7 ಕೋಟಿ ರೂ.ಆನ್ಲೈನ್ ವಂಚನೆ: ಗ್ಯಾಂಗ್ ಅರೆಸ್ಟ್!
– ಮೈಸೂರು: ಹೆದ್ದಾರಿಯಲ್ಲಿ ಕೆಎಸ್ಆರ್ ಟಿ ಸಿ ಬಸ್ ಭೀಕರ ಅಪಘಾತ!
* ಬಳ್ಳಾರಿ: ಶಾಸಕ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್
* ಮೈಸೂರು ಅನುಮಾನಾಸ್ಪದವಾಗಿ ವೈದ್ಯೆ ಸಾವು!
* ಪಿತೃಪಕ್ಷ ಪೂಜೆ ಬಳಿಕ ಎಣ್ಣೆ ಪಾರ್ಟಿ, ಸ್ನೇಹಿತನ ಬಗೆದು ಕೊಂದ!
NAMMUR EXPRESS NEWS
ಬೆಂಗಳೂರು: ಪ್ರಮುಖ ಕೈಗಾರಿಕೋದ್ಯಮಿ ಪ್ರತಿಷ್ಠಿತ ವರ್ದಮಾನ್ ಗ್ರೂಪ್ ಮಾಲಿಕರಾದ ಶ್ರೀಪಾಲ್ ಓಸ್ವಾಲ್ ಅವರಿಗೆ 7 ಕೋಟಿ ರೂಪಾಯಿ ವಂಚಿಸಿದ ಆರೋಪಿ ಗ್ಯಾಂಗ್ನ ಇಬ್ಬರು ಸದಸ್ಯರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ. ಆನ್ಲೈನ್ ಮೂಲಕ ವಂಚಿಸಲಾದ ಆರೋಪಿಗಳಿಂದ ಈಗಾಗಲೇ 5.25 ಕೋಟಿ ರೂಪಾಯಿ ವಶಪಡಿಸಿಕೊಳ್ಳಲಾಗಿದೆ ಎಂದು ಲೂಧಿಯಾನ ಪೊಲೀಸ್ ಆಯುಕ್ತ ಕುಲದೀಪ್ ಸಿಂಗ್ ಚಾಹಲ್ ಹೇಳಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಏಳು ಮಂದಿ ಹೆಚ್ಚುವರಿ ಗ್ಯಾಂಗ್ ಸದಸ್ಯರನ್ನು ಗುರುತಿಸಿದ್ದಾರೆ. ಎಲ್ಲರೂ ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಿಂದ ಬಂದವರು ಮತ್ತು ಅವರನ್ನು ಬಂಧಿಸಲು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವಂಚಕರು ವರ್ಧಮಾನ್ ಗ್ರೂಪ್ ಮಾಲೀಕ ಓಸ್ವಾಲ್ ಅವರ ಬ್ಯಾಂಕ್ ಖಾತೆಯಿಂದ 7 ಕೋಟಿ ರೂ ಕೊಳ್ಳೆ ಹೊಡೆದಿದ್ದರು.
ಇಡೀ ಪ್ರಕರಣ ಒಂದು ಸಿನಿಮೀಯ ಮಾದರಿಯಲ್ಲಿ ನಡೆದಿದೆ. ಬಂಧಿತ ವ್ಯಕ್ತಿಗಳಲ್ಲಿ ಒಬ್ಬರು ಸಿಬಿಐ ಅಧಿಕಾರಿಯಂತೆ ನಟಿಸಿದ್ದಾರೆ. ಓಸ್ವಾಲ್ ಅವರ ಮೇಲೆ ನಕಲಿ ಬಂಧನ ವಾರಂಟ್ ಅನ್ನು ಅವರ ಮುಂದೆ ಇಟ್ಟಿದ್ದಾರೆ ಮತ್ತು ಓಸ್ವಾಲ್ ಅವರು ಅದನ್ನು ಪಾಲಿಸದಿದ್ದರೆ ಡಿಜಿಟಲ್ ಬಂಧನಕ್ಕೆ ಬೆದರಿಕೆ ಹಾಕಿದ್ದರು.
ಓಸ್ವಾಲ್ ಅವರ ದೂರಿನ ಮೇರೆಗೆ ಸೈಬರ್ ಸೆಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು 48 ಗಂಟೆಗಳಲ್ಲಿ ಶಂಕಿತ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಇಬ್ಬರನ್ನು ಅಸ್ಸಾಂನ ಗುವಾಹಟಿ ಮೂಲದ ಅಟಾನೂ ಚೌಧರಿ ಮತ್ತು ಆನಂದ್ ಕುಮಾರ್ ಚೌಧರಿ ಎಂದು ಗುರುತಿಸಲಾಗಿದೆ.
ಈ ಘಟನೆಯ ಹಿಂದೆ ಒಂದು ವಾರದೊಳಗೆ ಈ ಪ್ರದೇಶದಲ್ಲಿ ವರದಿಯಾದ ಸೈಬರ್ ವಂಚನೆಯ ಎರಡನೇ ಪ್ರಮುಖ ಪ್ರಕರಣವಾಗಿದೆ. ಈ ಹಿಂದೆ, ಸ್ಥಳೀಯ ಕೈಗಾರಿಕೋದ್ಯಮಿ ರಜನೀಶ್ ಅಹುಜಾ ಅವರಿಗೆ ಇದೇ ರೀತಿಯಾಗಿ ಆನ್ಲೈನ ಸುಲಿಗೆ ಪಾವತಿಗೆ ಸಂಬಂಧಿಸಿದಂತೆ ಇದೇ ರೀತಿಯ ನಕಲಿ ಬಂಧನ ವಾರಂಟ್ ಮೂಲಕ ಬೆದರಿಕೆ ಹಾಕಿ 1.01 ಕೋಟಿ ರೂಪಾಯಿ ವಂಚಿಸಲಾಗಿದೆ
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕೆಎಸ್ಆರ್ ಟಿ ಸಿ ಬಸ್ ಭೀಕರ ಅಪಘಾತ!
ಬೆಂಗಳೂರು:ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಕೆಎಸ್ಆರ್ ಟಿ ಸಿ ಬಸ್ ಭೀಕರ ಅಪಘಾತವಾಗಿದ್ದು, ಅನೇಕ ಮಂದಿ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಚಾಲಕನ ಅಜಾಗರೂಕತೆ ಮತ್ತು ಅವೈಜ್ಞಾನಿಕ ರಸ್ತೆ ಕಾಮಗಾರಿಯೇ ಈ ಅಪಘಾತಕ್ಕೆ ಕಾರಣ ಎಂಬ ಮಾತುಗಳು ಕೇಳಿ ಬಂದಿವೆ. ಪಲ್ಟಿ ಹೊಡೆದ ಜಾಗದಲ್ಲಿ ಕಂಟೇನರ್ ಗೆ ಗುದ್ದಿದ ಪರಿಣಾಮ ಹಲವರಿಗೆ ತೀವ್ರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಕುಣಿಗಲ್ ಡಿಪೋಗೆ ಸಂಬಂಧಿಸಿದ ಬಸ್ ಇದಾಗಿದ್ದು, ಮಂಡ್ಯ ಪಟ್ಟಣದ ಸರ್ವೀಸ್ ರಸ್ತೆಯಲ್ಲಿ ಸಂಭವಿಸಿದ ಈ ಅಪಘಾತದಲ್ಲಿ 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಬಸ್ ನಲ್ಲಿ ಸುಮಾರು 60 ಮಂದಿ ಪ್ರಯಾಣಿಕರಿದ್ದರು. ಅದರಲ್ಲೂ ವಿದ್ಯಾರ್ಥಿಗಳು ಹೆಚ್ಚಾಗಿದ್ದರು ಎಂದು ತಿಳಿದು ಬಂದಿದೆ.
ಅಕ್ರಮ ಗಣಿಗಾರಿಕೆ ಪ್ರಕರಣ: ಶಾಸಕ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್!
ಬೆಂಗಳೂರು :ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಜನಾರ್ದನ ರೆಡ್ಡಿಗೆ ಸಿಬಿಐ ವಿಶೇಷ ಕೋರ್ಟ್ ವಿಧಿಸಿದ್ದ ನಿರ್ಬಂಧಕ್ಕೆ ಮುಕ್ತಿ ಸಿಕ್ಕಿದೆ. ಶಾಸಕ ಜನಾರ್ದನ ರೆಡ್ಡಿಗೆ ಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಬಳ್ಳಾರಿ ಜಿಲ್ಲೆ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ.
ಹಲವು ಬಾರಿ ಕೋರ್ಟ್ ಅವಕಾಶ ಕೇಳಿ ಸಲ್ಲಿಸಿದ್ದ ಮನವಿಯನ್ನು ತಳ್ಳಿ ಹಾಕಿತ್ತು. ಆದರೆ ಇದೀಗ ಬಳ್ಳಾರಿ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ. ಈ ಮೂಲಕ ಶಾಸಕ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಮೈಸೂರು ಅನುಮಾನಾಸ್ಪದವಾಗಿ ವೈದ್ಯೆ ಸಾವು!
ಮೈಸೂರು: ಮೈಸೂರಲ್ಲಿ ಅನುಮಾನಾಸ್ಪದವಾಗಿ ವೈದ್ಯೆಯೊಬ್ಬರು ಮೃತಪಟ್ಟಿದ್ದಾರೆ. ಮೈಸೂರಿನ ಚೆಲುವಾಂಬ ಆಸ್ಪತ್ರೆಯ ಪ್ರಸೂತಿ ತಜ್ಞೆ ಡಾ.ಜಿ.ಎಸ್.ವಿದ್ಯಾಧರೆ ಮೃತರು. ಗಂಡನ ಕಿರುಕುಳ ಹಾಗೂ ಕೊಲೆ ಆರೋಪ ಕೇಳಿ ಬಂದಿದೆ.
ಮಂಡ್ಯದ ಗೌಡಗೆರೆಯ ವಿದ್ಯಾಧರೆಯನ್ನು ಕೆ.ಆರ್.ಆಸ್ಪತ್ರೆಯ ಮೂಳೆ ತಜ್ಞ ಡಾ.ಷಣ್ಮುಖ ವಿವಾಹವಾಗಿದ್ದರು. 14 ವರ್ಷದ ಹಿಂದೆ ವಿವಾಹವಾಗಿದ್ದ ದಂಪತಿಗೆ ಕಳೆದ ನಾಲ್ಕೈದು ತಿಂಗಳಿಂದ ಮನಸ್ತಾಪ ಹೆಚ್ಚಾಗಿತ್ತು. ಹೀಗಾಗಿ ಒಂದೇ ಅಪಾರ್ಟ್ಮೆಂಟ್ನ ಬೇರೆ ಬೇರೆ ಫ್ಲೋರ್ಗಳಲ್ಲಿ ಪ್ರತ್ಯೇಕ ವಾಸಕ್ಕೆ ನ್ಯಾಯ ಪಂಚಾಯಿತಿ ಮಾಡಿಕೊಂಡಿದ್ದರು.
ತವರು ಮನೆಯಿಂದ ಗಂಡನ ಮನೆಗೆ ಬಂದಿದ್ದ ವೈದ್ಯೆ ವಿದ್ಯಾಧರೆ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಪತಿ ಷಣ್ಮುಖ ಮೇಲೆ ವಿದ್ಯಾಧರೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಸದ್ಯ ಈ ಸಂಬಂಧ ಮೈಸೂರಿನ ಲಕ್ಷ್ಮೀಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.
ಪಿತೃಪಕ್ಷ ಪೂಜೆ ಬಳಿಕ ಎಣ್ಣೆ ಪಾರ್ಟಿ, ಸ್ನೇಹಿತನ ಬಗೆದು ಕೊಂದ ಪಾಪಿ!
ಬೆಂಗಳೂರು: ಬೆಂಗಳೂರಿನಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆಯಾಗಿದೆ. ಕೀರ್ತಿ (32) ಎಂಬಾತ ಮೂರ್ತಿ(52) ಎಂಬುವವರಿಗೆ ಚಾಕುವಿನಿಂದ ಇರಿದು ಕೊಂದಿದ್ದಾನೆ. ಬೆಂಗಳೂರಿನ ಜ್ಞಾನಭಾರತಿ ಠಾಣಾ ವ್ಯಾಪ್ತಿಯ ಸಣ್ಣೇನ ಹಳ್ಳಿಯಲ್ಲಿ ಘಟನೆ ನಡೆದಿದೆ.
ಮೂರ್ತಿ ಹಸು ಸಾಕಾಣಿಕೆ ಕೆಲಸ ಮಾಡುತ್ತಿದ್ದರೆ, ಆರೋಪಿ ಕೀರ್ತಿ ಸ್ನೇಹಿತನಾಗಿದ್ದು ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ.
ಮನೆಯಲ್ಲಿ ಮಹಾಲಯ ಅಮಾವಾಸ್ಯೆಯ ಹಬ್ಬ ಮಾಡಿ, ಮದ್ಯ ಸೇವನೆ ಮಾಡಿದ್ದರು. ಈ ಸಮಯದಲ್ಲಿ ಗಲಾಟೆ ನಡೆದಿದ್ದು ಸಿಟ್ಟಿನಲ್ಲಿ ಕೀರ್ತಿ ಮೂರ್ತಿಯ ಹೊಟ್ಟೆಗೆ ಚಾಕುವಿನಿಂದ ಇರಿದು ಕೊಂದಿದ್ದಾನೆ.
ಇನ್ನೂ ಮೂರ್ತಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸೆ. 29 ರಾತ್ರಿ 7 ಗಂಟೆ ಸುಮಾರಿಗೆ ಕೊಲೆ ಮಾಡಿ ಎಸ್ಕೇಪ್ ಆಗಿದ್ದ. ಕನಕಪುರ ರಸ್ತೆ ಮಾರ್ಗವಾಗಿ ಬೈಕ್ನಲ್ಲಿ ಪ್ರಯಾಣ ಬೆಳೆಸುತ್ತಿದ್ದ. ಈ ವೇಳೆ ಟ್ರ್ಯಾಕ್ ಮಾಡಿ ಆರೋಪಿಯನ್ನು ಹಿಡಿದಿದ್ದಾರೆ. ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪ್ರಕರಣ ದಾಖಲಾಗಿದ್ದು ತನಿಖೆಯನ್ನು ಮುಂದುವರಿಸಿದ್ದಾರೆ.