ಕ್ರೀಡೆಯಲ್ಲಿ ಕಾರ್ಕಳ ವಿದ್ಯಾರ್ಥಿಗಳು ವಿನ್ನರ್!
– ಎಸ್ ವಿ ಟಿ ಕನ್ನಡ ಮಾಧ್ಯಮ ಪ್ರೌಢಶಾಲೆಯ ಭಾರತಿ, ಜ್ಯೋತಿ, ಭೂಮಿಕಾ ವಿಭಾಗ ಮಟ್ಟಕ್ಕೆ ಆಯ್ಕೆ
– ಕಾರ್ಕಳದ ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ
NAMMUR EXPRESS NEWS
ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ ಹಾಗೂ ವಿದ್ಯೇಶ ವಿದ್ಯಾಮಾನ್ಯ ನ್ಯಾಷನಲ್ ಹೈಸ್ಕೂಲ್ ಹೆರಾಡಿ ಇಲ್ಲಿ ನಡೆದ ಜಿಲ್ಲಾಮಟ್ಟದ ಪ್ರೌಢಶಾಲಾ ಬಾಲಕ – ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಕಾರ್ಕಳದ ಎಸ್ ವಿ ಟಿ ವನಿತಾ ಪದವಿ ಪೂರ್ವ ಕಾಲೇಜಿನ ಕನ್ನಡ ಮಾಧ್ಯಮದ ಪ್ರೌಢಶಾಲೆಯ ಬಾಲಕಿಯರ ತಂಡ ದ್ವಿತೀಯ ಸ್ಥಾನವನ್ನು ಪಡೆದು ಕೊಂಡಿರುತ್ತಾರೆ. ಈ ತಂಡದ ಬೆಸ್ಟ್ ಪ್ಲೇಯರ್ ಹತ್ತನೇ ತರಗತಿಯ ಭಾರತಿ, ಜ್ಯೋತಿ ಭೂಮಿಕಾ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಕ್ರೀಡಾಪಟುಗಳಿಗೆ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಿಯಾ ಪ್ರಭು ಹಾಗೂ ಕೋಚ್ ಕೀರ್ತನ್, ಶ್ರವಣ್ ,ಕುಮಾರಿ ಶ್ವೇತಾ ತರಬೇತಿ ನೀಡಿರುತ್ತಾರೆ. ಸಾಧನೆಗೈದ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರು ಹಿರಿಯ ಸಹ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿರುತ್ತಾರೆ.
ಕಾರ್ಕಳದ ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ
ಪದವಿ ಪೂರ್ವ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆಯ ವತಿಯಿಂದ ಎಂಜಿಎಂ ಕಾಲೇಜಿನಲ್ಲಿ ನಡೆದ ಬ್ಯಾಡ್ಮಿಂಟನ್ ಹುಡುಗಿಯರ ವಿಭಾಗದಲ್ಲಿ ಪ್ರಥಮ ವಿಜ್ಞಾನ ವಿಭಾಗದ ಅವನಿ ಮತ್ತು ಹಿಂದೂ ಪದವಿ ಪೂರ್ವ ಕಾಲೇಜು, ಶಿರ್ವದಲ್ಲಿ ನಡೆದ ಹುಡುಗರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಅಜಿತ್ ಮತ್ತು ಸುಹಾನ್ ಹಾಗೂ ಹುಡುಗಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಶೈಲ್ವಿ ಇವರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರ ಅಪೂರ್ವ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು, ಅಧ್ಯಾಪಕ ಅಧ್ಯಾಪಕೇತರ ವೃಂದದವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.