- ದೆಹಲಿಯಲ್ಲಿ 2 ತಿಂಗಳು ಉಚಿತ ರೇಷನ್
- ಟ್ಯಾಕ್ಸಿ-ಆಟೋ ಚಾಲಕರಿಗೆ ಸಹಾಯ ಧನ
- ಆಂಧ್ರದಲ್ಲೂ ಜಗನ್ ಜನ ಸೇವೆ
- ಕರ್ನಾಟಕದಲ್ಲಿ ಜನತೆಗೆ ಏನೂ ಇಲ್ಲ!
ನವ ದೆಹಲಿ: ಕರೋನಾ ತುರ್ತು ಸಂದರ್ಭದಲ್ಲಿ ದೆಹಲಿ ಸಿಎಂ ಕೇಜ್ರಿವಾಲ್ ಮಾದರಿಯಾಗಿದ್ದಾರೆ. ಮುಂದಿನ ಎರಡು ತಿಂಗಳು ಉಚಿತ ಪಡಿತರ, ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ಐದು ಸಾವಿರ ರೂ. ಸಹಾಯ ಧನ ನೀಡಲಾಗುವುದು ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ ಮಾಡಿದ್ದಾರೆ.
ಕೊರೊನಾ ನಿಯಂತ್ರಣಕ್ಕಾಗಿ ದೆಹಲಿಯಲ್ಲಿ ಲಾಕ್ಡೌನ್ ಜಾರಿಗೆ ತರಲಾಗಿದ್ದು, ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಈ ಹಿನ್ನೆಲೆ ಸರ್ಕಾರ ಜನರ ನೆರವಿಗೆ ಧಾವಿಸಿದೆ. ಆದರೆ ಕರ್ನಾಟಕದಲ್ಲಿ ಇನ್ನು ಯಾವುದೇ ಯೋಜನೆ ಘೋಷಣೆಯಾಗಿಲ್ಲ.
ದೆಹಲಿಯ 72 ಲಕ್ಷ ಪಡಿತರ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಉಚಿತವಾಗಿ ರೇಷನ್ ಸಿಗಲಿದೆ.
ದೆಹಲಿಯಲ್ಲಿರುವ ಎಲ್ಲ ಆಟೋ, ಟ್ಯಾಕ್ಸಿ ಚಾಲಕರಿಗೆ ಐದು ಸಾವಿರ ರೂಪಾಯಿಯ ಆರ್ಥಿಕ ಸಹಾಯ ದೊರೆಯಲಿದೆ. ಸುಮಾರು ಒಂದೂವರೆ ಲಕ್ಷ ಜನರಿಗೆ ಆರ್ಥಿಕ ಸಹಾಯ ಸಿಗಲಿದೆ. ಕಳೆದ ವಾರವೂ ಕೇಜ್ರಿವಾಲ್ ಸರ್ಕಾರ ಕಾರ್ಮಿಕ ವರ್ಗಕ್ಕೂ ನೆರವು ನೀಡಿದ್ದರು.ದೆಹಲಿ ಕೊರೊನಾ ಸಂಕಷ್ಟದಲ್ಲಿದ್ದು, ಆರ್ಥಿಕವಾಗಿ ಸದೃಢರಾಗಿರುವ ಸಶಕ್ತರು ಸಹಾಯಕ್ಕೆ ಮುಂದಾಗಬೇಕು. ನಿಮ್ಮ ಸಾಮರ್ಥ್ಯಕ್ಕನುಗುಣವಾಗಿ ಅವಶ್ಯಕತೆ ಇರುವವರಿಗೆ ಊಟ ತಲುಪಿಸಿ ಎಂದು ಕೇಜ್ರಿವಾಲ್ ಮನವಿ ಮಾಡಿಕೊಂಡಿದ್ದಾರೆ.
ಅಂದ್ರ ಸಿಎಂ ಹೊಸ ಭರವಸೆ!: ಅಂಧ್ರ ಸಿಎಂ ಜಗನ್ ಕೂಡ ಸೌಲಭ್ಯ ಮನೆ ಬಾಗಿಲಿಗೆ ತಲುಪಿಸುತ್ತಿದ್ದಾರೆ. ಈ ನಡೆ ಎಲ್ಲಾ ಸಿಎಂಗಳಿಗೂ ಮಾದರಿಯಾಗಿದೆ.
ಎಲ್ಲಾ ಸುದ್ದಿಗಳಿಗೆ NAMMUR EXPRESS ಫೇಸ್ಬುಕ್ ಹಾಗೂ ಯೂಟ್ಯೂಬ್ ವೀಕ್ಷಿಸಿ…!.. ಸುದ್ದಿ ಪಡೆಯಲು 9481949101ಗೆ ನಿಮ್ಮ ಹೆಸರು, ಊರು, ತಾಲ್ಲೂಕು ವಾಟ್ಸಾಪ್ ಮಾಡಿ…!. ತಾಲೂಕಿನ ಎಲ್ಲರಿಗೂ ಶೇರ್ ಮಾಡಿ..!.