- ಕರೋನಾಕ್ಕೆ ಬಲಿಯಾದ ಒಂದು ವರ್ಷದ ಮಗು
- ವೈರಾಣು ಭೀತಿಗೆ ನೇಣಿಗೆ ಶರಣಾದ ಕಾರ್ಮಿಕ
- ಹಳ್ಳಿಗಳಲ್ಲಿ ಮದ್ಯ ಮಾಡಿದ್ರೆ ಕೇಸ್..!
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಾದ್ಯಂತ ಒಂದು ವಾರ ಕಠಿಣ ಲಾಕ್ ಡೌನ್ ಜಾರಿಯಾಗಿದ್ದು ಯಾವುದೇ ನಿರ್ಬಂಧಿತ ಚಟುವಟಿಕೆ ಮಾಡಿದ್ದಲ್ಲಿ ಕಠಿಣ ಕ್ರಮಕ್ಕೆ ಆಡಳಿತ ಮುಂದಾಗಿದೆ.
ಹಾಗಾಗಿ ಮದ್ಯದ ಅಂಗಡಿಗಳನ್ನು ಬಂದ್ ಮಾಡಲಾಗುತ್ತಿದೆ. ಅಬಕಾರಿ ಇಲಾಖೆ ಅಧಿಕಾರಿಗಳು ಶಿವಮೊಗ್ಗ ನಗರದ ಎಲ್ಲಾ ಮದ್ಯದ ಅಂಗಡಿಗಳನ್ನು ಬಂದ್ ಮಾಡಿಸುತ್ತಿದ್ದಾರೆ. ಅಂಗಡಿಗಳಿಗೆ ಬೀಗ ಹಾಕಿ, ಸೀಲ್ ಮಾಡುತ್ತಿದ್ದು, ಎಲ್ಲಾ ತಾಲೂಕಲ್ಲಿ ಮದ್ಯ ಬಂದ್ ಆಗಿದೆ.ಶಿವಮೊಗ್ಗ ಜಿಲ್ಲೆಯಾದ್ಯಂತ ಇರುವ ಬಾರ್, ವೈನ್ ಶಾಪ್, ಎಂಎಸ್ಐಎಲ್, ರೆಸ್ಟೋರೆಂಟ್ಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. 272 ಮದ್ಯದಂಗಡಿಗಳಿಗೆ ಅಬಕಾರಿ ಅಧಿಕಾರಿಗಳೇ ಬೀಗ ಹಾಕಿ, ಸೀಲ್ ಮಾಡುತ್ತಿದ್ದಾರೆ. ಹಳ್ಳಿಗಳಲ್ಲಿ ಮದ್ಯ ಮಾರಾಟ ಮಾಡಿದರೆ ಪೊಲೀಸರು ಕೇಸು ದಾಖಲಿಸಿಕೊಂಡು ಜೈಲಿಗೆ ಕಳುಹಿಸಲು ಸಿದ್ಧತೆ ನಡೆಸಿದ್ದಾರೆ.
ಎಲ್ಲಾ ಕಡೆ ಪೊಲೀಸ್ ಸರ್ಪಗಾವಲು!: ಎಲ್ಲಾ ತಾಲೂಕಲ್ಲಿ ಪೊಲೀಸ್ ಕಾವಲು ಹಾಕಿದ್ದಾರೆ. ಅನವಶ್ಯಕ ಓಡಾಟ ಕಂಡು ಬಂದರೆ ಕಠಿಣ ಕ್ರಮ ತೆಗೆದುಕೊಳ್ಳಲು ನಿರ್ಧಾರ ಮಾಡಲಾಗಿದೆ.
ಕರೋನಾ ಸೋಂಕಿಗೆ ಮಗು ಬಲಿ!: ಸೋಂಕಿಗೆ ಒಂದು ವರ್ಷದ ಕಂದಮ್ಮ ಬಲಿಯಾದ ಮನಕಲಕುವ ಘಟನೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದಿದೆ.
ಮೃತಪಟ್ಟ ಮಗುವನ್ನು ಉದಮ (1) ಎಂದು ಗುರುತಿಸಲಾಗಿದೆ. ಶಿವಮೊಗ್ಗದ ಗಾಂಧಿ ಬಜಾರಿನ ಮಡಿವಾಳರ್ ಕೇರಿ ನಿವಾಸಿಯಾಗಿರುವ ಉದಯ – ಚೈತ್ರಾ ದಂಪತಿಯ ಮಗು ಕರೋನಾ ಸೋಂಕಿಗೆ ಬಲಿಯಾಗಿದೆ. ಮಗುವಿಗೆ ಬಿಳಿ ರಕ್ತಕಣ ಕಡಿಮೆಯಾಗಿದೆ ಎಂದು ಹೆತ್ತವರು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ನಂತರ ಮಗುಗೆ ಆಕ್ಸಿಜನ್ ಸಮಸ್ಯೆ ಎದುರಾಗಿದೆ. ನಂತರ ಮಗುವನ್ನು ಚಿಕಿತ್ಸೆಗೆಂದು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರ ರಾತ್ರಿ ಉಸಿರಾಟದ ಸಮಸ್ಯೆಯಿಂದ ಮೃತಪಟ್ಟಿದೆ.
ವೈರಾಣು ಭೀತಿ ನೇಣಿಗೆ: ಬ್ಲ್ಯಾಕ್ ಫಂಗಸ್ ಭೀತಿಯಿಂದ ನೇಕಾರರೊಬ್ಬರು ಮನೆಯಲ್ಲಿರುವ ಮಗ್ಗಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.
ಬಾಗೇಪಲ್ಲಿ ಮೂಲದ ವಿದ್ಯಾನಗರದ ನಿವಾಸಿ ರವಿ (55) ಆತ್ಮಹತ್ಯೆ ಮಾಡಿಕೊಂಡ ನೇಕಾರ. ಕೋವಿಡ್ ಸೋಂಕಿಗೆ ತುತ್ತಾದ ರವಿ ನಂತರದಲ್ಲಿ ಗುಣಮುಖರಾಗಿದ್ದರು. ಆದರೆ ಚಿಕಿತ್ಸೆ ನಂತರ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿತು.ಚಿಕಿತ್ಸೆಗಾಗಿ ಎಲ್ಲಾ ಸರ್ಕಾರಿ ಆಸ್ಪತ್ರೆಗೆ ಅಲೆದಾಡಿದರೂ ಸೂಕ್ತ ಚಿಕಿತ್ಸೆ ಸಿಗಲಿಲ್ಲ. ಇದರಿಂದ ಖಿನ್ನತೆಗೆ ಒಳಗಾದ ರವಿ ಮನೆಯಲ್ಲಿನ ಮಗ್ಗಕ್ಕೆ ಬೆಳಗ್ಗೆ ನೇಣು ಹಾಕಿಕೊಂಡಿದ್ದಾರೆ.