- ಪಿಯುಸಿ ಪರೀಕ್ಷೆ ಇಲ್ಲದ ಕಾರಣ ಗೊಂದಲ
- ಸರಕಾರದ ನಡೆ ಬಗ್ಗೆ ಭಾರೀ ಕುತೂಹಲ
- ಬಡ ಮಕ್ಕಳಿಗೆ, ಗ್ರಾಮೀಣ ವಿದ್ಯಾರ್ಥಿಗಳಿಗೆ ಅನ್ಯಾಯ ಆಗದಿರಲಿ..!
NAMMUR EXPRESS
ಬೆಂಗಳೂರು: ವೃತ್ತಿಪರ ಕೋರ್ಸುಗಳಿಗೆ ಸಿಇಟಿ ಮತ್ತು ನೀಟ್ ಅಂಕಗಳನ್ನು ಮಾತ್ರ ಪರಿಗಣಿಸುವ ಕುರಿತು ತೀರ್ಮಾನ ಕೈಗೊಳ್ಳಲು ಸರಕಾರ ಮುಂದಾಗಿದೆ.
ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆ ಇಲ್ಲದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ. ಪಿಯುಸಿ ಪರೀಕ್ಷೆ ಇಲ್ಲದೆ ಪಾಸಾಗುವ ವಿದ್ಯಾರ್ಥಿಗಳ ಇಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಮೊದಲಾದ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ(CET), ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್) ಅಂಕಗಳನ್ನು ಮಾತ್ರ ಪರಿಗಣಿಸುವ ಕುರಿತು ತೀರ್ಮಾನ ಕೈಗೊಳ್ಳಲಾಗುತ್ತದೆ. ಈ ಬಗ್ಗೆ ಶೀಘ್ರದಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರಾದ ಡಿಸಿಎಂ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಿಇಟಿ ಅಂಕಗಳನ್ನು ಮಾತ್ರ ಪರಿಗಣಿಸಿ ರ್ಯಾಂಕಿಂಗ್ ನೀಡುವಂತೆ ಪತ್ರ ಬರೆದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ಸಚಿವ ಸುರೇಶ್ ಕುಮಾರ್ ಅವರ ಸಲಹೆಗೆ ಸಂಬಂಧಿಸಿದಂತೆ ಉನ್ನತ ಶಿಕ್ಷಣ ತಜ್ಞರು, ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಡಿಸಿಎಂ ಹೇಳಿದ್ದಾರೆ.
ಕೇಂದ್ರ ಸಿಬಿಎಸ್ಸಿ, ರಾಜ್ಯ ಪಿಯು ಬೋರ್ಡ್ ಅಂಕಗಳ ಆಧಾರದ ಮೇಲೆ ಗಣನೆಗೆ ತೆಗೆದುಕೊಳ್ಳುತ್ತಿರುವುದು ತಾರತಮ್ಯಕ್ಕೆ ಕಾರಣವಾಗಿದೆ.
ಯಾವ ವಿದ್ಯಾರ್ಥಿಗಳಿಗೂ ತೊಂದರೆಯಾಗದಂತೆ ಎಲ್ಲಾ ಕ್ರಮಗಳನ್ನು ಸರಕಾರ ಕೈಗೊಳ್ಳಬೇಕು ಎಂಬ ಅಗ್ರಹ ವ್ಯಕ್ತವಾಗಿದೆ.
ರಾಜ್ಯದ ಎಲ್ಲಾ ಸುದ್ದಿ, ಜಾಹೀರಾತಿಗಾಗಿ “NAMMUR EXPRESS” ಫೇಸ್ಬುಕ್ ಮತ್ತು ಯೂಟ್ಯೂಬ್ ಚಾನೆಲ್ ಲೈಕ್ ಮಾಡಿ, ಸಬ್ಸ್ಕ್ರೈಬ್ ಆಗಿ. ವಾಟ್ಸಾಪ್ನಲ್ಲಿ ಸುದ್ದಿ ಪಡೆಯಲು 9481949101ಗೆ ನಿಮ್ಮ ಹೆಸರು, ಊರು, ತಾಲೂಕು ವಾಟ್ಸಾಪ್ ಮಾಡಿರಿ. ನಿಮ್ಮ ಎಲ್ಲಾ ಸ್ನೇಹಿತರು ಹಾಗೂ ಗ್ರೂಪ್ಗಳಿಗೆ ಶೇರ್ ಮಾಡಿರಿ. ಧನ್ಯವಾದಗಳು..!.