ಮತ್ತೆ ಗೆದ್ದ ತೀರ್ಥಹಳ್ಳಿ ರಾಜಕೀಯ ಜೋಡೆತ್ತುಗಳು!
– ಕಿಮ್ಮನೆ, ಮಂಜುನಾಥ ಗೌಡ ಸಾರಥ್ಯದಲ್ಲಿ ತೀರ್ಥಹಳ್ಳಿ ಪಟ್ಟಣ ಪಂಚಾಯತಿ ಮತ್ತೆ ಕಾಂಗ್ರೆಸ್ ಪಾಲು
– 1 ಸ್ಥಾನ ಉಲ್ಟಾ ಪಲ್ಟಾ ಆಗಿದ್ದರೂ ಬಿಜೆಪಿಗೆ ಕುರ್ಚಿ
– ಪಕ್ಷನಿಷ್ಠೆ ಮೆರೆದ ಕಾಂಗ್ರೆಸ್ ಬೆಂಬಲಿತ ಸದಸ್ಯರು
NAMMUR EXPREES NEWS
ತೀರ್ಥಹಳ್ಳಿ: ತೀರ್ಥಹಳ್ಳಿ ನೂತನ ಪಟ್ಟಣ ಪಂಚಾಯ್ತಿ ಅಧ್ಯಕ್ಷರಾಗಿ ರಹಮತುಲ್ಲಾ ಅಸಾದಿ, ಉಪಾಧ್ಯಕ್ಷರಾಗಿ ಮಾಜಿ ಅಧ್ಯಕ್ಷರಾದ ಗೀತಾ ರಮೇಶ್ ಆಯ್ಕೆಯಾಗಿದ್ದಾರೆ. ಇದರ ಹಿಂದೆ ತೀರ್ಥಹಳ್ಳಿ ಇಬ್ಬರು ನಾಯಕರಾದ ಕಿಮ್ಮನೆ ರತ್ನಾಕರ್, ಸಹಕಾರಿ ನಾಯಕರಾದ ಡಾ.ಆರ್. ಎಂ.ಮಂಜುನಾಥ ಗೌಡ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಳಿಗ್ಗೆಯಿಂದಲೇ ಚುನಾವಣೆ ಪ್ರಕ್ರಿಯೆ ಶುರುವಾಗಿತ್ತು. ಬಿಜೆಪಿ ಮತ್ತು ಕಾಂಗ್ರೆಸ್ ಎರಡು ಪಕ್ಷದಿಂದ ಅಧ್ಯಕ್ಷ ಮತ್ತು ಉಪಾಧ್ಯರ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಕಾಂಗ್ರೆಸ್ ಸದಸ್ಯ ಮಾಜಿ ಅಧ್ಯಕ್ಷರಾದ ರಹಮತುಲ್ಲಾ ಅಸಾದಿ, ಬಿಜೆಪಿಯಿಂದ ಸೊಪ್ಪುಗುಡ್ಡೆ ರಾಘವೇಂದ್ರ, ಉಪಾಧ್ಯಕ್ಷರ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಿಂದ ಗೀತಾ ರಮೇಶ್, ಿಜೆಪಿಯಿಂದ ಜ್ಯತಿ ಗಣೇಶ್ ನಾಮ ಪತ್ರ ಸಲ್ಲಿಸಿದ್ದರು.
ನೂತನ ಅಧ್ಯಕ್ಷರಾಗಿ ರಹಮತುಲ್ಲಾ ಅಸಾದಿ ಎರಡನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಗೀತಾ ರಮೇಶ್ ಆಯ್ಕೆಯಾಗಿದ್ದಾರೆ. ಅಸಾದಿ, ರತ್ನಾಕರ್ ಶೆಟ್ಟಿ, ಜಯಪ್ರಕಾಶ್ ಶೆಟ್ಟಿ ಅವರಿಗೆ ತಲಾ 8 ತಿಂಗಳ ಅಧಿಕಾರ ಸಿಗಲಿದೆ
ಪ.ಪಂ.ನಲ್ಲಿ ಬಹುಮತ ಇರುವ ಕಾಂಗ್ರೆಸ್ ಒಂಭತ್ತು ಕೌನ್ಸಿಲರ್ಗಳು ಇದ್ದಾರೆ. ಬಿಜೆಪಿ ಯಾವುದೇ ಪ್ಲಾನ್ ಮಾಡಿಲ್ಲ.
ನೂತನ ಪದಾಧಿಕಾರಿಗಳಿಗೆ ಕಾಂಗ್ರೆಸ್ ನಾಯಕರಾದ ಕಿಮ್ಮನೆ ರತ್ನಾಕರ್, ಆರ್. ಎಂ ಮಂಜುನಾಥ ಗೌಡ ಶುಭಾಶಯ ಸಲ್ಲಿಸಿದ್ದಾರೆ.
ಅಭಿನಂದನಾ ಸಭೆಯಲ್ಲಿ ಮಾತನಾಡಿ, ತೀರ್ಥಹಳ್ಳಿ ಅಭಿವೃದ್ಧಿಗೆ ಬದ್ಧವಾಗಿರಬೇಕು. ಪಕ್ಷ ನಿಷ್ಠೆ ತೋರಿದ ಎಲ್ಲಾ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು.
20 ವರ್ಷಗಳ ನಂತರ ಕಾಂಗ್ರೆಸ್ ಇಲ್ಲಿ ಬಹುಮತ ಪಡೆದಿದೆ. ಕಿಮ್ಮನೆ-ಆರ್ಎಂಎಂ ನೇತೃತ್ವದಲ್ಲಿ ಪಕ್ಷದ ಹಿರಿಯರು ಹಾಗೂ ಕಾಂಗ್ರೆಸ್ ಕೌನ್ಸಿಲರ್ಗಳ ಸಭೆಯಲ್ಲಿ ಎಲ್ಲಾ ಸದಸ್ಯರು ಒಮ್ಮತದ ನಿರ್ಧಾರ ಮಾಡಿದರು.
ಜಯಪ್ರಕಾಶ್ ಶೆಟ್ಟಿ, ರತ್ನಾಕರ್ ಶೆಟ್ಟಿ, ಮಂಜುಳಾ ನಾಗೇಂದ್ರ, ಬಿ.ಗಣಪತಿ, ಗೀತಾ ರಮೇಶ್, ಶಬ್ದಂ, ಸುಶೀಲಾ ಶೆಟ್ಟಿ, ನಮೃತ್ ಪಕ್ಷನಿಷ್ಠೆ ಮೆರೆದರು. ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಅಭಿನಂದನೆ ಸಲ್ಲಿಸಿದರು.