ರಾಜ್ಯ ಮಟ್ಟದ ಕಬ್ಸ್ ಮತ್ತು ಬುಲ್ ಬುಲ್ಸ್ ಉತ್ಸವ ಆರಂಭ
* ರಾಜ್ಯದ 6 ರಿಂದ 10 ವರ್ಷದ ಎಳೆಯರು ಭಾಗಿ
* ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ ಜಾರ್ಜ್ರಿಂದ ಉತ್ಸವದ ಉದ್ಘಾಟನೆ
NAMMUR EXPRESS NEWS
ಚಿಕ್ಕಮಗಳೂರು: ಅಕ್ಟೋಬರ್ 5 ರಿಂದ ಚಿಕ್ಕಮಗಳೂರಿನಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಿಂದ 44ನೇ ರಾಜ್ಯಮಟ್ಟದ ಕಬ್ ಮತ್ತು ಬುಲ್ ಬುಲ್ ಉತ್ಸವ ಆರಂಭಗೊಳ್ಳಲಿದೆ ಎಂದು ಸಂಸ್ಥೆಯ ರಾಜ್ಯ ಉಪಾಧ್ಯಕ್ಷ ಎ.ಎನ್ ಮಹೇಶ್ ತಿಳಿಸಿದ್ದಾರೆ.
ನಗರದ ಆದಿಚುಂಚನಗಿರಿ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಉತ್ಸವ ಆಯೋಜನೆಗೊಂಡಿದೆ,
ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಉತ್ಸವದ ಉದ್ಘಾಟನೆ ನೆರವೇರಿಸಲಿದ್ದು. ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ರಾಣಿ ಚೆನ್ನಮ್ಮ ವಿವಿ ಕುಲಪತಿ ಎಸ್.ವಿ.ತ್ಯಾಗರಾಜ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ,ಸ್ಕೌಟ್ಸ್ ಅಂಡ್ ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ ಜಿ ಆರ್ ಸಿಂಧ್ಯಾ ಇಡೀ ಕಾರ್ಯಕ್ರಮದ ನೇತೃತ್ವ ವಹಿಸಲಿದ್ದು, ಎಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ನಾಯಕರು ಭಾಗವಹಿಸಲಿದ್ದಾರೆ.
ಉತ್ಸವದಲ್ಲಿ ರಾಜ್ಯದ 6 ರಿಂದ 10 ವರ್ಷದ ಎಳೆಯರು ಭಾಗವಹಿಸಲಿದ್ದಾರೆ. ಅವರಿಗೆ ಸಾಹಸಮಯ ಚಟುವಟಿಕೆಗಳು, ಹೊರಸಂಚಾರ, ಶೈಕ್ಷಣಿಕ ಸ್ಥಳಗಳ ಸಂದರ್ಶನ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾಧಿಕಾರಿ ಮತ್ತು ಜನಪ್ರತಿನಿಧಿಗಳ ಸಹಕಾರದೊಂದಿಗೆ ಎಲ್ಲ ಮಕ್ಕಳಿಗೂ ಉತ್ತಮ ಊಟ, ತಂಗಲು ವ್ಯವಸ್ಥೆ ಕಲ್ಪಿಸಲಾಗಿದ್ದು,ಉತ್ಸವದ ಅಂಗವಾಗಿ ಒಂದು ಆಕರ್ಷಕ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಗುವುದು. ಉತ್ಸವದ ಹಿನ್ನಲೆಯಲ್ಲಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ವತಿಯಿಂದ ಕೀಟ ಪ್ರದರ್ಶನವೂ ನಡೆಯಲಿದೆ ಎಂದು ತಿಳಿಸಿದ್ದಾರೆ