ಪಶ್ಚಿಮಘಟ್ಟ ಪ್ರದೇಶಲ್ಲಿರುವ ರೆಸಾರ್ಟ್ ಮಾಲಿಕರಿಗೆ ನೋಟಿಸ್!
* ಸಾಲು ಸಾಲು ದುರ್ಘಟನೆ ಬಳಿಕ ಎಚ್ಚತ್ತ ಅರಣ್ಯ ಇಲಾಖೆ
* ಕಂದಾಯ ದಾಖಲಾತಿಗಳನ್ನು ಕಚೇರಿಗೆ ಸಲ್ಲಿಸುವಂತೆ ಸೂಚನೆ
* ಖಂಡ್ರೆ ಸಹೋದರನ ವಿರುದ್ಧವೇ ಅರಣ್ಯ ಭೂಮಿ ಒತ್ತುವರಿ ಆರೋಪ?!
NAMMUR EXPRESS NEWS
ಚಿಕ್ಕಮಗಳೂರು/ ಶಿವಮೊಗ್ಗ: ಅರಣ್ಯ ಇಲಾಖೆ ಚಿಕ್ಕಮಗಳೂರು ಅರಣ್ಯ ವಲಯ ವ್ಯಾಪ್ತಿಯಲ್ಲಿನ ಮುಳ್ಳಯ್ಯನಗಿರಿ, ಇನಾಂ ದತ್ತಾತ್ರೇಯ ಬಾಬಾ ಬುಡನ್ಸ್ವಾಮಿ ದರ್ಗಾ, ಚಂದ್ರದ್ರೋಣ ಪರ್ವತದ ಸುತ್ತಮುತ್ತ ನಿರ್ಮಾಣವಾಗಿರುವ ಹೋಂಸ್ಟೇ, ರೆಸಾರ್ಟ್ ಮಾಲಿಕರಿಗೆ ನೋಟಿಸ್ ನೀಡಿದೆ.
ಅಂಕೋಲಾದ ಶಿರೂರು, ಶಿರಾಡಿ ಘಾಟ್ ಭೂಕುಸಿತ ಹಾಗೂ ವಯನಾಡಿನ ದುರ್ಘಟನೆ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ಪಶ್ಚಿಮಘಟ್ಟ ಪ್ರದೇಶದಲ್ಲಿ ನಿರ್ಮಿಸಲಾಗಿರುವ ರೆಸಾರ್ಟ್ ಅಥವಾ ಹೋಂಸ್ಟೇಗಳಿಗೆ ನೋಟಿಸ್ ನೀಡಿದೆ. ಅನಧಿಕೃತವಾಗಿ ನಡೆಯುತ್ತಿರುವ ಹೋಂಸ್ಟೇ ಅಥವಾ ರೆಸಾರ್ಟ್ಗಳನ್ನು ಪತ್ತೆ ಹಚ್ಚಲು ಮುಂದಾಗಿದೆ.
ಚಿಕ್ಕಮಗಳೂರು ಅರಣ್ಯ ವಲಯ ವ್ಯಾಪ್ತಿಯಲ್ಲಿನ ಮುಳ್ಳಯ್ಯನಗಿರಿ, ಇನಾಂ ದತ್ತಾತ್ರೇಯ ಬಾಬಾ ಬುಡನ್ಸ್ವಾಮಿ ದರ್ಗಾ, ಚಂದ್ರದ್ರೋಣ ಪರ್ವತದ ಸುತ್ತಮುತ್ತ ನಿರ್ಮಾಣವಾಗಿರುವ ಹೋಂಸ್ಟೇ, ರೆಸಾರ್ಟ್ ಮಾಲಿಕರ ಮ್ಮ ಹೋಂಸ್ಟೇಗೆ ಸಂಬಂಧಿಸಿದ ಕಂದಾಯ ದಾಖಲಾತಿಗಳನ್ನು ಕಚೇರಿಗೆ ಸಲ್ಲಿಸುವಂತೆ ಡಿಎಫ್ಒ ರಮೇಶ್ ಬಾಬು ಅವರು ನೋಟಿಸ್ ಹೊರಡಿಸಿದ್ದಾರೆ.
ಸಾಲು ಸಾಲು ದುರ್ಘಟನೆ ಬಳಿಕ ಎಚ್ಚತ್ತ ಅರಣ್ಯ ಇಲಾಖೆ ಚಿಕ್ಕಮಗಳೂರು ಅರಣ್ಯ ವಲಯದಲ್ಲಿ ನಿರ್ಮಿಸಲಾಗಿರುವ ಅನಧಿಕೃತ ಹೋಂಸ್ಟೇ ಅಥವಾ ರೆಸಾರ್ಟ್ಗಳ ಸ್ಥಳ ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿತ್ತು. ವರದಿ ಸಲ್ಲಿಕೆಯಾದ ಬಳಿಕ ಅರಣ್ಯ ಇಲಾಖೆ 2015ರ ನಂತರ ಅರಣ್ಯ ಒತ್ತುವರಿ ಮಾಡಿ ನಿರ್ಮಿಸಿರುವ ರೆಸಾರ್ಟ್ ಅಥವಾ ಹೋಂಸ್ಟೇ, ತೋಟ, ಬಡವಾಣೆಗಳನ್ನು ನಿರ್ದಾಕ್ಷಿಣ್ಯವಾಗಿ ತೆರವು ಮಾಡುವಂತೆ ಸೂಚನೆ ನೀಡಿತ್ತು.
ಇದೀಗ, ಅನಧೀಕೃತವಾಗಿ ನಡೆಯುತ್ತಿರುವ ರೆಸಾರ್ಟ್ ಅಥವಾ ಹೋಂಸ್ಟೇಗಳನ್ನು ಪತ್ತೆಹಚ್ಚಲು ಅರಣ್ಯ ಇಲಾಖೆ ಮುಂದಾಗಿದೆ. ಹೀಗಾಗಿ ಚಿಕ್ಕಮಗಳೂರು ಅರಣ್ಯ ವಲಯದಲ್ಲಿ ನಿರ್ಮಾಣ ಮಾಡಿರುವ ಎಲ್ಲ ಹೋಂಸ್ಟೇ ಮಾಲಿಕರು ಕಂದಾಯ ದಾಖಲಾತಿಗಳನ್ನು ಸಲ್ಲಿಸುವಂತೆ ಅರಣ್ಯ ಇಲಾಖೆ ಸೂಚಿಸಿದೆ.
ಖಂಡ್ರೆ ಸಹೋದರನ ವಿರುದ್ಧವೇ ಅರಣ್ಯ ಭೂಮಿ ಒತ್ತುವರಿ ಆರೋಪ
ಬೆಂಗಳೂರು: ರಾಜ್ಯದಲ್ಲಿ ಅರಣ್ಯ ಒತ್ತುವರಿಯನ್ನು ತೆರವುಗೊಳಿಸುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಆದರೆ ಇದೀಗ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರ ಸಹೋದರನ ವಿರುದ್ಧವೇ ಅರಣ್ಯ ಭೂಮಿ ಒತ್ತುವರಿ ಆರೋಪ ಕೇಳಿ ಬಂದಿದೆ.
ಬೀದರ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರ ಸಹೋದರ ಅಮರ್ ಖಂಡ್ರೆ 27 ಎಕರೆ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿರುವ ಆರೋಪ ಕೇಳಿ ಬಂದಿದ್ದು, ಈ ಕುರಿತು ಬೀದರ್ನ ಪ್ರಾದೇಶಿಕ ಅರಣ್ಯ ಕಚೇರಿ ಮೂಲಕ ರಾಜ್ಯಪಾರಿಗೆ ದೂರು ಸಲ್ಲಿಸಲಾಗಿದೆ ಎನ್ನಲಾಗಿದೆ.