ಕರಾವಳಿ, ಮಲೆನಾಡು ಭಾಗದಲ್ಲಿ 3 ದಿನ ಭಾರೀ ಮಳೆ?
• ಕರಾವಳಿ ಭಾಗದಲ್ಲಿ ಹೈ ಅಲರ್ಟ್ ಘೋಷಣೆ!
• ಬೆಂಗಳೂರು ನಗರದಲ್ಲೂ ಮಳೆ ಸಾಧ್ಯತೆ
NAMMUR EXPRESS NEWS
ದೆಹಲಿ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಮತ್ತು ಅರಬ್ಬಿ ಸಮುದ್ರದಲ್ಲಿ ಮೇಲುಬ್ಬರದ ಪರಿಣಾಮವಾಗಿ ಕರ್ನಾಟಕದಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಇಂದಿನಿಂದ ಕರ್ನಾಟಕ ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮಳೆಯ ಆರ್ಭಟ ಇನ್ನಷ್ಟು ಹೆಚ್ಚಲಿದೆ. ಹೀಗಾಗಿ ಕರಾವಳಿ ಭಾಗದಲ್ಲಿ ಹೈ ಅಲರ್ಟ್ ಘೋಷಣೆ ಮಾಡುವ ಸಾಧ್ಯತೆ ಇದೆ.
ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನದ ಮಲೆನಾಡು ಭಾಗಗಳಾದ ಸಕಲೇಶಪುರ ತಾಲ್ಲೂಕು ಸೇರಿದಂತೆ ಹಲವಾರು ಜಿಲ್ಲೆಗಳಿಗೆ ಭಾರಿ ಮಳೆ ಬೀಳುವ ಮುನ್ನೆಚ್ಚರಿಕೆ ನೀಡಲಾಗಿದೆ.
ಕರ್ನಾಟಕದ ಒಳನಾಡಿನಲ್ಲಿ ಮಳೆ ಹೆಚ್ಚುವ ಮುನ್ಸೂಚನೆ ಇದ್ದು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆ ಆಗಲಿದ್ದು, ದಕ್ಷಿಣ ತ್ತು ಉತ್ತರ ಒಳನಾಡು ಜಿಲ್ಲೆಗಳ್ಲೂ ಮಳೆ ತನ್ನ ಅಬ್ಬರ ತೋರಿಸಲಿದೆ. ಹೀಗಾಗಿ ರಾಜಧಾನಿ ಬೆಂಗಳೂರು ಸೇರಿದಂತೆ, ಮೈಸೂರು, ತುಮಕೂರು, ಹಾಸನ ಬೆಳಗಾವಿ, ಧಾರವಾಡ ಭಾಗದಲ್ಲೂ ಮಳೆ ಹೆಚ್ಚುವ ಬಗ್ಗೆ ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರದ ಪ್ರಮುಖ ಪ್ರದೇಶಗಳಿಗೆ ಮಳೆಯಿಂದ ಕಂಟಕವೇ ಎದುರಾಗಬಹುದು ಎಂದು ಎಚ್ಚರಿಕೆ ನೀಡಲಾಗಿದೆ. ಮಳೆಯ ಆರ್ಭಟ ಬೆಂಗಳೂರಲ್ಲಿ ಜಾಸ್ತಿ ಆಗಲಿದ್ದು, ಆ. 30,31,01ರಂದು ಕೂಡ ಮಳೆ ಅಬ್ಬರಿಸುವ ಮುನ್ಸೂಚನೆಯ ಮಾಹಿತಿ ದೊರಕಿದೆ.