ಕಾರ್ಕಳ ಶಾಲಾ ಮಕ್ಕಳಿಗೆ ಪೌಷ್ಠಿಕ ಆಹಾರ ಭಾಗ್ಯ!
– ಪೌಷ್ಠಿಕ ಆಹಾರ ವಿತರಣೆ ಯೋಜನೆ ಉದ್ಘಾಟನೆ
– ಪಿ.ಎಂ. ಪೋಷಣ್-ಮಧ್ಯಾಹ್ನ ಉಪಹಾರ ಯೋಜನೆಯಡಿ ಅಜೀಂ ಪ್ರೇಮ್ ಜಿ ಫೌಂಡೇಶನ್ ಸಹಭಾಗಿತ್ವ
NAMMUR EXPRESS NEWS
ಕಾರ್ಕಳ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪಿ.ಎಂ. ಪೋಷಣ್-ಮಧ್ಯಾಹ್ನ ಉಪಹಾರ ಯೋಜನೆಯಡಿ ಅಜೀಂ ಪ್ರೇಮ್ ಜಿ ಫೌಂಡೇಶನ್ ಬೆಂಗಳೂರು ಇವರ ಸಹಭಾಗಿತ್ವದಲ್ಲಿ ಕಾರ್ಕಳ ತಾಲೂಕಿನಲ್ಲಿ ಶಾಲಾ ಮಕ್ಕಳಿಗೆ ಪೌಷ್ಟಿಕ ಆಹಾರ ವಿತರಣೆ ಮಾಡಲಾಯಿತು.
ಶಾಲಾ ಮಕ್ಕಳ ಪೌಷ್ಠಿಕತೆ ವೃದ್ಧಿಸಲು 2024-25 ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ಸರಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ವಾರದಲ್ಲಿ ಆರು ದಿನಗಳು ಪೂರಕ ಪೌಷ್ಠಿಕ ಆಹಾರವನ್ನು ಉಚಿತವಾಗಿ ವಿತರಿಸುವ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ ಸ. ಹಿ. ಪ್ರಾ. ಶಾಲೆ ಕಾರ್ಕಳ ಮೈನ್ ಇಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಸಾಣೂರು ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಜ್ಯೋತಿ , ಮುಖ್ಯ ಶಿಕ್ಷಕಿ ಶ್ರೀಮತಿ ಶಶಿಕಲಾ, ಸಹಶಿಕ್ಷಕರಾದ ಶ್ರೀ ಶಿವಾನಂದ, ಶ್ರೀಮತಿ ಪ್ರತಿಮಾ.ಎಸ್, ಮಧುಶ್ರೀ, ಅಶ್ವಿನಿ, ಪೂಜ,ಅಡುಗೆ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.