈಂಗಿಕವಾಗಿ ಬಳಸಿಕೊಂಡು ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ. ಪ್ರೌಢ ಶಾಲೆಯಲ್ಲಿ ಓದುತ್ತಿರುವ ಆಕೆಯ ಆರೋಗ್ಯದಲ್ಲಿ ಏರು ಪೇರು ಉಂಟಾದಾಗ ಮಂಗಳೂರಿನ ಸರಕಾರಿ ಆಸ್ಪತ್ರೆಗೆ ಆತನೇ ಕರೆದೊಯ್ದಿದ್ದ. ಅಲ್ಲಿ ವೈದ್ಯಕೀಯ ತಪಾಸಣೆಗೊಳಪಡಿಸಿದಾಗ ಮಗಳು ಆರು ತಿಂಗಳ ಗರ್ಭಿಣಿಯಾಗಿರುವುದು ಪತ್ತೆಯಾಗಿದೆ.
ಪೊಲೀಸ್ ತನಿಖೆಯ ದಾರಿ ತಪ್ಪಿಸಲು ಪ್ರಾರಂಭದಲ್ಲಿ ಈತ ಬೇರೆಯವರ ಹೆಸರು ಹೇಳಿದ್ದ ಎನ್ನಲಾಗಿದೆ. ನಂತರ ಹೆಚ್ಚಿನ ವಿಚಾರಣೆ ನಡೆಸಿದಾಗ ಕೃತ್ಯ ನಡೆಸಿದ್ದನ್ನು ಕೊನೆಗೂ ಒಪ್ಪಿಕೊಂಡನೆನ್ನಲಾಗಿದೆ. ಮಂಗಳೂರು ಮಹಿಳಾ ಪೊಲೀಸ್ಠಾಣೆಯಲ್ಲಿ ಆರೋಪಿ ವಿರುದ್ಧ ಫೊಕ್ಸ್ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಗುರುವಾರ ಮೂಡುಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಕುಮಾರ್ ಬಂಧಿಸಿದ್ದಾರೆ.
ಪರಸ್ಪರ ಹೊಡೆದಾಡಿಕೊಂಡ ಬೀದಿಬದಿ ವ್ಯಾಪಾರಸ್ಥರ ಸಂಘದ ಪದಾಧಿಕಾರಿಗಳು!
ಮಂಗಳೂರು: ಬೀದಿಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆಯ ವೇಳೆ ಮಹಾನಗರ ಪಾಲಿಕೆಯ ವಿರುದ್ಧ ಒಗ್ಗೂಡಿ ಪ್ರತಿಭಟನೆ ನಡೆಸಿದ್ದ ಬೀದಿ ವ್ಯಾಪಾರಿಗಳ ಸಂಘದ ಪದಾಧಿಕಾರಿಗಳ ಮಧ್ಯೆ ಗುರುವಾರ ಹೊಡೆದಾಟ ನಡೆದಿದ್ದು, ಬಂದರು ಠಾಣೆಗೆ ದೂರು ನೀಡಲಾಗಿದೆ.ದ.ಕ. ಜಿಲ್ಲಾ ಬೀದಿ ವ್ಯಾಪಾರಿಗಳ ಶ್ರೇಯೋಭಿವೃದ್ಧಿ ಸಂಘದ ಗೌರವಾಧ್ಯಕ್ಷ ಬಿ.ಕೆ. ಇಮ್ಮಿಯಾಝ್ ಮತ್ತಿತರರು ಹಲ್ಲೆ ನಡೆಸಿರುವುದಾಗಿ ಆರೋಪಿಸಿ ಸಂಘದ ಕೋಶಾಧಿಕಾರಿ ಆಸೀಫ್ ಬಾವ ಉರುಮಣೆ ಮತ್ತು ಉಪಾಧ್ಯಕ್ಷ ರಹ್ಮಾನ್ ಅಡ್ಯಾರ್ ಎಂಬವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಈ ಮಧ್ಯೆ ಸಂಘದ ಕೋಶಾಧಿಕಾರಿ ಆಸೀಫ್ ಬಾವ ಉರುಮಣೆ, ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ, ನವಾಝ್ ಕಣ್ಣೂರು, ಆನಂದ ಮತ್ತಿತರರ ವಿರುದ್ಧ ಬೀದಿಬದಿ ವ್ಯಾಪಾರಸ್ಥರ ಸಂಘದ ಪ್ರಧಾನ ಕಾರ್ಯದರ್ಶಿ ಸಂತೋಷ್ ಆರ್.ಎಸ್. ಬಂದರು ಠಾಣೆಗೆ ದೂರು ನೀಡಿದ್ದಾರೆ.ಗುರುವಾರ ಸಂಜೆ ಸುಮಾರು 4ಕ್ಕೆ ಸಂಘದ ಕಚೇರಿಯಲ್ಲಿ ಸಭೆ ನಡೆಸುತ್ತಿದ್ದಾಗ ಆರೋಪಿಗಳು ಕಚೇರಿಗೆ ಅಕ್ರಾಗಿ ಪ್ರವೇಶಿಸಿ ಜೀವ ಬೆದರಿಕೆ ಹಾಕಿ, ಹಲ್ಲೆ ನಡೆಸಲು ಮುಂದಾಗಿದ್ದಾರೆ. ಸಂಘದ ಬೋರ್ಡ್ ಮತ್ತು ಸಿಐಟಿಯು ಬಾವುಟವನ್ನು ಎಸೆದು ದಾಂಧಲೆ ನಡೆಸಿದ್ದಾರೆ ಎಂದು ಸಂತೋಷ್ ದೂರಿನಲ್ಲಿ ತಿಳಿಸಿದ್ದಾರೆ.
ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾ – ಕಾರು ಡಿಕ್ಕಿ: ವಿದ್ಯಾರ್ಥಿಗಳಿಗೆ ಗಾಯ!
ಪುತ್ತೂರು: ಬೊಳುವಾರು – ಹಾರಾಡಿ ನಡುವೆ ರಿಕ್ಷಾ ಹಾಗೂ ಬ್ರೇಜಾ ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ಗುರುವಾರ ಸಂಜೆ ನಡೆದಿದೆ.ಘಟನೆಯಲ್ಲಿ ಶಾಲಾ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಕಾರು ಕೆಎ 21 ಬಿ 8632 ಹಾಗೂ ಪುತ್ತೂರಿನಿಂದ ತೆರಳುತ್ತಿದ್ದ ರಿಕ್ಷಾ ಕೆಎ 21 ಝಡ್ 4852 ನಡುವೆ ಅಪಘಾತ ಸಂಭವಿಸಿದೆ.