ಕ್ರಿಯೇಟಿವ್ ಕಾಲೇಜಿನಲ್ಲಿ ಗುರು ದೇವೋಭವ..!
– ಕಾರ್ಕಳ, ಉಡುಪಿ ಕಾಲೇಜಲ್ಲಿ ಶಿಕ್ಷಕರಿಗೆ ನಮನ
– ಸಾಧಕ ಶಿಕ್ಷಕರು, ಸೇವಕರಿಗೆ ಸನ್ಮಾನದ ಗೌರವ
NAMMUR EXPRESS NEWS
ಕಾರ್ಕಳ: ಕ್ರಿಯೇಟಿವ್ ಕಾಲೇಜಿನಲ್ಲಿ ಶಿಕ್ಷಕರ ದಿನವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು. ಜ್ಞಾನಜ್ಯೋತಿಯನ್ನು ಬೆಳಗಿ, ಡಾ.ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು.
ಗುರುವಂದನೆಯನ್ನು ಸ್ವೀಕರಿಸಿದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪರಪ್ಪಾಡಿ, ನಲ್ಲೂರಿನ ನಿವೃತ್ತ ಮುಖ್ಯ ಗುರುಗಳಾದ
ಪೂರ್ಣಿಮಾ ರಮೇಶ್ ಶೆಣೈರವರು ಮಾತನಾಡಿ, ಪ್ರತಿ ವ್ಯಕ್ತಿಯೂ ತಮ್ಮ ಜೀವನದಲ್ಲಿ ತಂದೆ ತಾಯಿಯ ನಂತರದ ಸ್ಥಾನವನ್ನು ಒಬ್ಬ ಗುರುವಿಗೆ ನೀಡುತ್ತಾರೆ. ಉತ್ತಮ ಶಿಕ್ಷಣ ನೀಡುವುದರ ಜೊತೆಗೆ, ಶಿಕ್ಷಣದ ಮೌಲ್ಯವನ್ನು ತಿಳಿಸಿ ಪ್ರತಿ ವ್ಯಕ್ತಿಯ ಬದುಕನ್ನು ಬೆಳಗುವವರು ಶಿಕ್ಷಕರು ಎಂದರು.
ಕಾರ್ಕಳದ ಬೈಲೂರ ಹೊಸ ಬೆಳು ಸಂಸ್ಥೆಯ ವ್ಯವಸ್ಥಾಪಕರಾದ
ತನುಲಾ ತರುಣ್ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿ, ಗುರುವಿಲ್ಲದೆ ಗುರಿಯನ್ನು ತಲುಪುವುದು ಕಷ್ಟ. ಭರವಸೆಯನ್ನು ಹೆಚ್ಚಿಸುವ, ಕನಸನ್ನು
ಸಾಕಾರಗೊಳಿಸುವ, ಕಲಿಕಾ ಆಸಕ್ತಿಯನ್ನು ಹುಟ್ಟು ಹಾಕುವ ಸೂತ್ರದಾರನೇ ಶಿಕ್ಷಕ ಎಂದು ನುಡಿದರು. ಅಧ್ಯಕ್ಷೀಯ
ನುಡಿಗಳನ್ನಾಡಿದ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ರವರು ಶಿಕ್ಷಕರ ದಿನದ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಆಂಗ್ಲ ಭಾಷಾ ಮುಖ್ಯಸ್ಥ ರಾಜೇಶ್ ಶೆಟ್ಟಿ, ಅರ್ಥ ಶಾಸ್ತ್ರ ಉಪನ್ಯಾಸಕ ಉಮೇಶ್ ಅವರನ್ನು ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಸನ್ಮಾನಿಸಲಾಯಿತು. 2023 ನೇ ಸಾಲಿನ ಶೈಕ್ಷಣಿಕ ವರ್ಷದ ಸಾಧಕ ವಿದ್ಯಾರ್ಥಿಗಳಾದ ಅಭಯ ಎಸ್ ಎಸ್ ಹಾಗೂ ಕಾರ್ತಿಕ್ ಹೆಗ್ಡೆ ಅವರನ್ನು ಸನ್ಮಾನಿಸಲಾಯಿತು. ಸಾಧಕ ವಿದ್ಯಾರ್ಥಿ ಅಭಯ್ ರವರಿಗೆ ಪ್ರಶಸ್ತಿಯ ಜೊತೆಗೆ 25,000 ನಗದನ್ನು ಹಸ್ತಾಂತರಿಸಲಾಯಿತು. ಹೊಸಬೆಳಕು ಸಂಸ್ಥೆಗೆ ಕ್ರಿಯೇಟಿವ್ ಪುಸ್ತಕ
ಮನೆ ವತಿಯಿಂದ 5000 ರೂ. ಮೌಲ್ಯದ ಪುಸ್ತಕಗಳನ್ನು ಒದಗಿಸಲಾಯಿತು.
ಸಹ ಸಂಸ್ಥಾಪಕರಾದ ಅಶ್ವತ್ ಎಸ್ ಎಲ್ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕರಾದ ಶಿವಕುಮಾರ್, ವೃಂದಾ ದಾತೆ, ಗಿರೀಶ್ ಭಟ್, ಶ್ರೀನಿಧಿ ಎಸ್ ನಾಯಕ್ ಅವರು ಸನ್ಮಾನ ಪತ್ರ ಹಾಗೂ ಉಪನ್ಯಾಸಕರ ಯಾದಿಗಳನ್ನು ವಾಚಿಸಿದರು. ಎಲ್ಲಾ ಉಪನ್ಯಾಸಕ ವರ್ಗದವರಿಗೆ ಸಂಸ್ಥೆಯ ವತಿಯಿಂದ ಗೌರವ ಕಾಣಿಕೆಯನ್ನು ನೀಡಲಾಯಿತು. ಹಿಂದಿ ಭಾಷಾ ಮುಖ್ಯಸ್ಥ ವಿನಾಯಕ ಜೋಗ್ ರವರು ಸ್ವಾಗತಿಿ, ಜೀವಾಸ್ತ್ರ ಉಪನ್ಯಾಸಕ ಲೋಹಿತ್ ಎಸ್ ಕೆ ರವರು ವಂದಿಸಿದರು. ಕನ್ನಡ ಉಪನ್ಯಾಸಕಿ ಪ್ರಿಯಾಂಕ ತೀರ್ಥರಾಮ ಅವರು ಕಾರ್ಯಕ್ರಮ ನಿರೂಪಿಸಿದರು.
ಕಲ್ಯಾಣಪುರ ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ
ಉಡುಪಿ: ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಕರ್ಕಳದ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪದವಿ ಪರ್ವ ಕಾಲೇಜು ಕಲ್ಯಾಣಪುರದಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ “ಕ್ರಿಯೇಟಿವ್ ಗುರುದೇವೋಭವ” ಕಾರ್ಯಕ್ರಮ ನೆರವೇರಿತು.
ಉಡುಪಿ ಪರಿಸರದಲ್ಲಿ ಹಲವಾರು ವರ್ಷಗಳಿಂದ ಅಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಬಡಾನಿಡಿಯೂರಿನ ಶ್ರೀ ದಿನಕರ್ ಶೆಟ್ಟಿಯವರು ಶಿಕ್ಷಕರ ದಿನದಂದು ಗುರುವಂದನೆ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಸನ್ಮಾನಗೊಂಡ ಕುಂಬ್ರಗೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ರೀಮತಿ ವೀಣಾ ಅವರು ವಿದ್ಯಾರ್ಥಿಗಳಿಗೆ ಹಾರೈಸಿದರು. ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಅಮೃತ ರೈ ಅವರು ಮಾತನಾಡಿ ಶಿಕ್ಷಕರಿಗೆ ಗೌರವ ಸಲ್ಲಿಸುವುದು ಸನ್ಮಾನವಲ್ಲ ಬದಲಾಗಿ ಅದು ದೇವರ ಪೂಜೆ ಎಂದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಕ್ರಿಯೇಟಿವ್ ಸಹ ಸಂಸ್ಥಾಪಕರಾದ ಡಾ. ಬಿ ಗಣನಾಥ್ ಶೆಟ್ಟಿ ಅವರು ತಪ್ಪು ತಿದ್ದಿ ಜೀವನಪೂರ್ತಿ ವಿದ್ಯಾರ್ಥಿಗಳ ಏಳಿಗೆಗಾಗಿ ಬದುಕುವವರು ಶಿಕ್ಷಕರು. ಎಂದು ಬಣ್ಣಿಸಿದರು. ತ್ರಿಶಾ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರಾದ ಜೋಯೆಲ್ ಮನೋಜ್ ಫರ್ನಾಂಡಿಸ್ ಅವರನ್ನು ಸನ್ಮಾನಿಸಲಾಯಿತು, ಪ್ರಾಂಶುಪಲ ರಾಮಕೃಷ್ಣ ಹೆಗಡೆ ಸರ್ವರನ್ನು ಸ್ವಾಗತಿಸಿದರು. ಆಡಳಿತ ಅಧಿಕಾರಿ ಜಯಪ್ರಕಾಶ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಪನ್ಯಾಸಕ ಯೋಗೀಶ್ ಮೊಗವೀರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.