ಮೋಡ ಗುಡುಗು ಮಳೆ: ದೇವರೇ ಕಾಪಾಡು!
– ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
– ಕರಾವಳಿಯಲ್ಲಿ ಚದುರಿದಂತೆ ಹಗುರದಿಂದ ಮಳೆ
– ರಾಜ್ಯದಲ್ಲಿ ಹಲವೆಡೆ ಮಳೆ ಅಲರ್ಟ್
NAMMUR EXPRESS NEWS
ಬೆಂಗಳೂರು: ರಾಜ್ಯಾದ್ಯಂತ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಪ್ರತ್ಯೇಕವಾಗಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ ಭಾರೀ ಮಳೆಯಾಗಲಿದೆ. ತಕ್ಕಮಟ್ಟಿಗೆ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.
* ಉತ್ತರ ಒಳನಾಡಿನಲ್ಲೂ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ!
ಉತ್ತರ ಒಳನಾಡಿನಲ್ಲೂ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ವಿಜಯನಗರ, ಕೊಪ್ಪಳ, ಗದಗ, ವಿಜಯಪುರ, ಬಾಗಲಕೋಟೆ ಮತ್ತು ಹಾವೇರಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಂಭವವಿದೆ.
ಮಲೆನಾಡಲ್ಲಿ ಭಾರೀ ಮಳೆ ಅಲರ್ಟ್!
ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾದರೆ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಅತಿ ಹಗುರದಿಂದ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಂಭವವಿದೆ. ಬೆಂಗಳೂರಿನಲ್ಲಿ ಚದುರಿದಂತೆ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 20 ಡಿ.ಸೆ ಇರಲಿದೆ.
ಎಲ್ಲೆಲಿ ಯಾವ ಅಲರ್ಟ್!
ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ಗದಗ, ಹಾವೇರಿ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.