2 ತಿಂಗಳಲ್ಲಿ ತಾಪಂ, ಜಿಪಂ ಚುನಾವಣೆ?!
– ಮೀಸಲು ನಿಗದಿಗೆ ಮೂರು ವಾರಗಳ ಅವಧಿ ಕೇಳಿದ ಸರ್ಕಾರ
– ವಿಚಾರಣೆ ಸೆ.30ಕ್ಕೆ ವಿಚಾರಣೆ: ಚುನಾವಣೆ ಘೋಷಣೆ ಆಗುತ್ತಾ?
NAMMUR EXPRESS NEWS
ಬೆಂಗಳೂರು: ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಿಗೆ ಮೀಸಲಾತಿ ನಿಗದಿಪಡಿಸಲು ರಾಜ್ಯ ಸರ್ಕಾರ ಮೂರು ವಾರ ಕಾಲಾವಕಾಶ ನೀಡುವಂತೆ ಮನವಿ ಮಾಡಿದೆ. ಈ ಮೂಲಕ ಚುನಾವಣೆ ಪ್ರಕ್ರಿಯೆಗೆ ಶೀಘ್ರದಲ್ಲಿ ಚಾಲನೆ ಸಿಗುವ ಸಾಧ್ಯತೆಗಳಿವೆ.
ನ್ಯಾಯಾಲಯಕ್ಕೆ ನೀಡಿದ ಭರವಸೆಯಂತೆ ನಿಗದಿತ ಅವಧಿಯಲ್ಲಿ ಕ್ಷೇತ್ರ ಮರುವಿಂಗಡಣೆ ಹಾಗೂ ಮೀಸಲಾತಿ ಪ್ರಕಟಿಸಲು ವಿಫಲವಾಗಿರುವ ಸರ್ಕಾರದ ವಿರುದ್ಧ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ಜತೆಗೆ ನಗರ-ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪ್ರಕಟಿಸಲು ಏಕಸದಸ್ಯ ನ್ಯಾಯಪೀಠ ಆದೇಶ ಪಾಲಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು 2023ರಲ್ಲಿ ಸಲ್ಲಿಸಲಾದ 2 ಪ್ರತ್ಯೇಕ ನ್ಯಾಯಾಂಗ ನಿಂದನೆ ಅರ್ಜಿಗಳು ನ್ಯಾಯಮೂರ್ತಿ ವಿ.ಕಾಮೇಶ್ವರ್ ರಾವ್, ನ್ಯಾಯಮೂರ್ತಿ ಕೆ.ರಾಜೇಶ್ ರೈ ವರಿದ್ದ ೀಠದ ಮುಂದೆ ಗುರುವಾರ ವಿಚಾರಣೆಗೆ ಬಂದವು. ಈ ವೇಳೆ ರಾಜ್ಯ ಸರ್ಕಾರದ ಪರ ಹೆಚ್ಚುವರಿ ಎಜಿ ಪ್ರತಿಮಾ ಹೊನ್ನಾಪುರ ವಾದಿಸಿ, 31 ಜಿಲ್ಲೆಗಳಲ್ಲಿ ಕ್ಷೇತ್ರಗಳ ಮರುವಿಂಗಡಣೆ ಕಾರ್ಯ ಮುಗಿದಿದೆ. ಈಗ ಮೀಸಲಾತಿ ನಿಗದಿಪಡಿಸುವ ಕಾರ್ಯ ಪ್ರಗತಿಯಲ್ಲಿದೆ. ಅದಕ್ಕಾಗಿ ಮೂರು ವಾರ ಕಾಲಾವಕಾಶಬೇಕು ಎಂದು ಕೋರಿದರು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ ಸೆ.30ಕ್ಕೆ ವಿಚಾರಣೆ ಮುಂದೂಡಿತು.