- ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವು
- ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ
NAMMUR EXPRESS
ಬೆಂಗಳೂರು: ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವ ಸಿಎಂ ಉದಾಸಿ(81) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ರಕ್ತ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಉದಾಸಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಹಾನಗಲ್ನಲ್ಲಿ ಬುಧವಾರ ಉದಾಸಿ ಅವರ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಈ ಹಿಂದೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಉದಾಸಿ ಅವರ ಆರೋಗ್ಯ ವಿಚಾರಿಸಿದ್ದರು. ಸಿ.ಎಂ.ಉದಾಸಿಯವರು ಸಜ್ಜನ ಹಾಗೂ ಕ್ರಿಯಾಶೀಲ ರಾಜಕಾರಣಿ. ಲೋಕೋಪಯೋಗಿ ಸಚಿವರಾಗಿಯೂ ಅತ್ಯಂತ ಉತ್ತಮವಾಗಿ ಕಾರ್ಯನಿರ್ವಹಿಸಿದ್ದರು. ಅಭಿವೃದ್ಧಿ ಪರ ಚಿಂತಕರಾಗಿದ್ದ ಅವರು ಹಾನಗಲ್ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿ, ಆ ಭಾಗದಲ್ಲಿ ಮಾತ್ರವಲ್ಲದೆ ರಾಜ್ಯದ ಅತ್ಯಂತ ಜನಪ್ರಿಯ ನಾಯಕರಾಗಿದ್ದರು. ಅವರ ಪುತ್ರ ಶಿವಕುಮಾರ ಉದಾಸಿ ಹಾವೇರಿ ಸಂಸದರಾಗಿದ್ದಾರೆ.
ರಾಜ್ಯದ ಎಲ್ಲಾ ಸುದ್ದಿ, ಜಾಹೀರಾತಿಗಾಗಿ “NAMMUR EXPRESS” ಫೇಸ್ಬುಕ್ ಮತ್ತು ಯೂಟ್ಯೂಬ್ ಚಾನೆಲ್ ಲೈಕ್ ಮಾಡಿ, ಸಬ್ಸ್ಕ್ರೈಬ್ ಆಗಿ. ವಾಟ್ಸಾಪ್ನಲ್ಲಿ ಸುದ್ದಿ ಪಡೆಯಲು 9481949101ಗೆ ನಿಮ್ಮ ಹೆಸರು, ಊರು, ತಾಲೂಕು ವಾಟ್ಸಾಪ್ ಮಾಡಿರಿ. ನಿಮ್ಮ ಎಲ್ಲಾ ಸ್ನೇಹಿತರು ಹಾಗೂ ಗ್ರೂಪ್ಗಳಿಗೆ ಶೇರ್ ಮಾಡಿರಿ. ಧನ್ಯವಾದಗಳು..!.