ಹೆಬ್ರಿಯಲ್ಲಿ ಏಕಾಏಕಿ ಜಲ ಪ್ರಳಯ!
– ನೆರೆಯಲ್ಲಿ ತೇಲಿಹೋದ ಎರಡು ಕಾರು, ಎರಡು ಬೈಕ್
– ವಿಜಯ ನಗರದಲ್ಲಿ ಸಿಡಿಲಿಗೆ ಎರಡು ಸಾವು
– ಭಾರೀ ಮಳೆ ಅಲರ್ಟ್: ಎಚ್ಚರ ಎಚ್ಚರ
NAMMUR EXPRESS NEWS
ಹೆಬ್ರಿ: ಒಂದೆರಡು ಗಂಟೆ ಸುರಿದ ಭಾರೀ ಮಳೆ ಉಡುಪಿ ಜಿಲ್ಲೆ ಹೆಬ್ರಿಯಲ್ಲಿ ಭಾರೀ ಅನಾಹುತ ಸೃಷ್ಟಿ ಮಾಡಿದೆ.
ಪಶ್ಚಿಮ ಘಟ್ಟದ ತಪ್ಪಲು ಉಡುಪಿಯ ಹೆಬ್ರಿಯಲ್ಲಿ ಮೇಘ ಸ್ಫೋಟಗೊಂಡಿದೆ. ಭಾನುವಾರ ಮಧ್ಯಾಹ್ನ 3.30 ರ ಸುಮಾರಿಗೆ ಭಾರೀ ಮಳೆ ಸುರಿದಿದೆ. ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಬಲ್ಲಾಡಿ ಎಂಬಲ್ಲಿ ಹಠಾತ್ ಜಲ ಪ್ರವಾಹ ಉಂಟಾಗಿದೆ. ಮನೆಗಳಿಗೆ ಹಾಗೂ ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಬಲ್ಲಾಡಿಯ ಈಶ್ವರನಗರ ಸಮೀಪದ ಬಮ್ಮಗುಂಡಿ ಹೊಳೆ ಉಕ್ಕಿ ಹರಿದಿದೆ.
ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಎರಡು ಕಾರು ಹಾಗೂ ಎರಡು ಬೈಕ್ಗಳು ಭಾರೀ ನೆರೆಯಿಂದ ಕೊಚ್ಚಿ ಹೋಗಿದೆ. ಮೊದಲು ಕೇರಳ ಮೂಲದ ವ್ಯಕ್ತಿಗೆ ಸೇರಿದ್ದ ರಬ್ಬರ್ ತೋಟ ಜಲಾವೃತಗೊಂಡಿದೆ. ಬಳಿಕ ಮನೆಗೆ ನುಗ್ಗಿ ಅಂಗಳದಲ್ಲಿ ನಿಲ್ಲಿಸಿದ್ದ ಆಕ್ಟೋ ಕಾರು ಹಾಗೂ ಎರಡು ಬೈಕ್ ನೀರು ಪಾಲಾಗಿದೆ. ಹೊಸಕಂಬೃ ಕೃಷ್ಣ ಪೂಜಾರಿ ಎಂಬವರ ಮನೆಯಲ್ಲಿ ನಿಲ್ಲಿಸಿದ್ದ ಓಮ್ಮಿ ಕಾರು ನೀರುಪಾಲಾಗಿದೆ. ಕಬ್ಬಿನಾಲೆ ಭಾಗದ ಪರ್ವತ ಸಾಲಿನಲ್ಲಿ ಮೇಘ ಸ್ಫೋಟವಾಗಿ ಈ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ವಿಪತ್ತು ನಿರ್ವಹಣಾ ತಂಡಗಳಿಂದ ರಕ್ಷಣಾ ಕಾರ್ಯಾಚರಣೆ ನಡೆದಿದೆ.
ಕಬ್ಬಿನಾಲೆ ಭಾಗದ ಪರ್ವತ ಸಾಲಿನಲ್ಲಿ ಮೇಘ ಸ್ಫೋಟವಾಗಿ ಈ ಸೃಷ್ಟಿಯಾಗಿದ್ದು,ಜೀವಮಾನದಲ್ಲಿ ಭೀಕರ ಪ್ರವಾಹ ಇಂತಹ ಭೀಕರ ಪ್ರವಾಹ ನಾವು ನೋಡಿಲ್ಲವೆಂದು ಹಿರಿಯ ನಾಗರಿಕರು ಆತಂಕ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಅನೇಕ ಕಡೆ ಸಾವು ನೋವು
ವಿಜಯನಗರ: ಸಿಡಿಲು ಬಡಿದು ಇಬ್ಬರು ರೈತರು ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನ ಹಳ್ಳಿ ತಾಲೂಕಿನ ದಶಮಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಬಣಕಾರ್ ನಾರಪ್ಪ (58), ಬಣಕಾರ್ ಪ್ರಶಾಂತ್ (40) ಮೃತ ದುರ್ದೈವಿ. ಹಗರಿಬೊಮ್ಮನಹಳ್ಳಿ ತಹಸೀಲ್ದಾರ್ ಕವಿತಾ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೊಲದಲ್ಲಿ ಕೆಲಸ ಮಾಡುವ ವೇಳೆ ಸಿಡಿಲು ಬಡಿದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಗರಿಬೊಮ್ಮನ ಹಳ್ಳಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಭಾರೀ ಮಳೆ ಅಲರ್ಟ್: ಎಚ್ಚರ ಎಚ್ಚರ
ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಮಲೆನಾಡಲ್ಲಿ ಮಳೆಯಾಗಲಿದೆ. ಭಾನುವಾರ ಎಲ್ಲೆಡೆ ಸುರಿದ ಭಾರೀ ಮಳೆ ಭಾರೀ ಅನಾಹುತ ಸೃಷ್ಟಿ ಮಾಡಿದೆ.