ತೀರ್ಥಹಳ್ಳಿ ಸರ್ಕಾರಿ ಪಿಯು ಕಾಲೇಜು ಹಳೆ ವಿದ್ಯಾರ್ಥಿಗಳ ಸಭೆ!
* ಶಾಸಕ ಆರಗ ಜ್ಞಾನೇಂದ್ರ ಅಧ್ಯಕ್ಷತೆಯಲ್ಲಿ ಸೆ. 28ಕ್ಕೆ ಕಾರ್ಯಕ್ರಮ
* ಎಲ್ಲಾ ಹಳೆಯ ವಿದ್ಯಾರ್ಥಿಗಳು ಆಗಮಿಸಲು ಕರೆ
NAMMUR EXPRESS NEWS
ತೀರ್ಥಹಳ್ಳಿ: ಸರ್ಕಾರಿ ಪದವಿ ಪೂರ್ವ ಕಾಲೇಜು, ತೀರ್ಥಹಳ್ಳಿ ಇದರ ಹಳೆ ವಿದ್ಯಾರ್ಥಿಗಳ ಸಭೆ ಸೆ.28ರಂದು ಬೆಳಿಗ್ಗೆ 10:00 ಗಂಟೆಗೆ ಶಾಸಕರಾದ ಆರಗ ಜ್ಞಾನೇಂದ್ರ ಇವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದೆ.
1983ರಲ್ಲಿ ಈ ಕಾಲೇಜು ಪ್ರಾರಂಭವಾಗಿದ್ದು, ಅಂದಿನಿಂದ ಇಂದಿನವರೆಗೆ ಸಾವಿರಾರು ವಿದ್ಯಾರ್ಥಿಗಳು ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ವಿವಿಧ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಶೈಕ್ಷಣಿಕವಾಗಿ ಉನ್ನತ ಮಟ್ಟದ ಸಾಧನೆಯೊಂದಿಗೆ ಉದ್ಯೋಗದಲ್ಲಿಯೂ ಒಳ್ಳೆಯ ಸ್ಥಾನಮಾನಗಳನ್ನು ಪಡೆದುಕೊಂಡಿರುತ್ತಾರೆ. ಕಾಲೇಜಿನ ಅಭಿವೃದ್ಧಿಯ ಹಿನ್ನಲೆಯಲ್ಲಿ ಈ ಕಾಲೇಜಿನಲ್ಲಿ ಓದಿರುವ ಎಲ್ಲಾ ಹಳೆಯ ವಿದ್ಯಾರ್ಥಿಗಳನ್ನು ಒಂದೆಡೆ ಸೇರಿಸಬೇಕಾಗಿದೆ. ಸಭೆಗೆ ಈ ಕಾಲೇಜಿನಲ್ಲಿ ಓದಿರುವ ಎಲ್ಲಾ ಹಳೆಯ ವಿದ್ಯಾರ್ಥಿಗಳು ಹಾಜರಾಗಬೇಕಾಗಿ ನಾಗರಾಜ ಶೆಟ್ಟಿ ಉಪಾಧ್ಯಕ್ಷರು ಕಾಲೇಜು ಅಭಿವೃದ್ಧಿ ಸಮಿತಿ ಸರ್ಕಾರಿ ಪದವಿ ಪೂರ್ವ ಕಾಲೇಜು ತೀರ್ಥಹಳ್ಳಿ ಹಾಗೂ ಸುಧಾ ವೈ.ಎಂ. ಪ್ರಾಚಾರ್ಯರು ಸರ್ಕಾರಿ ಪದವಿ ಪೂರ್ವ ಕಾಲೇಜು, ತೀರ್ಥಹಳ್ಳಿ ವಿನಂತಿಸಿಕೊಂಡಿದ್ದಾರೆ.
ಸರ್ಕಾರಿ ಪಿಯು ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿಗಳು ಓದಿದ್ದು ಎಲ್ಲರೂ ಈ ಸಭೆಯಲ್ಲಿ ಭಾಗವಹಿಸಲು ಮನವಿ ಮಾಡಲಾಗಿದೆ.