ವೈಬ್ರೆಂಟ್ ಶಿಕ್ಷಣ ಚೇತನ ಪ್ರಶಸ್ತಿ ಪುರಸ್ಕಾರ ಸಂಭ್ರಮ
– ಮೂಡುಬಿದಿರೆ ನ್ಯೂ ವೈಬ್ರೆಂಟ್ ಕಾಲೇಜಿನಲ್ಲಿ ಗುರುವಂದನಾ ಕಾರ್ಯಕ್ರಮ
• ಮುನಿರಾಜ ರೆಂಜಾಳ ಅವರಿಗೆ ವೈಬ್ರೆಂಟ್ ಶಿಕ್ಷಣ ಚೇತನ
ಪ್ರಶಸ್ತಿ ಪುರಸ್ಕಾರ
NAMMUR EXPRESS NEWS
ಮೂಡುಬಿದಿರೆ: ಮೂಡುಬಿದಿರೆಯ ಕಲ್ಲಬೆಟ್ಟುವಿನಲ್ಲಿರುವ ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಂದನಾ ಹಾಗೂ ವೈಬ್ರೆಂಟ್ ಶಿಕ್ಷಣ ಚೇತನ ಪ್ರಶಸ್ತಿ ಪುರಸ್ಕಾರ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಮೂಡುಬಿದಿರೆಯ ಹಿರಿಯ ಉದ್ಯಮಿ ಕೆ.ಶ್ರೀಪತಿ ಭಟ್ ಇವರು ದೀಪ ಪ್ರಜ್ವಲನೆಯನ್ನು ನೆರವೇರಿಸಿ ಮಾತನಾಡಿ,ವಿದ್ಯಾರ್ಥಿಯು ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ ಕ್ಷೇತ್ರಕ್ಕೆ ಕೊಡುಗೆ ನೀಡುವಂತೆ ರೂಪುಗೊಳ್ಳಬೇಕು. ಇದಕ್ಕೆ ಶಿಕ್ಷಕರ ಕೊಡುಗೆ,
ಪರಿಶ್ರಮದೊಂದಿಗೆ ವಿದ್ಯಾರ್ಥಿಗಳ ಸ್ವಯಂ ಪ್ರಯತ್ನವೂ ಅತಿ ಅಗತ್ಯವಾಗಿರುತ್ತದೆ ಎಂದು ಹೇಳಿದರು.
ವೈಬ್ರೆಂಟ್ ಶಿಕ್ಷಣ ಚೇತನ ಪ್ರಶಸ್ತಿ ಪುರಸ್ಕಾರ
ಸಂಸ್ಥೆಯು ಇದೇ ಮೊದಲ ಬಾರಿಗೆ ಶೈಕ್ಷಣಿಕ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮಾಡಿದ ಶಿಕ್ಷಕರನ್ನು ಗುರುತಿಸಿ ಪ್ರಶಸ್ತಿಯನ್ನು ನೀಡಿ ಗೌರವಿಸುವ ಕಾರ್ಯವನ್ನು ಆಯೋಜಿಸಿದ್ದು, ಈ ವರ್ಷ ಪ್ರಶಸ್ತಿಯನ್ನು ಕಾರ್ಕಳ ತಾಲೂಕಿನ ನಿವೃತ್ತ ಮುಖ್ಯ ಶಿಕ್ಷಕರಾದ ಮುನಿರಾಜು ರೆಂಜಾಳ ಇವರಿಗೆ“ವೈಬ್ರೆಂಟ್ ಶಿಕ್ಷಣ ಚೇತನ” ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೈಬ್ರೆಂಟ್ ಎಜುಕೇಷನ್ ಮತ್ತು ಚಾರಿಟೆಬಲ್ ಟ್ರಸ್ಟ್ ಶರತ್ ಘೋರೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರು ಡಾ.ಎಸ್.ಎನ್.ವೆಂಕಟೇಶ್ ನಾಯಕ್,ಕಾರ್ಯಕ್ರಮದ ಕುರಿತು ಪ್ರಸ್ತಾಪಿಸಿ, ಅತಿಥಿಗಳನ್ನು ಸ್ವಾಗತಿಸಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ನಿತಿನ್ ಪಿ.ಎಸ್ ಅಭಿನಂದನಾ ಮಾತುಗಳನ್ನಾಡಿ, ಪ್ರಶಸ್ತಿ ಪತ್ರವನ್ನು ವಾಚಿಸಿದರು. ವೇದಿಕೆಯಲ್ಲಿ ವೈಬ್ರೆಂಟ್ ಎಜುಕೇಷನ್ ಮತ್ತು
ಚಾರಿಟೆಬಲ್ ಟ್ರಸ್ಟ್ ಟ್ರಸ್ಟಿಗಳಾದ ಮೆಹಬೂಬ ಬಾಷಾ, ಸುಭಾಷ್ ಝಾ,ಚಂದ್ರಶೇಖರ ರಾಜೇ ಅರಸ್, ಯೋಗೇಶ್ ಬೆಡೆಕರ್ ಉಪಸ್ಥಿತರಿದ್ದರು. ಜೀವಶಾಸ್ತ್ರ ವಿಭಾಗದ ಉಪನ್ಯಾಸಕಿ ಶ್ರೀಮತಿ ರಾಗಿಣಿ ಮತ್ತು ಪಿಯುಸಿ ವಿದ್ಯಾರ್ಥಿನಿ ಅನನ್ಯ ಪ್ರಭು ವಂದಿಸಿದರು.