ಮಾಜಿ ಶಾಸಕ ಮೊಯ್ದಿನ್ ಬಾವಾ ಸಹೋದರನ ಮೃತದೇಹ ಪತ್ತೆ!
– ನದಿಯಲ್ಲಿ ಶವ ಪತ್ತೆ: ಕುಟುಂಬದ ಕಣ್ಣೀರು
– ಬ್ಲಾಕ್ಮೇಲ್ ಮಾಡುತ್ತಿದ್ದವರ ವಿರುದ್ಧ ಎಫ್ಐಆರ್
– ಮಹಿಳೆ ಬಳಸಿಕೊಂಡು ಬ್ಲಾಕ್ ಮೇಲ್ ಮಾಡಿದ್ರಾ?
NAMMUR EXPRESS NEWS
ಮಂಗಳೂರು: ಮಾಜಿ ಶಾಸಕ ಮೊಯ್ದಿನ್ ಬಾವಾ ಸಹೋದರನ ಮೃತದೇಹ ಪತ್ತೆಯಾಗಿದೆ. ಇತ್ತ ಮುಲ್ತಾಜ್ ಅಲಿಗೆ ಬ್ಲಾಕ್ಮೇಲ್ ಮಾಡುತ್ತಿದ್ದವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಮಾಜಿ ಶಾಸಕ ಮೊಯ್ದಿನ್ ಬಾವಾ ಸಹೋದರ ಮುಲ್ತಾಜ್ ಅಲಿ (52) ಎಂಬುವವರು ಸಾಯುವುದಾಗಿ ಕುಟುಂಬಸ್ಥರಿಗೆ ಮಸೇಜ್ ಕಳಿಸಿ ಮಂಗಳೂರು ಹೊರವಲಯದ ಕೂಳೂರು ಬ್ರಿಡ್ಜ್ನಲ್ಲಿ ಕಾರು ನಿಲ್ಲಿಸಿ ನಾಪತ್ತೆ ಆಗಿದ್ದರು. ಇದೀಗ ಇಪ್ಪೆತ್ತೆಂಟು ಗಂಟೆಗಳ ಸತತ ಕಾರ್ಯಾಚರಣೆ ಬಳಿಕ ಮುಲ್ತಾಜ್ ಅವರ ಮೃತದೇಹ ಸಿಕ್ಕಿದೆ. ತಣ್ಣೀರುಬಾವಿ ಮುಳುಗುಗಾರರು ಮೃತದೇಹ ಪತ್ತೆ ಮಾಡಿ ಹೊರತೆಗೆದಿದ್ದಾರೆ. ಮೃತದೇಹ ಕಂಡು ಮಾಜಿ ಶಾಸಕ ಮೊಯಿದ್ದೀನ್ ಬಾವ ಗೋಳಾಡಿದರು.
ಏನಾಗಿತ್ತು?
ಭಾನುವಾರ ಬೆಳಗಿನ ಜಾವ ಮೂರು ಗಂಟೆಗೆ ಮನೆಯಿಂದ ಹೊರಟ್ಟಿದ್ದ ಮುಲ್ತಾಜ್ ಆಲಿ, ಬೆಳಗ್ಗೆ 5 ಗಂಟೆಗೆ ಕೂಳೂರು ಸೇತುವೆ ಮೇಲೆ ಡ್ಯಾಮೇಜ್ ಆದ ಸ್ಥಿತಿಯಲ್ಲಿ ಬಿಎಂಡಬ್ಲ್ಯೂಕಾರು ಪತ್ತೆಯಾಗಿತ್ತು. ಬಳಿಕ ದಿನವಿಡೀ ಹುಡುಕಿದರೂ ಮುಮ್ರಾಜ್ ಆಲಿ ಸುಳಿವು ಸಿಕ್ಕಿರಲಿಲ್ಲ. ಹೀಗಾಗಿ ಸೋಮವಾರ ಮತ್ತೆ ನದಿಯಲ್ಲಿ ಶೋಧ ಕಾರ್ಯ ಆರಂಭಿಸಲಾಗಿತ್ತು.
ಸಹೋದರನ ನೆನೆದು ಕಣ್ಣೀರು!
ಸಹೋದರನನ್ನು ನೆನೆದು ಮಾಜಿ ಶಾಸಕ ಮೋಹಿಯುದ್ದೀನ್ ಬಾವ ಕಣ್ಣೀರು ಹಾಕಿದರು. ಬ್ಲ್ಯಾಕ್ ಮೇಲ್ನಿಂದಲೇ ನನ್ನ ಸಹೋದರ ಈ ನಿರ್ಧಾರಕ್ಕೆ ಬಂದಿದ್ದಾನೆ. ನನ್ನ ಸಹೋದರ ಶೈಕ್ಷಣಿಕವಾಗಿ, ಧಾರ್ಮಿಕ ಕಾರ್ಯಗಳಿಂದ ಹೆಸರು ಗಳಿಸಿದ್ದ. ಆತನ ಪ್ರಚಾರವನ್ನು ಸಹಿಸದ ಕೆಲವು ಶಕ್ತಿಗಳು ಕುತಂತ್ರ ಮಾಡಿದ್ದಾರೆ. ಈ ಕಾರಣದಿಂದಲೇ ನನ್ನ ಸಹೋದರ ಈ ನಿರ್ಧಾರಕ್ಕೆ ಬಂದಿದ್ದಾನೆ. ಆತನ ಫೋನ್ ಹಾಗೂ ವಾಟ್ಸ್ ಅಪ್ ಪರಿಶೀಲನೆ ಮಾಡುತ್ತಿದ್ದಾರೆ. ನನ್ನ ಸಹೋದರನ ಈ ಸ್ಥಿತಿಗೆ ಕಾರಣರಾದವರಿಗೆ ತಕ್ಕ ಶಿಕ್ಷೆಯಾಗಲಿ. ರಾಜಕೀಯ ರಹಿತವಾಗಿ ಕೆಲಸ ಮಾಡಿದ್ದ ಆತನನ್ನು ಪ್ರಚೋದನೆ ನೀಡಿ ಮುಗಿಸಿದ್ದಾರೆ ಎಂದು ಕಣ್ಣೀರು ಹಾಕಿದರು.
ಬ್ಲಾಕ್ಮೇಲ್ ಮಾಡುತ್ತಿದ್ದ ಮಹಿಳೆ ಗ್ಯಾಂಗ್ ಅರೆಸ್ಟ್!
ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಲ್ತಾಜ್ ಆಲಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿ ಆರು ಮಂದಿಯ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮುಲ್ತಾಜ್ ಆಲಿ ಸಹೋದರ ಹೈದರ್ ದೂರಿನ ಮೇರೆಗೆ ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮಹಿಳೆಯನ್ನು ಬಳಸಿಕೊಂಡು ದುರುದ್ದೇಶದಿಂದ ಆತ್ಮಹತ್ಯೆ ಪ್ರಚೋದನೆ ದೂರು ನೀಡಿರುವ ಸಂಬಂಧ ಮಹಿಳೆ ರೆಹಮತ್ ಹಾಗೂ ಅಬ್ದುಲ್ ಸತ್ತಾರ್, ಶಾಫಿ, ಮುಸ್ತಾಫ, ಶೋಯೆಬ್ ಹಾಗೂ ಸಿರಾಜ್ ವಿರುದ್ಧ ದೂರು ದಾಖಲಾಗಿದೆ. ಸಹೋದರ ಮುಲ್ತಾಜ್ ಆಲಿ ಸಮಾಜದ ಗೌರವಾನ್ವಿತ ವ್ಯಕ್ತಿಯಾಗಿದ್ದಾರೆ. ಅವರ ಗೌರವ ಹಾಳು ಮಾಡಲು ಮಹಿಳೆಯ ಬಳಸಿಕೊಂಡು ಷಡ್ಯಂತ್ರ ಮಾಡಿರುವ ಆರೋಪವಿದೆ. ರೆಹಮತ್ ಅಕ್ರಮ ಸಂಬಂಧ ಇದೆ ಎಂದು ಸುಳ್ಳು ಪ್ರಚಾರದ ಬೆದರಿಕೆ ಹಾಕಿದ್ದಾರೆ. 2024ರ ಜುಲೈನಿಂದ ಈವರೆಗೆ 50 ಲಕ್ಷ ವಸೂಲಿ ಮಾಡಿದ್ದಾರೆ. 25 ಲಕ್ಷ ಹಣವನ್ನು ಚೆಕ್ ಮೂಲಕವೂ ಮಹಿಳೆ ಪಡೆದಿದ್ದಾಳೆ ಎನ್ನಲಾಗಿದೆ.