ಇನ್ಮುಂದೆ ರಾಜ್ಯದೆಲ್ಲೆಡೆ ಕೆಮಿಕಲ್ ಬಳಸಿದ ಕೇಕ್ ನಿಷೇಧ?
* ಕೇಕ್ ನಲ್ಲಿ ಕೃತಕ ಬಣ್ಣ ಬಳಕೆ ನಿರ್ಬಂಧ
* ಕೇಕ್ ಬಣ್ಣದಲ್ಲಿ ಅಪಾಯಕಾರಿ ಅಂಶ ಪತ್ತೆ
NAMMUR EXPRESS NEWS
ಬೆಂಗಳೂರು : ಗೋಬಿ ಮಂಚೂರಿ, ಕಬಾಬ್ ಬಳಿಕ ಕೇಕ್ ನಲ್ಲಿ ಕೃತಕ ಬಣ್ಣ ಬಳಕೆಗೆ ನಿರ್ಬಂಧ ಹೇರಲು ಆರೋಗ್ಯ ಇಲಾಖೆ ನಿರ್ಧರಿಸಿದೆ.
ಕರ್ನಾಟಕದಲ್ಲಿ ಕಲರ್ ಕಾಟನ್ ಕ್ಯಾಂಡಿ ಬಳಕೆಯನ್ನು ರಾಜ್ಯ ಸರ್ಕಾರ ನಿಷೇಧಿಸಿ ಆದೇಶ ಹೊರಡಿಸಿದೆ. ಕೃತಕ ಬಣ್ಣ ಬಳಸುವುದರಿಂದ ಆರೋಗ್ಯದ ಮೇಲೆ ಭಾರೀ ದುಷ್ಪರಿಣಾಮ ಬೀರುವುದರಿಂದ ಕಲರ್ ಕಾಟನ್ ಕ್ಯಾಂಡಿಯನ್ನು ನಿಷೇಧಿಸಲಾಗಿದೆ. ಜೊತೆಗೆ ಗೋಬಿ ಮಂಚೂರಿ ತಯಾರಿಸುವಾಗ ಕೃತಕ ಬಣ್ಣ ಬಳಸುವುದನ್ನು ಕೂಡ ನಿಷೇಧಿಸಲು ಸರ್ಕಾರ ಆದೇಶಿಸಿದೆ. ಇದೀಗ ಕೇಕ್ ನ ಸರದಿ.
ಕೇಕ್ ನಲ್ಲಿ ಬಳಸುವ ಕೃತಕ ಬಣ್ಣವನ್ನು ನಿರ್ಬಂಧಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಈ ಬಗ್ಗೆ ಶೀಘ್ರವೇ ಸರ್ಕಾರ ಆದೇಶ ಹೊರಡಿಸುವ ಸಾಧ್ಯತೆಯಿದೆ. ಕೇಕ್ ನಲ್ಲಿ ಬಳಸುವ ಬಣ್ಣದಲ್ಲಿ ಅಪಾಯಕಾರಿ ಅಂಶಗಳು ಪತ್ತೆಯಾದ ಹಿನ್ನೆಲೆ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ಹೇಳಲಾಗಿದೆ.