ರಸ್ತೆ ಮಧ್ಯೆ ಹೊತ್ತಿ ಉರಿಯುತ್ತಿರುವ ವಾಹನಗಳು.. ಹುಷಾರ್!
– ರಾಜ್ಯದಲ್ಲಿ ಹಲವೆಡೆ ಕಾರು, ಲಾರಿ ನಿಂತಲ್ಲೇ ಭಸ್ಮ
– ಮಂಗಳೂರು, ಹಾಸನ, ಚಿತ್ರದುರ್ಗದಲ್ಲಿ ಘಟನೆ
NAMMUR EXPRESS NEWS
ಮಂಗಳೂರು/ಹಾಸನ/ಚಿತ್ರದುರ್ಗ: ಇತ್ತೀಚಿಗೆ ರಸ್ತೆಯಲ್ಲಿ ಕಾರು, ವಾಹನಗಳು ಇದ್ದಕ್ಕಿದ್ದಂತೆ ಹೊತ್ತಿ ಉರಿಯುವ ಘಟನೆಗಳು ಹೆಚ್ಚಾಗುತ್ತಿವೆ. ಕಳೆದ ಎರಡು ದಿನಗಳಲ್ಲಿ ರಾಜ್ಯದಲ್ಲಿ ಮೂರು ಘಟನೆಯಲ್ಲಿ ಲಾರಿ, ಕಾರು, ಓಮ್ನಿ ಹೊತ್ತಿ ಉರಿದಿದೆ.
ಚಿತ್ರದುರ್ಗದಲ್ಲಿ ಹೊತ್ತಿ ಉರಿದ ಶಾರ್ಟ್ ಸರ್ಕ್ಯೂಟ್ನಿಂದ ಆಯಿಲ್ ಕಂಟೈನರ್ ಹೊತ್ತಿ ಉರಿದ ಘಟನೆ – ಚಿತ್ರದುರ್ಗ ನಗರದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.
ನಗರದ ನವೀನ್ ಐಶ್ವರ್ಯ ಹೋಟಲ್ ಮುಂಭಾಗದ ಹೆದ್ದಾರಿಯಲ್ಲಿ ಬೆಂಗಳೂರಿಂದ ಬಳ್ಳಾರಿ ಕಡೆಗೆ ಸಾಗುತ್ತಿದ್ದ ಕಂಟೈನರ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಎಚ್ಚೇತ್ತ ಚಾಲಕ, ಕ್ಲೀನರ್ ಕಂಟೈನರ್ನಿಂದ ಹಾರಿ ಪ್ರಾಣ ಉಳಿಸಿಕೊಂಡಿದ್ದಾರೆ.
ಹಾಸನದಲ್ಲಿ ಹೊತ್ತಿ ಉರಿದ ಓಮ್ನಿ!
ಹಾಸನ: ಚಲಿಸುತ್ತಿದ್ದ ಓಮ್ಮಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಹಾಸನದಲ್ಲಿ ನಡೆದಿದ್ದು ಇತರ ಸವಾರರನ್ನು ಬೆಚ್ಚಿ ಬೀಳಿಸಿದೆ. ಓಮ್ಮಿ ಕಾರು ನೋಡನೋಡುತ್ತಿದ್ದಂತೆ ಹೊತ್ತಿ ಉರಿದಿದೆ. ಈ ವೇಳೆ ಇದರಲ್ಲಿ ಮೂರು ಜನ ಪ್ರಯಾಣ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಹಾಸನನ ಹೆರಗು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಆನಳ್ಳಿ ಗ್ರಾಮದ ಅಶೋಕ್ ಎಂಬುವವರಿಗೆ ಸೇರಿದ ಓಮ್ಮಿ ಕಾರಿಗೆ ಬೆಂಕಿ ಹೊತ್ತಿ ಉರಿದಿದೆ. ಕೂಡಲೇ ರಸ್ತೆಯಲ್ಲಿಯೇ ಕಾರು ನಿಲ್ಲಿಸಿದ ಚಾಲಕ ಪರಾರಿಯಾಗಿದ್ದಾನೆ. ಕಾರಿನಲ್ಲಿದ್ದ ಮೂವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.ಕಾರು ಸಂಪೂರ್ಣ ಸುಟ್ಟು ಹೋಗಿದೆ.
ಮಂಗಳೂರಲ್ಲಿ ಸಂಪೂರ್ಣ ಸುಟ್ಟು ಕರಕಲಾದ ಕಾರು!
ಮಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಇದ್ದಕಿದ್ದಂತೆ ಬೆಂಕಿ ಹೊತ್ತಿಕೊಂಡು ಉರಿದ ಘಟನೆ ಅಡ್ಯಾರ್ ಸಹ್ಯಾದ್ರಿ ಕಾಲೇಜು ಬಳಿ ಸಂಭವಿಸಿದೆ.
ಶನಿವಾರ ಮಧ್ಯಾಹ್ನದ ಹೊತ್ತಿಗೆ ಘಟನೆ ಸಂಭವಿಸಿದ್ದು ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಕಾರು ಚಾಲಕ ಕಾರನ್ನು ನಿಲ್ಲಿಸಿದ್ದು ಕೂಡಲೇ ಕಾರಿನಲ್ಲಿದ್ದವರು ಹೊರ ಬಂದು ಜೀವ ಉಳಿಸಿಕೊಂಡಿದ್ದಾರೆ. ಬೆಂಕಿ ಅವಘಡದಿಂದ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ.