ಕರಾವಳಿ ಟಾಪ್ ನ್ಯೂಸ್
* ವೇಶ್ಯವಾಟಿಕೆ ದಂದೆಯಲ್ಲಿ ಸಿಕ್ಕಿಬಿದ್ದ ಬೆಳ್ತಂಗಡಿ ಟೆಕ್ಕಿ!!
* ಉಡುಪಿ: ಇಸ್ಲಾಂಗೆ ಮತಾಂತರವಾಗುವಂತೆ ಮುಸ್ಲಿಂ ಯುವಕನಿಂದ ಷರತ್ತು!!
* ಮಣಿಪಾಲ:ಮಹಿಳೆಯ ಕುತ್ತಿಗೆಗೆ ಕೈ ಹಾಕಿ ಸರ ಕಳ್ಳತನ!
NAMMUR EXPRESS NEWS
ಬೆಳ್ತಂಗಡಿ: ಕೆಲವೇ ದಿನಗಳಲ್ಲಿ ಮದುವೆ ನಿಶ್ಚಿತಾರ್ಥವಾಗಬೇಕಿದ್ದ ಟೆಕ್ಕಿಯೊಬ್ಬ ವೇಶ್ಯಾವಾಟಿಕೆ ದಂಧೆಯಲ್ಲಿ ಬೆಂಗಳೂರಿನಲ್ಲಿ సిసిబి ಪೊಲೀಸರ ಅತಿಥಿಯಾಗಿದ್ದಾನೆ. ಈ ವಿಷಯ ತಿಳಿದಿದ್ದಂತೆ ಇದನ್ನು ನಿಶ್ಚಿತಾರ್ಥ ರದ್ದಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಈ ಪ್ರಕರಣದಲ್ಲಿ ಬೆಳ್ತಂಗಡಿ ಮೂಲದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ವಾಸವಾಗಿದ್ದ ಟೆಕ್ಕಿ ಸುಬ್ರಮಣ್ಯ ಶಾಸಿ, ಹೊಂಗಸಂದ್ರದ ಕರಿಷ್ಮಾಶೇಖ್ ಅಲಿಯಾಸ್ ಮುಸ್ಕಾನ್ ಹಾಗೂ ಶಾಂತಿಪುರದ ಸೂರಜ್ ಶಾಹಜೀ ಬಂಧಿತರು.
ಆರೋಪಿಗಳಾದ ಕರಿಷ್ಮಾ ಹಾಗೂ ಸೂರಜ್ ಮೂಲತಃ ಪಶ್ಚಿಮ ಬಂಗಾಳದ ರಾಜ್ಯದವರು ಎಂು ಗುರುತಿಸಲಾಗಿ ಇವರು ಹಲವು ವರ್ಷಗಳ ಹಿಂದೆ ನಗರಕ್ಕೆ ಉದ್ಯೋಗಕ್ಕಾಗಿ ಬಂದಿದ್ದು, ನಂತರ ವೇಶ್ಯಾವಾಟಿಕೆ ದಂಧೆಗೆ ಇಳಿದಿದ್ದರು. ನಗರದಲ್ಲಿ ಮನೆ ಬಾಡಿಗೆ ಪಡೆದು ಅಲ್ಲಿ ತಮ್ಮ ದಂಧೆಯನ್ನು ನಡೆಸುತ್ತಿದ್ದರು.
ಕೆಲ ದಿನಗಳ ಹಿಂದೆ ಬಾಂಗ್ಲಾದೇಶದ ಇಬ್ಬರು ಬಾಲಕಿಯರನ್ನು ಕರೆತಂದು ವೇಶ್ಯಾವಾಟಿಕೆ ದಂಧೆಗೆ ದೂಡಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಗ್ರಾಹಕ ಟೆಕ್ಕಿ ಕೂಡ ಸಿಕ್ಕಿಬಿದ್ದಿದ್ದಾನೆ. ಈತ ಆ ಮನೆಗೆ ಎರಡನೇ ಬಾರಿ ಬಂದಿದ್ದ ಎಂಬುವುದು ವಿಚಾರಣೆ ವೇಳೆ ತಿಳಿದುಬಂದಿದೆ.
ಇನ್ನು ಆರಂಭದಲ್ಲಿ ಸಂತ್ರಸ್ತೆಯರು ತಾವು ಪಶ್ಚಿಮ ಬಂಗಾಳ ರಾಜ್ಯದವರು ಎಂದು ಹೇಳಿದ್ದು, ಆಧಾರ್ ಸೇರಿ ಇತರೆ ದಾಖಲೆಗಳನ್ನು ನೀಡಿದ್ದಾರೆ. ಆದರೆ ಕೂಲಂಕುಷವಾಗಿ ವಿಚಾರಣೆ ನಡೆಸಿದ್ದಾಗ ಆ ಬಾಲಕಿಯರು ಅಕ್ರಮ ಬಾಂಗ್ಲಾದೇಶದ ವಲಸಿಗರು ಎಂಬುವುದು ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಕೋ ಕಾಯ್ದೆಯಡಿ ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
* ಇಸ್ಲಾಂಗೆ ಮತಾಂತರವಾಗುವಂತೆ ಮುಸ್ಲಿಂ ಯುವಕನಿಂದ ಷರತ್ತು!!
ಉಡುಪಿ: ಇಸ್ಲಾಂಗೆ ಮತಾಂತರವಾಗುವಂತೆ ವೈದ್ಯನಿಂದ ಕಿರುಕುಳ ಆರೋಪ ಕೇಳಿ ಬಂದಿದೆ. ಸಹಪಾಠಿ ವೈದ್ಯ ವಿದ್ಯಾರ್ಥಿನಿಯಿಂದಲೇ ಈ ಸಂಬಂಧ ದೂರು ದಾಖಲಾಗಿದೆ. ಸದ್ಯ ಕಿರುಕುಳ ನೀಡಿದ ಆರೋಪದಲ್ಲಿ ಮಹಮ್ಮದ್ ಡ್ಯಾನಿಷ್ ಖಾನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸ್ನಾತಕೋತ್ತರ ಪದವಿಗಾಗಿ ವೈದ್ಯ ವಿದ್ಯಾರ್ಥಿಗಳು ದೆಹಲಿ ಮತ್ತು ರಾಜಸ್ಥಾನದಿಂದ ಮಣಿಪಾಲಕ್ಕೆ ಬಂದಿದ್ದರು. ಈ ನಡುವೆ ವೈದ್ಯ ವಿದ್ಯಾರ್ಥಿಗಳು ಪರಸ್ಪರ ಪ್ರೀತಿಸುತ್ತಿದ್ದರು. ಪ್ರೀತಿಯಲ್ಲಿದ್ದಾಗಲೇ ಮಹಮ್ಮದ್ ಡ್ಯಾನಿಷ್ ಮದುವೆಯ ಪ್ರಸ್ತಾಪ ಮುಂದಿಟ್ಟಿದ್ದು, ಆದರೆ ಇಸ್ಲಾಂಗೆ ಮತಾಂತರವಾಗಬೇಕೆಂದು ಸಂತ್ರಸ್ತೆಗೆ ಷರತ್ತು ಹಾಕಿದ್ದ. ಈ ಬಗ್ಗೆ ಉಡುಪಿ ಮಹಿಳಾ ಠಾಣೆಯಲ್ಲಿ 8.31 ದಾಖಲಾಗಿತ್ತು. ದೂರು ಮಹಮ್ಮದ್ ಡ್ಯಾನಿಷ್ ಖಾನ್ ಮತ್ತು ಸಂತ್ರಸ್ತೆ ಒಂದೇ ವಿದ್ಯಾರ್ಥಿಗಳಾಗಿದ್ದಾರೆ. ಕಾಲೇಜಿನ ಇವರಿಬ್ಬರು ಕ್ಯಾಂಪಸ್ನಲ್ಲಿ ಪರಿಚಯವಾಗಿದ್ದರು. ಬಳಿ ಮಹಮ್ಮದ್ ಡ್ಯಾನಿಷ್ ಸಂತ್ರಸ್ತೆಯ ಫೋನ್ ನಂಬರ್ ಪಡೆದುಕೊಂಡು ಗೆಳೆತನ ಬೆಳೆಸಿದ್ದ. ನಂತರ 2024ರ ಜ.22 ರಂದು ಮಾತುಕತೆ ವೇಳೆ ಹಿಂದೂ ಧರ್ಮ ಹಾಗೂ ರಾಮ
ಮಂದಿರದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾನೆ.
2024ರ ಮಾ.11ರಂದು ಸಂತ್ರಸ್ತೆ ಯುವತಿ ಆರೋಪಿ ಮಹಮ್ಮದ್ ರೂಮಿಗೆ ತೆರಳಿದ್ದು, ಆಗ ಆತ ಮತಾಂತರಕ್ಕೆ ಒತ್ತಾಯಿಸಿದ್ದನೆ,ಮತಾಂತರಕ್ಕೆ ನಿರಾಕರಿಸಿದಾಗ ಆರೋಪಿ ಮಹಮ್ಮದ್ ಸಂತ್ರಸ್ತೆಯ ಕೆನ್ನೆಗೆ ಹೊಡೆದು, ಕೂದಲು ಹಿಡಿದು ಎಳೆದಾಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಸಿದ್ದಾಳೆ. ಜೊತೆಗೆ ದೇಹದ ಖಾಸಗಿ ಭಾಗವನ್ನು ಮುಟ್ಟಿ ಲೈಂಗಿಕತೆಗೆ ಬೇಡಿಕೆ ಇಟ್ಟಿದ್ದ ಎಂಬ ಆರೋಪವೂ ಇದೆ.
* ಮಣಿಪಾಲ:ಮಹಿಳೆಯ ಕುತ್ತಿಗೆಗೆ ಕೈ ಹಾಕಿ ಸರ ಕಳ್ಳತನ!
ಮಣಿಪಾಲ: ಶಿವಳ್ಳಿ ಗ್ರಾಮದಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕುತ್ತಿಗೆಗೆ ಕೈ ಹಾಕಿ ಸರ ಕದ್ದ ಕುರಿತು ಮಣಿಪಾಲ ಪೊಲೀಸ್ ಠಾಣೆಹಳ್ಳಿ ಪ್ರಕರಣ ದಾಖಲಾಗಿದೆ.
ಸೆಪ್ಟೆಂಬರ್ 3 ರಂದು ಬೆಳಿಗ್ಗೆ ಕಮಲ (70), ಶಿವಳ್ಳಿ ಗ್ರಾಮ, ಉಡುಪಿ ತನ್ನ ಅಣ್ಣನ ಮನೆಯಿಂದ ಹೊರಟಿದ್ದು ಬೆಳಿಗ್ಗೆ 11 ಗಂಟೆಗೆ ಶಿವಳ್ಳಿ ಗ್ರಾಮದ ಸಗ್ರಿನೋಳೆ ತಿರುಮಲ ಕೋಳಿ ಫಾರಂನ ಬಳಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ವ್ಯಕ್ತಿ ಓರ್ವ ಹಿಂದಿನಿಂದ ಬಂದು ಅವರ ಕುತ್ತಿಗೆಯಲ್ಲಿದ್ದ ಸರ ಕದ್ದು ಪರಾರಿಯಾಗಿದ್ದಾನೆ.
ದೂರಿನ ಪ್ರಕಾರ 16 ಗ್ರಾಂ ತೂಕದ ಚಿನ್ನದ ಚೈನ್ ನ್ನು ಎಳೆದು ಸುಲಿಗೆ ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.