ಅ.3 ರಿಂದ 20 ತನಕ ಮಕ್ಕಳಿಗೆ ದಸರಾ ರಜೆ
– ಸರ್ಕಾರಿ-ಖಾಸಗಿ ಶಾಲಾ ಮಕ್ಕಳಿಗೆ ದಸರಾ ರಜೆ ಘೋಷಣೆ
– ಕರಾವಳಿ ಸೇರಿ ರಾಜ್ಯದ ಎಲ್ಲಾ ಶಾಲೆಗಳಿಗೆ ಒಂದೇ ಮಾರ್ಗದರ್ಶಿ
NAMMUR EXPRESS NEWS
ಬೆಂಗಳೂರು:2024-25ನೇ ಶೈಕ್ಷಣಿಕ ಸಾಲಿನ ಕರ್ನಾಟಕದ ಸರ್ಕಾರಿ-ಖಾಸಗಿ ಶಾಲಾ ಮಕ್ಕಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ದಸರಾ ರಜೆ ಘೋಷಿಸಿದೆ. ಇಡೀ ಕರ್ನಾಟಕದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಿದೆ.
ನಾಡ ಹಬ್ಬ ದಸರಾ ಹಬ್ಬಕ್ಕೆ ಮೈಸೂರಿನಲ್ಲಿ ಅದ್ಧೂರಿ ಸಿದ್ದತೆಗಳು ನಡೆದಿವೆ. ಇನ್ನೊಂದೆಡೆ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20 ತನಕ ದಸರಾ ರಜೆ ಘೋಷಿಸಿದ್ದು, ಇಡೀ ಕರ್ನಾಟಕದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಿದೆ. ಈ ಹಿಂದೆ ಕರಾವಳಿ ಭಾಗದಲ್ಲಿ ದಸರಾ ರಜೆಯಲ್ಲಿ ಕೊಂಚ ಮಾರ್ಪಾಡು ಆಗುತ್ತಿದ್ದ, ಈ ಬಾರಿ ಯಾವುದೇ ಮಾರ್ಪಾಡು ಆಗಿಲ್ಲ. ಇಡೀ ಕರ್ನಾಟಕದ ಎಲ್ಲಾ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಲಾಗಿದೆ.
ಅಕ್ಟೋಬರ್ 21ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2025ರ ಏಪ್ರಿಲ್ 10 ತನಕ ನಡೆಯಲಿದೆ. 2024-2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ. ಈಗ ದಸರಾ ರಜೆ ಹಿನ್ನೆಲೆಯಲ್ಲಿ ಅಕ್ಟೋಬರ್ ತಿಂಗಳಲ್ಲಿ ಕೇವಲ 11 ದಿನಗಳು ತರಗತಿಗಳು ನಡೆಯಲಿವೆ.
ಕರಾವಳಿ ಶಾಲೆಗಳಿಗೆ ಮಾರ್ಪಾಡು ಇಲ್ಲ
ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20 ತನಕ ದಸರಾ ರಜೆ ಘೋಷಿಸಿದ್ದು, ಇಡೀ ಕರ್ನಾಟಕದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಿದೆ. ಈ ಹಿಂದೆ ಕರಾವಳಿ ಭಾಗದಲ್ಲಿ ದಸರಾ ರಜೆಯಲ್ಲಿ ಕೊಂಚ ಮಾರ್ಪಾಡು ಆಗುತ್ತಿತ್ತು. ಆದ್ರೆ, ಈ ಬಾರಿ ಯಾವುದೇ ಮಾರ್ಪಾಡು ಆಗಿಲ್ಲ. ಇಡೀ ಕರ್ನಾಟಕದ ಎಲ್ಲಾ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಲಾಗಿದೆ.
ಅಕ್ಟೋಬರ್ 3 ರಿಂದ 20ರ ತನಕ ಅಂದರೆ 17 ದಿನಗಳ ಕಾಲ ದಸರಾ ರಜೆ ಸಿಗಲಿದೆ. ಅಕ್ಟೋಬರ್ 21ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2025ರ ಏಪ್ರಿಲ್ 10 ತನಕ ನಡೆಯಲಿದೆ. 2024-2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ.