ತೀರ್ಥಹಳ್ಳಿ ಪಟ್ಟಣ ಪಂಚಾಯತಿಗೆ ಅಸಾದಿ ಸಾರಥಿ!
– ಅಧ್ಯಕ್ಷರಾಗಿ ರಹಮತುಲ್ಲಾ ಅಸಾದಿ ಆಯ್ಕೆ, ಗೀತಾ ರಮೇಶ್ ಉಪಾಧ್ಯಕ್ಷೆ
– ನೂತನ ಪದಾಧಿಕಾರಿಗಳಿಗೆ ಶುಭಾಶಯಗಳು
NAMMUR EXPREES NEWS
ತೀರ್ಥಹಳ್ಳಿ: ತೀರ್ಥಹಳ್ಳಿ ನೂತನ ಪಟ್ಟಣ ಪಂಚಾಯ್ತಿ ಅಧ್ಯಕ್ಷರಾಗಿ ರಹಮತುಲ್ಲಾ ಅಸಾದಿ, ಉಪಾಧ್ಯಕ್ಷರಾಗಿ ಮಾಜಿ ಅಧ್ಯಕ್ಷರಾದ ಗೀತಾ ರಮೇಶ್ ಆಯ್ಕೆಯಾಗಿದ್ದಾರೆ.
ಮುಂದಿನ 26 ತಿಂಗಳಿಗೆ ಅಧ್ಯಕ್ಷಸ್ಥಾನ ಸಾಮಾನ್ಯ ವರ್ಗಕ್ಕೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗದ ಮಹಿಳೆಗೆ ಮೀಸಲಾಗಿದ್ದು, ಆಗಸ್ಟ್ 27ರ ಮಂಗಳವಾರ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು.
ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಸದಸ್ಯ ಮಾಜಿ ಅಧ್ಯಕ್ಷರಾದ ರಹಮತುಲ್ಲಾ ಅಸಾದಿ, ಬಿಜೆಪಿಯಿಂದ ಸೊಪ್ಪುಗುಡ್ಡೆ ರಾಘವೇಂದ್ರ, ಉಪಾಧ್ಯಕ್ಷರ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಿಂದ ಗೀತಾ ರಮೇಶ್, ಬಿಜೆಪಿಯಿಂದ ಜ್ಯೋತಿ ಗಣೇಶ್ ನಾಮ ಪತ್ರ ಸಲ್ಲಿಸಿದ್ದರು.
ನೂತನ ಅಧ್ಯಕ್ಷರಾಗಿ ರಹಮತುಲ್ಲಾ ಅಸಾದಿ ಎರಡನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಗೀತಾ ರಮೇಶ್ ಆಯ್ಕೆಯಾಗಿದ್ದಾರೆ.
ಅಸಾದಿ, ರತ್ನಾಕರ್ ಶೆಟ್ಟಿ, ಜಯಪ್ರಕಾಶ್ ಶೆಟ್ಟಿ ಅವರಿಗೆ ತಲಾ 8 ತಿಂಗಳ ಅಧಿಕಾರ ಸಿಗಲಿದೆ ಎಂದು ಹೇಳಲಾಗಿದೆ.
ಬಹುಮತ ಯಾರಿಗೆ?
ಪ.ಪಂ.ನಲ್ಲಿ ಬಹುಮತ ಇರುವ ಕಾಂಗ್ರೆಸ್ ಒಂಭತ್ತು ಕೌನ್ಸಿಲರ್ಗಳು ಇದ್ದಾರೆ. ಬಿಜೆಪಿ ಯಾವುದೇ ಪ್ಲಾನ್ ಮಾಡಿಲ್ಲ.
ನೂತನ ಪದಾಧಿಕಾರಿಗಳಿಗೆ ಕಾಂಗ್ರೆಸ್ ನಾಯಕರಾದ ಕಿಮ್ಮನೆ ರತ್ನಾಕರ್, ಆರ್. ಎಂ ಮಂಜುನಾಥ ಗೌಡ ಶುಭಾಶಯ ಸಲ್ಲಿಸಿದ್ದಾರೆ.